Numbers · chapter 13 · verse 30
Numbers 13:30 in Kannada
ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
Aadare kaalebanu mosheya edurinalli janarannu summanirisi--naavu takshanave hogi adannu svaadheenamaadikollona. Adannu jayi salu naavu nijavaagiyoo shakta raagiddeve andanu.
Numbers 13:30 in English
- King James Version (KJV)
- And Caleb stilled the people before Moses, and said, Let us go up at once, and possess it; for we are well able to overcome it.
- World English Bible (WEB)
- Caleb stilled the people before Moses, and said, “Let’s go up at once, and possess it; for we are well able to overcome it!”
- American Standard Version (ASV)
- And Caleb stilled the people before Moses, and said, Let us go up at once, and possess it; for we are well able to overcome it.
- Bible in Basic English (BBE)
- Then Caleb made signs to the people to keep quiet, and said to Moses, Let us go up straight away and take this land; for we are well able to overcome it.
- Darby Translation (DBY)
- And Caleb stilled the people before Moses, and said, Let us go up boldly and possess it, for we are well able to do it.
- Webster's Bible (WBS)
- And Caleb stilled the people before Moses, and said, Let us go up at once, and possess it; for we are well able to overcome it.
- Young's Literal Translation (YLT)
- And Caleb stilleth the people concerning Moses, and saith, 'Let us certainly go up — and we have possessed it; for we are thoroughly able for it.'
Read in context
- 28ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
- 29ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
- 30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
- 31ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
- 32ಅವರು ಪಾಳತಿ ನೋಡಿದ ದೇಶದ ವಿಷಯ ಕೆಟ್ಟಸುದ್ಧಿಯನ್ನು ತಂದು--ನಾವು ಪಾಳತಿ ನೋಡುವ ದಕ್ಕೆ ಹಾದುಹೋದ ದೇಶವು ತನ್ನಲ್ಲಿ ವಾಸವಾಗಿರು ವವರನ್ನು ತಿಂದುಬಿಡುವ ದೇಶವಾಗಿದೆ; ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾಶರೀರದ ಮನುಷ್ಯರು.ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.
Cross references
- Numbers 14:24 ಅರಣ್ಯಕಾಂಡ 14:24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Psalm 60:12 ಕೀರ್ತನೆಗಳು 60:12ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
- Numbers 14:6–9 ಅರಣ್ಯಕಾಂಡ 14:6–9ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ. ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು. ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- Hebrews 11:33 ಇಬ್ರಿಯರಿಗೆ 11:33ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Isaiah 41:10–16 ಯೆಶಾಯ 41:10–16ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ! ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Joshua 14:6–8 ಯೆಹೋಶುವ 14:6–8ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ; ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.
- Psalm 118:10–11 ಕೀರ್ತನೆಗಳು 118:10–11ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು.
- Psalm 27:1–2 ಕೀರ್ತನೆಗಳು 27:1–2ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.