Numbers · chapter 1 · verse 32
Numbers 1:32 in Kannada
ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
Yosephana makkalaada ephraayaam makkalu, avara gotragala prakaaravaagiyoo tandegala maneya prakaaravaagiyoo vanshaavaliya hesarugala lekkadinda ippattu varusha modalu gondu melpatta praayavullavaru yuddhakke horadalu shaktaraadavarellaru
Numbers 1:32 in English
- King James Version (KJV)
- Of the children of Joseph, [namely], of the children of Ephraim, by their generations, after their families, by the house of their fathers, according to the number of the names, from twenty years old and upward, all that were able to go forth to war;
- World English Bible (WEB)
- Of the children of Joseph: of the children of Ephraim, their generations, by their families, by their fathers’ houses, according to the number of the names, from twenty years old and upward, all who were able to go out to war:
- American Standard Version (ASV)
- Of the children of Joseph, [namely], of the children of Ephraim, their generations, by their families, by their fathers’ houses, according to the number of the names, from twenty years old and upward, all that were able to go forth to war;
- Bible in Basic English (BBE)
- The generations of the sons of Joseph were numbered by their families and their fathers' houses, every male of twenty years old and over who was able to go to war;
- Darby Translation (DBY)
- Of the sons of Joseph: of the children of Ephraim: their generations, after their families, according to their fathers' houses, by the number of the names, from twenty years old and upward, all that went forth to military service:
- Webster's Bible (WBS)
- Of the children of Joseph, [namely] , of the children of Ephraim, by their generations, after their families, by the house of their fathers, according to the number of the names, from twenty years old and upward, all that were able to go forth to war;
- Young's Literal Translation (YLT)
- Of the sons of Joseph — of the sons of Ephraim — their births, by their families, by the house of their fathers, in the number of names, from a son of twenty years and upward, every one going out to the host —
Read in context
- 30ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು
- 31ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
- 32ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
- 33ಎಫ್ರಾಯಾಮ್ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.
- 34ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
Cross references
- Numbers 26:35–37 ಅರಣ್ಯಕಾಂಡ 26:35–37ಕುಟುಂಬಗಳ ಪ್ರಕಾರ ಎಫ್ರಾಯಾಮನ ಕುಮಾ ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನ್ಯರ ಕುಟುಂಬ; ಶೂತೆಲಹನ ಕುಮಾರರು ಏರಾನನಿಂದ ಏರಾನ್ಯರ ಕುಟುಂಬ. ಎಫ್ರಾಯಾಮನ ಕುಮಾರರ ಕುಟುಂಬಗಳು ಇವೇ; ಅವರಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಐನೂರು ಮಂದಿ. ಕುಟುಂಬ ಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.
- Deuteronomy 33:17 ಧರ್ಮೋಪದೇಶಕಾಂಡ 33:17ಅವನ ಚೊಚ್ಚಲ ಹೋರಿಯಂತೆ ಅವನಿಗೆ ಪ್ರಭೆ ಇರುವದು; ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇವೆ. ಅವುಗಳಿಂದ ಜನಗಳನ್ನು ಒಟ್ಟಿಗೆ ಭೂಮಿಯ ಅಂತ್ಯಗಳ ವರೆಗೆ ನೂಕುತ್ತಾನೆ. ಇವು ಎಫ್ರಾಯಾಮನ ಹತ್ತು ಸಾವಿರಗಳೂ ಇವು ಮನಸ್ಸೆಯ ಸಹಸ್ರವೂ ಆಗಿವೆ ಎಂದು ಹೇಳಿದನು.
- Numbers 2:18–19 ಅರಣ್ಯಕಾಂಡ 2:18–19ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು.
- Genesis 49:22–26 ಆದಿಕಾಂಡ 49:22–26ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ. ಬಿಲ್ಲುಗಾರರು ಅವನನ್ನು ಬಹಳವಾಗಿ ದುಃಖ ಪಡಿಸಿ ಬಾಣಗಳನ್ನು ಎಸೆದು ಅವನನ್ನು ಹಗೆ ಮಾಡುವರು. ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ, ಅಂದರೆ ನಿನಗೆ ಸಹಾಯಮಾಡುವ ನಿನ್ನ ತಂದೆಯ ದೇವರಿಂದ, ಮೇಲಿರುವ ಪರಲೋಕದ ಆಶೀರ್ವಾದಗಳೊಂದಿಗೂ ಕೆಳಗಿರುವ ಅಗಾಧದ ಆಶೀರ್ವಾದಗಳೊಂದಿಗೂ ಮೊಲೆಗಳ ಮತ್ತು ಗರ್ಭದ ಆಶೀರ್ವಾದಗಳೊಂದಿಗೂ ನಿನ್ನನ್ನು ಆಶೀರ್ವದಿಸುವ ಸರ್ವಶಕ್ತನಿಂದ ಬಲಿಷ್ಠನಾಗಿ ಮಾಡಲ್ಪಟ್ಟಿವೆ. (ಅಲ್ಲಿಂದ ಆತನು ಇಸ್ರಾಯೇಲನ ಕುರುಬನೂ ಬಂಡೆಯೂ ಆಗಿದ್ದಾನೆ.) ನಿನ್ನ ತಂದೆಯ ಆಶೀರ್ವಾದಗಳು ನನ್ನ ಹೆತ್ತವರ ಆಶೀರ್ವಾದಗಳನ್ನು ನಿತ್ಯ ಗುಡ್ಡಗಳ ಮೇರೆಗಿಂತ ವಿಾರಿವೆ. ಯೋಸೇಫನ ತಲೆಯ ಮೇಲೆಯೂ ತನ್ನ ಸಹೋದರರಿಂದ ಪ್ರತ್ಯೇಕ ಮಾಡಲ್ಪಟ್ಟವನ ತಲೆಯ ಮೇಲೆಯೂ ಅವು ಬರಲಿ.
- Genesis 30:24 ಆದಿಕಾಂಡ 30:24ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
- Genesis 39:1–23 ಆದಿಕಾಂಡ 39:1–23ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು. ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು. ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು. ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು. ಹೀಗಿರುವದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ ತಾನು ತಿನ್ನುವ ರೊಟ್ಟಿಯ ವಿಷಯದಲ್ಲಿ ಹೊರತು ಬೇರೆ ಯಾವದರ ವಿಷಯದಲ್ಲೂ ಚಿಂತಿಸಲಿಲ್ಲ. ಯೋಸೇಫನು ಸುರೂಪಿಯೂ ಸೌಂದರ್ಯವಂತನೂ ಆಗಿದ್ದನು. ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ. ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು. ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು. ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ. ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು. ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು ತನ್ನ ಮನೆಯ ಮನುಷ್ಯರನ್ನು ಕರೆದು ಅವರಿಗೆ--ನೋಡಿರಿ, ಅವನು (ಗಂಡಸು) ನಮ್ಮನ್ನು ಹಾಸ್ಯಮಾಡುವದಕ್ಕೆ ಇಬ್ರಿಯನನ್ನು ನಮ್ಮಲ್ಲಿಗೆ ತಂದಿದ್ದಾನೆ. ಅವನು ನನ್ನ ಸಂಗಡ ಮಲಗುವದಕ್ಕೆ ನನ್ನ ಬಳಿಗೆ ಬಂದನು. ಆಗ ನಾನು ದೊಡ್ಡ ಶಬ್ದದಿಂದ ಕೂಗಿದೆನು. ನಾನು ನನ್ನ ಸ್ವರವನ್ನೆತ್ತಿ ಕೂಗಿದ್ದನ್ನು ಅವನು ಕೇಳಿ ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು ಅಂದಳು. ತನ್ನ ಯಜಮಾನನು ಮನೆಗೆ ಬರುವ ವರೆಗೆ ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು. ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುವವ ಳಾಗಿ--ನೀನು ನಮ್ಮ ಬಳಿಗೆ ತಂದ ಇಬ್ರಿಯ ಸೇವಕನು ನನ್ನನ್ನು ಹಾಸ್ಯಮಾಡುವದಕ್ಕೆ ನನ್ನ ಬಳಿಗೆ ಬಂದನು; ಆದರೆ ನಾನು ನನ್ನ ಸ್ವರವನ್ನೆತ್ತಿ ಕೂಗಿಕೊಂಡಾಗ ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು ಅಂದಳು. ನಿನ್ನ ಸೇವಕನು ಹೀಗೆ ನನಗೆ ಮಾಡಿದನೆಂಬದಾಗಿ ತನ್ನ ಹೆಂಡತಿ ಹೇಳಿದ್ದನ್ನು ಕೇಳಿ ಅವನ ಕೋಪವು ಉರಿಯಿತು. ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು. ಆದರೆ ಕರ್ತನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯಿಟ್ಟು ಸೆರೆಮನೆಯ ಯಜಮಾನನು ಅವನ ಮೇಲೆ ದಯೆತೋರಿಸುವಂತೆ ಮಾಡಿದನು. ಆದದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅವರು ಅಲ್ಲಿ ಮಾಡ ಬೇಕಾದವುಗಳೆನ್ನೆಲ್ಲಾ ಅವನೇ ಮಾಡಿಸುವವನಾ ದನು.ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು. ಕರ್ತನು ಅವನ ಸಂಗಡ ಇದ್ದದರಿಂದಲೂ ಅವನು ಮಾಡುವದನ್ನು ಕರ್ತನು ಅಭಿವೃದ್ಧಿ ಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವದಕ್ಕೂ ಚಿಂತೆಮಾಡದೆ ಇದ್ದನು.
- Genesis 46:20 ಆದಿಕಾಂಡ 46:20ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
- Genesis 48:1–22 ಆದಿಕಾಂಡ 48:1–22ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು. ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು. ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು. ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು. ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು. ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ. ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು. ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು. ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು. ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು. ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು. ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು. ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Genesis 37:1–36 ಆದಿಕಾಂಡ 37:1–36ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸ ವಾಗಿದ್ದನು. ಇವು ಯಾಕೋಬನ ವಂಶಾವಳಿಗಳು: ಯೋಸೇಫನು ಹದಿನೇಳು ವರುಷದವನಾಗಿದ್ದಾಗ ತನ್ನ ಸಹೋದರರ ಸಂಗಡ ಮಂದೆಯನ್ನು ಮೇಯಿಸು ತ್ತಿದ್ದನು. ಆ ಹುಡುಗನು ತನ್ನ ತಂದೆಯ ಹೆಂಡತಿ ಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಕುಮಾರರ ಸಂಗಡ ಇದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು. ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು. ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು. ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು. ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ. ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು. ಆಗ ಅವನ ಸಹೋದರರು ಅವನಿಗೆ--ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವಿಯೋ ಇಲ್ಲವೆ ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ ಎಂದು ಹೇಳಿ ಅವನ ಕನಸುಗಳಿಗಾಗಿಯೂ ಅವನ ಮಾತುಗಳಿಗಾಗಿಯೂ ಅವನನ್ನು ಮತ್ತಷ್ಟು ಹಗೆ ಮಾಡಿದರು. ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ--ಇಗೋ, ಇನ್ನೊಂದು ಕನಸನ್ನು ಕಂಡಿದ್ದೇನೆ; ಇಗೋ, ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು ಅಂದನು. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು. ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು. ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು. ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು. ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು. ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ, ಅವನು ಹೊಲದಲ್ಲಿ ಅಲೆಯುತ್ತಿದ್ದನು. ಆ ಮನುಷ್ಯನು ಅವನಿಗೆ--ನೀನು ಏನು ಹುಡುಕುತ್ತೀ ಎಂದು ಕೇಳಿದನು. ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು. ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು. ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು. ಅವರು--ಇಗೋ, ಈ ಕನಸಿನವನು ಬರುತ್ತಿದ್ದಾನೆ; ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಆದರೆ ರೂಬೇನನು ಅದನ್ನು ಕೇಳಿ ಅವನನ್ನು ಅವರ ಕೈಗಳಿಂದ ತಪ್ಪಿಸಿ--ಅವನನ್ನು ಕೊಲ್ಲುವದು ಬೇಡ ಅಂದನು. ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ ತನ್ನ ತಂದೆಯ ಬಳಿಗೆ ತಿರಿಗಿ ಕರೆದುಕೊಂಡು ಹೋಗುವ ಹಾಗೆ ಅವರಿಗೆ--ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ತಗ್ಗಿನಲ್ಲಿ ಅವನನ್ನು ಹಾಕಿರಿ; ಆದರೆ ಅವನ ಮೇಲೆ ಕೈಹಾಕಬೇಡಿರಿ ಅಂದನು. ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ ಅವರು ಯೋಸೇಫನ ಮೇಲಿದ್ದ ಬಣ್ಣದ ಅಂಗಿಯನ್ನು ತೆಗೆದರು. ಅವನನ್ನು ತಕ್ಕೊಂಡು ತಗ್ಗಿನಲ್ಲಿ ಹಾಕಿದರು; ಆ ತಗ್ಗು ನೀರಿಲ್ಲದೆ ಬರಿದಾಗಿತ್ತು. ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು. ಆಗ ಯೆಹೂದನು ತನ್ನ ಸಹೋದರರಿಗೆ--ನಾವು ನಮ್ಮ ಸಹೋದರನನ್ನು ಕೊಂದುಹಾಕಿ ಅವನ ರಕ್ತವನ್ನು ಮರೆಮಾಡುವದರಲ್ಲಿ ಲಾಭವೇನು? ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು. ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು. ರೂಬೇನನು ತಗ್ಗಿನ ಬಳಿಗೆ ತಿರಿಗಿ ಬಂದಾಗ ಇಗೋ, ಯೋಸೇಫನು ತಗ್ಗಿನಲ್ಲಿ ಇಲ್ಲದ್ದರಿಂದ ತನ್ನ ವಸ್ತ್ರಗಳನ್ನು ಹರಿದು ಕೊಂಡನು. ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು. ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು ಮೇಕೆಯ ಮರಿಯನ್ನು ಕೊಯ್ದು ಆ ಅಂಗಿಯನ್ನು ರಕ್ತದಲ್ಲಿ ಅದ್ದಿ ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು. ಯಾಕೋಬನು ಅದನ್ನು ಗುರುತು ಹಿಡಿದು--ಇದು ನನ್ನ ಮಗನ ಅಂಗಿ ಹೌದು; ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು; ಯೋಸೇಫನು ನಿಸ್ಸಂದೇಹವಾಗಿ ತುಂಡು ತುಂಡಾಗಿ ಮಾಡಲ್ಪಟ್ಟಿದ್ದಾನೆ ಅಂದನು. ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು. ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು. ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
Original words (Hebrew)
- children · H1121בֵּן bên
- Joseph · H3130יוֹסֵף Yôwçêph
- children · H1121בֵּן bên
- Ephraim · H669אֶפְרַיִם ʼEphrayim
- generations · H8435תּוֹלְדָה tôwlᵉdâh
- families · H4940מִשְׁפָּחָה mishpâchâh
- house · H1004בַּיִת bayith
- fathers · H1אָב ʼâb
- number · H4557מִסְפָּר miçpâr
- names · H8034שֵׁם shêm
- twenty · H6242עֶשְׂרִים ʻesrîym
- years · H8141שָׁנֶה shâneh
- old · H1121בֵּן bên
- upward · H4605מַעַל maʻal
- forth · H3318יָצָא yâtsâʼ
- war · H6635צָבָא tsâbâʼ