Numbers · chapter 12 · verse 3
Numbers 12:3 in Kannada
(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
(aadare moshe embavanu bhoomukhada meliruva sakala manushyarellariginta bahu saatvikanaagiddanu.)
Numbers 12:3 in English
- King James Version (KJV)
- (Now the man Moses [was] very meek, above all the men which [were] upon the face of the earth.)
- World English Bible (WEB)
- Now the man Moses was very humble, more than all the men who were on the surface of the earth.
- American Standard Version (ASV)
- Now the man Moses was very meek, above all the men that were upon the face of the earth.
- Bible in Basic English (BBE)
- Now the man Moses was more gentle than any other man on earth.
- Darby Translation (DBY)
- But the man Moses was very meek, above all men that were upon the face of the earth.
- Webster's Bible (WBS)
- (Now the man Moses [was] very meek, above all the men who [were] upon the face of the earth.)
- Young's Literal Translation (YLT)
- And the man Moses [is] very humble, more than any of the men who [are] on the face of the ground.
Read in context
- 1ಮೋಶೆಯು ಮದುವೆಯಾಗಿದ್ದ ಐಥೋಪ್ಯಳಾದ ಸ್ತ್ರೀಯ ನಿಮಿತ್ತ ಮಿರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತ ನಾಡಿದರು. ಯಾಕಂದರೆ ಅವನು ಐಥೋಪ್ಯಳಾದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು.
- 2ಅವರುಕರ್ತನು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾನೋ? ಆತನು ನಮ್ಮ ಮುಖಾಂತ ರವಾಗಿಯೂ ಮಾತನಾಡಲಿಲ್ಲವೋ ಅಂದರು.
- 3(ಆದರೆ ಮೋಶೆ ಎಂಬವನು ಭೂಮುಖದ ಮೇಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ಸಾತ್ವಿಕನಾಗಿದ್ದನು.)
- 4ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
- 5ಕರ್ತನು ಮೇಘಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನನ್ನೂ ಮಿರ್ಯಾಮ ಳನ್ನೂ ಕರೆದಾಗ ಅವರಿಬ್ಬರೂ ಮುಂದೆ ಬಂದರು.
Cross references
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- James 3:13 ಯಾಕೋಬನು 3:13ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.
- Matthew 5:5 ಮತ್ತಾಯನು 5:5ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
- 2 Corinthians 11:5 2 ಕೊರಿಂಥದವರಿಗೆ 11:5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- 2 Corinthians 12:11 2 ಕೊರಿಂಥದವರಿಗೆ 12:11ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ.
- Numbers 11:10–15 ಅರಣ್ಯಕಾಂಡ 11:10–15ಆಗ ಜನರು ತಮ್ಮ ಕುಟುಂಬಗಳ ಪ್ರಕಾರವಾಗಿ ಪ್ರತಿಯೊಬ್ಬನು ತನ್ನ ಗುಡಾರದ ಬಾಗಲಿನಲ್ಲಿ ಅಳುವ ದನ್ನು ಮೋಶೆ ಕೇಳಿದನು; ಆದಕಾರಣ ಕರ್ತನ ಕೋಪವು ಬಹಳವಾಗಿ ಉರಿಯಿತು; ಮೋಶೆಗೂ ಅದು ಮೆಚ್ಚಿಗೆಯಾಗಲಿಲ್ಲ. ಆದದರಿಂದ ಮೋಶೆಯು ಕರ್ತನಿಗೆ ಹೇಳಿದ್ದೇ ನಂದರೆ--ಈ ಸಮಸ್ತ ಜನರ ಭಾರವನ್ನು ನನ್ನ ಮೇಲೆ ಹಾಕುವದಕ್ಕೆ ನೀನು ನಿನ್ನ ಸೇವಕನಿಗೆ ಯಾಕೆ ಉಪದ್ರ ಮಾಡಿದ್ದೀ? ನಿನ್ನ ದೃಷ್ಟಿಯಲ್ಲಿ ನನಗೆ ಯಾಕೆ ದಯೆ ದೊರಕಲಿಲ್ಲ? ತನ್ನ ಮೊಲೆಯ ಕೂಸನ್ನು ಎತ್ತುವಂತೆ ನೀನು ಈ ಜನರನ್ನು ಎದೆಯಲ್ಲಿ ಹೊತ್ತು ಕೊಂಡು ಅವರ ತಂದೆಗಳಿಗೆ ಪ್ರಮಾಣಮಾಡಿದ ದೇಶಕ್ಕೆ ತಕ್ಕೊಂಡು ಹೋಗು ಎಂದು ನೀನು ನನಗೆ ಹೇಳುತ್ತೀ. ಹೀಗೆ ನಾನು ಮಾಡುವದಕ್ಕೆ ಈ ಸಮಸ್ತ ಜನರನ್ನು ಗರ್ಭಧರಿಸಿಕೊಂಡೆನೋ? ನಾನೇ ಅವರನ್ನು ಹೆತ್ತೆನೋ? ಈ ಸಮಸ್ತ ಜನರಿಗೆ ಕೊಡಲು ಮಾಂಸವು ನನಗೆ ಎಲ್ಲಿಂದ ದೊರಕುವದು? ಯಾಕಂದರೆ--ತಿನ್ನುವ ಹಾಗೆ ನಮಗೆ ಮಾಂಸವನ್ನು ಕೊಡು ಎಂದು ನನ್ನ ಬಳಿಯಲ್ಲಿ ಅಳುತ್ತಾರೆ. ಒಬ್ಬಂಟಿ ಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವದಕ್ಕೆ ನಾನು ಶಕ್ತನಲ್ಲ, ಅದು ನನಗೆ ಅತಿ ದೊಡ್ಡ ಭಾರ ವಾಗಿದೆ. ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Psalm 147:6 ಕೀರ್ತನೆಗಳು 147:6ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
- 1 Thessalonians 2:7 1 ಥೆಸಲೊನೀಕದವರಿಗೆ 2:7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- James 3:2–3 ಯಾಕೋಬನು 3:2–3ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.
- Psalm 106:32–33 ಕೀರ್ತನೆಗಳು 106:32–33ಅವರು ವಿವಾದದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು; ಅವರ ನಿಮಿತ್ತ ಮೋಶೆಗೆ ಕೇಡು ಬಂತು. ಅವರು ದೇವರಾತ್ಮನನ್ನು ಕೆಣ ಕಿದರು; ಆದದರಿಂದ ಅವನು ಬುದ್ಧಿಹೀನತೆಯಿಂದ ಮಾತನಾಡಿದನು.
- Numbers 20:10–12 ಅರಣ್ಯಕಾಂಡ 20:10–12ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು. ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು. ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- 1 Peter 3:4 1 ಪೇತ್ರನು 3:4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.