Numbers · chapter 11 · verse 29
Numbers 11:29 in Kannada
ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
Mosheyu avanige helidde nandare--nanna nimittavaagi neenu hottekichchu padutteeyo? Kartana janarellaa pravaadigalaa giddu kartanu tanna aatmavannu avara mele ittare eshto olledu andanu!
Numbers 11:29 in English
- King James Version (KJV)
- And Moses said unto him, Enviest thou for my sake? would God that all the LORD’s people were prophets, [and] that the LORD would put his spirit upon them!
- World English Bible (WEB)
- Moses said to him, “Are you jealous for my sake? I wish that all the LORD’s people were prophets, that the LORD would put his Spirit on them!”
- American Standard Version (ASV)
- And Moses said unto him, Art thou jealous for my sake? would that all Jehovah’s people were prophets, that Jehovah would put his Spirit upon them!
- Bible in Basic English (BBE)
- And Moses said to him, Are you moved by envy on my account? If only all the Lord's people were prophets, and the Lord might put his spirit on them!
- Darby Translation (DBY)
- But Moses said to him, Enviest thou for my sake? would that all Jehovah's people were prophets, [and] that Jehovah would put his Spirit upon them!
- Webster's Bible (WBS)
- And Moses said to him, Enviest thou for my sake? I would that all the LORD'S people were prophets, [and] that the LORD would put his spirit upon them.
- Young's Literal Translation (YLT)
- And Moses saith to him, 'Art thou zealous for me? O that all Jehovah's people were prophets! that Jehovah would put His Spirit upon them!'
Read in context
- 27ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು.
- 28ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.
- 29ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
- 30ಆಗ ಮೋಶೆಯೂ ಇಸ್ರಾಯೇಲ್ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
- 31ಕರ್ತನ ಕಡೆಯಿಂದ ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು ಪಾಳೆಯದ ಸುತ್ತಲೂ ಈ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಆ ಕಡೆ ಒಂದು ದಿನ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.
Cross references
- 1 Corinthians 14:5 1 ಕೊರಿಂಥದವರಿಗೆ 14:5ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ; ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ. ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ.
- James 5:9 ಯಾಕೋಬನು 5:9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Luke 10:2 ಲೂಕನು 10:2ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- Matthew 9:37–38 ಮತ್ತಾಯನು 9:37–38ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು. ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
- James 3:14–15 ಯಾಕೋಬನು 3:14–15ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- Philippians 1:15–18 ಫಿಲಿಪ್ಪಿಯವರಿಗೆ 1:15–18ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ. ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ. ಇವರಾದರೋ ನಾನು ಸುವಾರ್ತೆಯ ಪರವಾಗಿ ನೇಮಿಸಲ್ಪಟ್ಟಿದ್ದೇನೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ. ಹೇಗಾದರೇನು? ಯಾವ ರೀತಿಯಿಂದಾದರೂ ಅಂದರೆ ಕಪಟದಿಂದಾ ಗಲಿ ಇಲ್ಲವೆ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿ ಸುವದುಂಟು; ಇದಕ್ಕೆ ನಾನು ಸಂತೋಷಿಸುತ್ತೇನೆ ಹೌದು, ಮುಂದೆಯೂ ಸಂತೋಷಿಸುವೆನು.
- 1 Corinthians 3:21 1 ಕೊರಿಂಥದವರಿಗೆ 3:21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
- 1 Corinthians 3:3 1 ಕೊರಿಂಥದವರಿಗೆ 3:3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- 1 Corinthians 13:4 1 ಕೊರಿಂಥದವರಿಗೆ 13:4ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ,