Numbers · chapter 10 · verse 21
Numbers 10:21 in Kannada
ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
Parishuddha sthalavannu horuva kehaatyaru horataru; ivaru baruvashtarolage avaru gudaaravannu nillisidaru.
Numbers 10:21 in English
- King James Version (KJV)
- And the Kohathites set forward, bearing the sanctuary: and [the other] did set up the tabernacle against they came.
- World English Bible (WEB)
- The Kohathites set forward, bearing the sanctuary. The others set up the tabernacle before they arrived.
- American Standard Version (ASV)
- And the Kohathites set forward, bearing the sanctuary: and [the others] did set up the tabernacle against their coming.
- Bible in Basic English (BBE)
- Then the Kohathites went forward with the holy place; the others put up the House ready for their coming.
- Darby Translation (DBY)
- And the Kohathites set forward bearing the sanctuary: and [the others] set up the tabernacle whilst they came.
- Webster's Bible (WBS)
- And the Kohathites moved forward, bearing the sanctuary: and [the other] set up the tabernacle against they came.
- Young's Literal Translation (YLT)
- And the Kohathites have journeyed, bearing the tabernacle, and the [others] have raised up the tabernacle until their coming in.
Read in context
- 19ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು.
- 20ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು.
- 21ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
- 22ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು.
- 23ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು.
Cross references
- Numbers 10:17 ಅರಣ್ಯಕಾಂಡ 10:17ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.
- Numbers 4:4–16 ಅರಣ್ಯಕಾಂಡ 4:4–16ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ. ಯಾಜಕನಾದ ಆರೋನನ ಮಗನಾದ ಎಲ್ಲಾಜಾ ರನ ಕೆಲಸ ಯಾವದಂದರೆ: ದೀಪದ ಎಣ್ಣೆಯೂ ಸುಗಂಧ ಧೂಪವೂ ನಿತ್ಯದ ಆಹಾರ ಸಮರ್ಪಣೆಯೂ ಅಭಿಷೇಕದ ತೈಲವೂ ಸಮಸ್ತಗುಡಾರವೂ ಅದರ ಲ್ಲಿರುವ ಸಕಲವೂ ಪರಿಶುದ್ಧ ಸ್ಥಳದಲ್ಲಿಯೂ ಅದರ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.
- Numbers 7:9 ಅರಣ್ಯಕಾಂಡ 7:9ಆದರೆ ಕೆಹಾತ್ಯರ ಕುಮಾರರಿಗೆ ಯಾವದನ್ನೂ ಕೊಡಲಿಲ್ಲ. ಅವರು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋಗುವದೇ ಪರಿಶುದ್ಧ ಸ್ಥಳದಲ್ಲಿ ಅವರಿಗೆ ಸಂಬಂಧಪಟ್ಟ ಸೇವೆಯಾಗಿತ್ತು.
- 1 Chronicles 15:2 1 ಪೂರ್ವಕಾಲವೃತ್ತಾಂತ 15:2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
- Numbers 4:20 ಅರಣ್ಯಕಾಂಡ 4:20ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
- Numbers 2:17 ಅರಣ್ಯಕಾಂಡ 2:17ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Numbers 3:27–32 ಅರಣ್ಯಕಾಂಡ 3:27–32ಅಮ್ರಾಮಿಯರ ಕುಟುಂಬವೂ ಇಚ್ಹಾರರ ಕುಟುಂಬವೂ ಹೆಬ್ರೋನಿಯರ ಕುಟುಂಬವೂ ಉಜ್ಜೀ ಯೇಲರ ಕುಟುಂಬವೂ ಇವು ಕೆಹಾತರ ಕುಟುಂಬ ಗಳು. ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕಾಪಾಡು ವವರ ಲೆಕ್ಕ ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರೂ ಎಂಟು ಸಾವಿರದ ಆರು ನೂರು. ಕೆಹಾತನ ಕುಮಾರರ ಕುಟುಂಬಗಳು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳುಕೊಳ್ಳಬೇಕು. ಉಜ್ಜೀಯೇಲನ ಕುಮಾರನಾದ ಎಲೀಚಾಫಾನು ಕೆಹಾತರ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು. ಅವರ ಅಪ್ಪಣೆಯೇನಂದರೆ: ಮಂಜೂಷವೂ ಮೇಜೂ ದೀಪಸ್ತಂಭವೂ ಬಲಿಪೀಠ ಗಳೂ ಅವರು ಸೇವೆಮಾಡುವ ಪರಿಶುದ್ಧ ಸ್ಥಳದ ವಸ್ತುಗಳೂ ತೆರೆಯೂ ಅವುಗಳ ಎಲ್ಲಾ ಸೇವೆಯೂ ಆಗಿದೆ. ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.
- 1 Chronicles 15:12–15 1 ಪೂರ್ವಕಾಲವೃತ್ತಾಂತ 15:12–15ನೀವು ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದದರಿಂದ ಇಸ್ರಾಯೇಲಿನ ದೇವರಾದ ಕರ್ತನ ಮಂಜೂಷವನ್ನು ನಾನು ಅದ ಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ. ನೀವು ಮೊದಲಿನ ಹಾಗೆ ಮಾಡದೆ ಇದದ್ದರಿಂದ ಕರ್ತನಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದನು. ನ್ಯಾಯದ ಪ್ರಕಾರ ನಾವು ಆತನನ್ನು ಹುಡುಕಲಿಲ್ಲ ಅಂದನು. ಆಗ ಇಸ್ರಾಯೇಲಿನ ದೇವರಾದ ಕರ್ತನ ಮಂಜೂ ಷವನ್ನು ತರುವದಕ್ಕೆ ಯಾಜಕರೂ ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು. ಮೋಶೆಯು ಆಜ್ಞಾಪಿಸಿದ ಕರ್ತನ ವಾಕ್ಯದ ಪ್ರಕಾರ ಲೇವಿಯರ ಮಕ್ಕಳು ಕೋಲುಗಳನ್ನು ಹಾಕಿ ದೇವರ ಮಂಜೂಷ ವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.