Numbers · chapter 1 · verse 50
Numbers 1:50 in Kannada
ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
Aadare neenu leviyarannu saakshiya gudaara kkoskaravoo adara ellaa vastugaligoskaravoo adakke bekaada ellavugaligoskaravoo nemisu. Avaru gudaaravannoo adara ellaa vastugalannoo hottukolluvaru, idara sevemaadi gudaarada suttamuttaloo ilidukollabeku.
Numbers 1:50 in English
- King James Version (KJV)
- But thou shalt appoint the Levites over the tabernacle of testimony, and over all the vessels thereof, and over all things that [belong] to it: they shall bear the tabernacle, and all the vessels thereof; and they shall minister unto it, and shall encamp round about the tabernacle.
- World English Bible (WEB)
- but appoint the Levites over the Tabernacle of the Testimony, and over all its furnishings, and over all that belongs to it. They shall carry the tabernacle and all its furnishings; and they shall take care of it, and shall encamp around it.
- American Standard Version (ASV)
- but appoint thou the Levites over the tabernacle of the testimony, and over all the furniture thereof, and over all that belongeth to it: they shall bear the tabernacle, and all the furniture thereof; and they shall minister unto it, and shall encamp round about the tabernacle.
- Bible in Basic English (BBE)
- But to them you are to give the care of the Tent of meeting with its vessels and everything in it: they are to take up the Tent, and be responsible for everything to do with it, and put up their tents round it.
- Darby Translation (DBY)
- But thou, appoint the Levites over the tabernacle of testimony, and over all the vessels thereof, and over all things that belong to it: they shall bear the tabernacle, and all its vessels; and they shall serve it, and round about the tabernacle shall they encamp;
- Webster's Bible (WBS)
- But thou shalt appoint the Levites over the tabernacle of testimony, and over all its vessels, and over all things that [belong] to it: they shall bear the tabernacle, and all its vessels, and they shall minister to it, and shall encamp around the tabernacle.
- Young's Literal Translation (YLT)
- and thou, appoint the Levites over the tabernacle of the testimony, and over all its vessels, and over all that it hath; they bear the tabernacle, and all its vessels, and they serve it; and round about the tabernacle they encamp.
Read in context
- 48ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--
- 49ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
- 50ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
- 51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- 52ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
Cross references
- Exodus 38:21 ವಿಮೋಚನಕಾಂಡ 38:21ಮೋಶೆಯ ಆಜ್ಞೆಯ ಮೇರೆಗೆ ಲೇವಿಯ ಸೇವೆಗಾಗಿ ಯಾಜಕನಾದ ಆರೋನನ ಮಗ ಈತಾಮಾರನ ಕೈಗೆ ಒಪ್ಪಿಸಿದ ಸಾಕ್ಷಿ ಗುಡಾರವನ್ನೊಳಗೊಂಡ ಗುಡಾ ರವನ್ನು ನಿರ್ಮಿಸಲು ಮಾಡಬೇಕಾದ ಒಟ್ಟು ಏರ್ಪಾಡುಗಳು ಇವೇ.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Exodus 31:18 ವಿಮೋಚನಕಾಂಡ 31:18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- 1 Chronicles 23:1–32 1 ಪೂರ್ವಕಾಲವೃತ್ತಾಂತ 23:1–32ಹೀಗೆ ದಾವೀದನು ಮುದುಕನಾಗಿಯೂ ದಿವಸಗಳು ತುಂಬಿದವನಾಗಿಯೂ ಇರು ವಾಗ ತನ್ನ ಮಗನಾದ ಸೊಲೊಮೋನನನ್ನು ಇಸ್ರಾ ಯೇಲಿನ ಮೇಲೆ ಅರಸನನ್ನಾಗಿ ಮಾಡಿದನು. ಇದ ಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರ ಮಾಡಿದನು. ಲೇವಿಯರು ಮೂವತ್ತು ವರುಷ ಪ್ರಾಯದವರು ಮೊದಲುಗೊಂಡು ಲೆಕ್ಕಿಸಲ್ಪಟ್ಟಿದ್ದರು. ಅವರ ಪುರುಷರ ಲೆಕ್ಕವು ತಲೆ ತಲೆಯ ಪ್ರಕಾರ ಮೂವತ್ತೆಂಟು ಸಾವಿರ ವಾಗಿತ್ತು. ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಕರ್ತನ ಮನೆಯ ಕೆಲಸವನ್ನು ನಡಿಸುವವರಾಗಿದ್ದರು; ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿ ಪತಿಗಳೂ ಆಗಿದ್ದರು. ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು. ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು. ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು -- ಮುಖ್ಯಸ್ಥರಾದ ಯೆಹೀಯೇಲನು ಜೇತಾಮನು ಯೋವೇಲನು ಎಂಬ ಮೂರು ಮಂದಿಯು. ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು. ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು. ಶಿಮ್ಮನ ಈ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು. ಕೆಹಾತನ ಕುಮಾರರು--ಅಮ್ರಾಮನು, ಇಚ್ಹಾ ರನು, ಹೆಬ್ರೋನನು, ಉಜ್ಜಿಯೇಲನು ಎಂಬ ಈ ನಾಲ್ಕು ಮಂದಿಯು. ಅಮ್ರಾಮನ ಕುಮಾರರು --ಆರೋನನು ಮೋಶೆಯು; ಆರೋನನು ಯುಗ ಯುಗಾಂತರಕ್ಕೂ ಕರ್ತನ ಮುಂದೆ ಧೂಪ ಸುಡು ವದಕ್ಕೂ ಆತನಿಗೆ ಸೇವೆಮಾಡುವದಕ್ಕೂ ಆತನ ಹೆಸರಿನಲ್ಲಿ ಆಶೀರ್ವದಿಸುವದಕ್ಕೂ ತಾನೂ ತನ್ನ ಕುಮಾರರೂ ಯುಗಯುಗಾಂತರಗಳಿಗೂ ಅತಿ ಪರಿ ಶುದ್ಧವಾದವುಗಳನ್ನು ಪ್ರತಿಷ್ಠೆಮಾಡುವದಕ್ಕೂ ಪ್ರತ್ಯೇ ಕಿಸಲ್ಪಟ್ಟನು. ದೇವರ ಮನುಷ್ಯನಾದ ಮೋಶೆಯ ಕುಮಾರರು ಲೇವಿಯ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟಿದ್ದರು. ಮೋಶೆಯ ಕುಮಾರರು--ಗೇರ್ಷೋಮನು ಎಲೀ ಯೆಜೆರನು. ಗೇರ್ಷೋಮನ ಕುಮಾರರಲ್ಲಿ ಶೆಬೂ ವೇಲನು ಮುಖ್ಯಸ್ಥನಾಗಿದ್ದನು. ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು. ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು. ಹೆಬ್ರೋನನ ಕುಮಾರರಲ್ಲಿ ಯೆರೀಯ ಮೊದಲನೆಯವನು, ಅಮರ್ಯನು ಎರ ಡನೆಯವನು, ಯಹಜೀಯೇಲನು ಮೂರನೆಯ ವನು, ಯೆಕಮ್ಮಾಮನು ನಾಲ್ಕನೆಯವನು. ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು. ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು; ಎಲ್ಲಾಜಾರ್ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು. ಮೂಷೀಯ ಕುಮಾರರು-- ಮಹ್ಲೀಯು ಏದೆರ್ ಯೆರೇಮೋತ್ ಈ ಮೂರು ಮಂದಿ. ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಕುಮಾರರಾಗಿದ್ದರು; ಇವರು ತಮ್ಮ ಹೆಸರು ಗಳಿಂದಲೂ ತಮ್ಮ ತಲೆಗಳಿಂದಲೂ ಎಣಿಸಲ್ಪಟ್ಟಿದ್ದ ತಮ್ಮ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು; ಇಪ್ಪತ್ತು ವರುಷ ಪ್ರಾಯದವರು ಮೊದಲುಗೊಂಡು ಕರ್ತನ ಮನೆಯ ಸೇವೆಗೋಸ್ಕರ ಕೆಲಸ ಮಾಡಿದರು. ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ ಲೇವಿಯರನ್ನು ಕುರಿತು ಅವರು ಗುಡಾರವನ್ನೂ ಅದರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು. ದಾವೀದನ ಕಡೇಮಾತುಗಳ ಪ್ರಕಾರ ಲೇವಿಯರು ಇಪ್ಪತ್ತುವರುಷ ಮೊದಲುಗೊಂಡು ಅದಕ್ಕೆ ಮೇಲ್ಪಟ್ಟ ಪ್ರಾಯದವರು ಲೆಕ್ಕಿಸಲ್ಪಟ್ಟಿದ್ದರು. ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ ಕರ್ತನ ಮಂದಿರದ ಸೇವೆಯ ಕಾರ್ಯದಲ್ಲಿ ಸಮ್ಮುಖದ ರೊಟ್ಟಿ ಅರ್ಪಣೆ ಬಲಿಯ ನಯವಾದ ಹಿಟ್ಟು ಹುಳಿ ಇಲ್ಲದ ರೊಟ್ಟಿ ಬಾಂಡ್ಲಿಯಲ್ಲಿ ಮಾಡಿದ್ದ ಎಣ್ಣೆಯಲ್ಲಿ ಕರಿದಿದ್ದಕ್ಕೋಸ್ಕರವೂ ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳಿಗೆ ನೇಮಕವಾಗಿತ್ತು. ಇದಲ್ಲದೆ ಉದಯಕಾಲದ ಲ್ಲಿಯೂ ಸಾಯಂಕಾಲದಲ್ಲಿಯೂ ನಿಂತು ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಕರ್ತನ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು. ಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Nehemiah 13:10–13 ನೆಹೆಮೀಯ 13:10–13ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು. ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು. ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು. ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Exodus 32:26–29 ವಿಮೋಚನಕಾಂಡ 32:26–29ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು. ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- Numbers 4:25–33 ಅರಣ್ಯಕಾಂಡ 4:25–33ಅವರು ಗುಡಾರದ ತೆರೆಗಳನ್ನೂ ಸಭೆಯ ಗುಡಾರವನ್ನೂ ಅದರ ಹೊದಿಕೆ ಯನ್ನೂ ಅದರ ಮೇಲಿರುವ ಕಡಲು ಹಂದಿಯ ಚರ್ಮದ ಹೊದಿಕೆಯನ್ನೂ ಸಭೆಯ ಗುಡಾರದ ಬಾಗಲಿನ ತೆರೆಯನ್ನೂ ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಲಿನ ತೆರೆಯನ್ನೂ ಅವುಗಳ ಹಗ್ಗಗ ಳನ್ನೂ ಅವುಗಳ ಸೇವೆಯ ಎಲ್ಲಾ ವಸ್ತುಗಳನ್ನೂ ಹೊತ್ತು ಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು. ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು. ಗೇರ್ಷೋನನ ಕುಮಾರರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯು ಇದೇ: ಯಾಜಕ ನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವದು ಅವರಿಗೆ ಕೊಡಲ್ಪಟ್ಟ ಅಪ್ಪಣೆಯಾಗಿದೆ. ಮೆರಾರೀಯ ಕುಮಾರರನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ಎಣಿಸಬೇಕು. ಮೂವತ್ತು ವರುಷವು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಅಂದರೆ ಐವತ್ತು ವರುಷಗಳ ವರೆಗೆ ಸಭೆಯ ಗುಡಾರದ ಸೇವೆಮಾಡುವ ದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು. ಸಭೆಯ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯು ಏನಂದರೆ, ಗುಡಾರದ ಹಲಿಗೆಗಳೂ ಅದರ ಅಡ್ಡ ತೊಲೆಗಳೂ ಕಂಬಗಳೂ ಕುಣಿಕೆಗಳೂ. ಸುತ್ತಲಿರುವ ಅಂಗಳದ ಕಂಬಗಳೂ ಕುಣಿಕೆಗಳೂ ಗೂಟಗಳೂ ಅವುಗಳ ಹಗ್ಗಗಳೂ ಎಲ್ಲಾ ವಸ್ತುಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವದಕ್ಕೆ ಕೊಡಲ್ಪಟ್ಟ ಅಪ್ಪಣೆಯ ವಸ್ತುಗಳನ್ನು ನೀವು ಹೆಸರೆಸರಾಗಿ ಎಣಿಸ ಬೇಕು. ಮೆರಾರೀಯ ಕುಮಾರರ ಕುಟುಂಬಗಳ ಸೇವೆಯೂ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೇ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.
- Numbers 20:11 ಅರಣ್ಯಕಾಂಡ 20:11ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.
- Numbers 3:23–38 ಅರಣ್ಯಕಾಂಡ 3:23–38ಗೇರ್ಷೋನ್ಯರ ಕುಟುಂಬಗಳು ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳುಕೊಳ್ಳಬೇಕು. ಲಾಯೇಲನ ಮಗನಾದ ಎಲ್ಯಾಸಾಫನು ಗೇರ್ಷೋನ್ಯರ ತಂದೆ ಮನೆಗೆ ಮುಖ್ಯಸ್ಥನು. ಸಭೆಯ ಗುಡಾರದಲ್ಲಿ ಗೇರ್ಷೋನನ ಕುಮಾರರು ಕಾಪಾಡಿಕೊಳ್ಳಬೇಕಾದವುಗಳು ಗುಡಾ ರವೂ ಅದರ ಹೊದಿಕೆಯೂ ಸಭೆಯ ಗುಡಾರದ ಬಾಗಲಿನ ತೆರೆಯೂ ಅಂಗಳದ ತೆರೆಗಳೂ ಗುಡಾರಕ್ಕೂ ಬಲಿಪೀಠಕ್ಕೂ ಸುತ್ತಲಿರುವ ಅಂಗಳದ ಪರದೆಯೂ ಅಂಗಳದ ಬಾಗಲಿನ ತೆರೆಯೂ ಅದರ ಸಮಸ್ತ ಸೇವೆಗೆ ಬೇಕಾದ ಹಗ್ಗಗಳೂ ಇವೆ. ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು. ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು. ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು. ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು. ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ. ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ. ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು. ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು. ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು. ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಗೂಟಗಳೂ ಹಗ್ಗಗಳೂ ಇವುಗಳೇ. ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Numbers 1:53 ಅರಣ್ಯಕಾಂಡ 1:53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Psalm 122:4 ಕೀರ್ತನೆಗಳು 122:4ಅಲ್ಲಿಗೆ ಗೋತ್ರಗಳು, ಕರ್ತನ ಗೋತ್ರಗಳು, ಇಸ್ರಾಯೇಲಿಗೆ ಸಾಕ್ಷಿಯಾಗಿ, ಕರ್ತನ ಹೆಸರನ್ನು ಕೊಂಡಾಡುವದಕ್ಕೆ ಹೋಗುತ್ತದೆ.
Original words (Hebrew)
- appoint · H6485פָּקַד pâqad
- Levites · H3881לֵוִיִּי Lêvîyîy
- tabernacle · H4908מִשְׁכָּן mishkân
- testimony · H5715עֵדוּת ʻêdûwth
- vessels · H3627כְּלִי kᵉlîy
- bear · H5375נָשָׂא nâsâʼ
- tabernacle · H4908מִשְׁכָּן mishkân
- vessels · H3627כְּלִי kᵉlîy
- minister · H8334שָׁרַת shârath
- encamp · H2583חָנָה chânâh
- about · H5439סָבִיב çâbîyb
- tabernacle · H4908מִשְׁכָּן mishkân