Numbers · chapter 13 · verse 6
Numbers 13:6 in Kannada
ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,
Yoodaa gotrada yephunneya maganaada kaalebanu,
Numbers 13:6 in English
- King James Version (KJV)
- Of the tribe of Judah, Caleb the son of Jephunneh.
- World English Bible (WEB)
- Of the tribe of Judah, Caleb the son of Jephunneh.
- American Standard Version (ASV)
- Of the tribe of Judah, Caleb the son of Jephunneh.
- Bible in Basic English (BBE)
- Of the tribe of Judah, Caleb, the son of Jephunneh.
- Darby Translation (DBY)
- for the tribe of Judah, Caleb the son of Jephunneh;
- Webster's Bible (WBS)
- Of the tribe of Judah, Caleb the son of Jephunneh.
- Young's Literal Translation (YLT)
- For the tribe of Judah, Caleb son of Jephunneh.
Read in context
- 4ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,
- 5ಸಿಮೆಯೋನ್ ಗೋತ್ರದ ಹೋರಿಯ ಮಗನಾದ ಶಾಫಾಟನು,
- 6ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,
- 7ಇಸ್ಸಾಕಾರ್ ಗೋತ್ರದ ಯೋಸೇಫನ ಮಗನಾದ ಇಗಾಲನು,
- 8ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು,
Cross references
- Numbers 14:6 ಅರಣ್ಯಕಾಂಡ 14:6ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
- Numbers 34:19 ಅರಣ್ಯಕಾಂಡ 34:19ಈ ಮನುಷ್ಯರ ಹೆಸರುಗಳು ಇವೇ: ಯೆಹೂದನ ಕುಟುಂಬದಿಂದ ಯೆಪುನ್ನೆಯ ಮಗನಾದ ಕಾಲೇಬನೂ
- Numbers 13:30 ಅರಣ್ಯಕಾಂಡ 13:30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
- Joshua 14:6–15 ಯೆಹೋಶುವ 14:6–15ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ; ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ. ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು. ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Numbers 14:30 ಅರಣ್ಯಕಾಂಡ 14:30ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.
- Numbers 26:65 ಅರಣ್ಯಕಾಂಡ 26:65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- 1 Chronicles 4:15 1 ಪೂರ್ವಕಾಲವೃತ್ತಾಂತ 4:15ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು.
- Numbers 14:24 ಅರಣ್ಯಕಾಂಡ 14:24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- Numbers 14:38 ಅರಣ್ಯಕಾಂಡ 14:38ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
- Judges 1:12–15 ನ್ಯಾಯಸ್ಥಾಪಕರು 1:12–15ಕಾಲೇಬನು--ಕಿರ್ಯತೆಸೇಫೆರನ್ನು ಹೊಡೆದು ತೆಗೆದುಕೊಳ್ಳುವವನಿಗೆ ನನ್ನ ಕುಮಾರ್ತೆಯಾದ ಅಕ್ಷಾ ಳನ್ನು ಹೆಂಡತಿಯಾಗಿ ಕೊಡುವೆನು ಎಂದು ಹೇಳಿದ್ದನು. ಆಗ ಕಾಲೇಬನ ತಮ್ಮನು ಕೆನಜನ ಮಗನಾದ ಒತ್ನೀಯೇಲನು ಅದನ್ನು ಹಿಡಿದನು. ಆಗ ಅವನು ತನ್ನ ಮಗಳಾದ ಅಕ್ಷಾಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಅವಳು ಅವನ ಬಳಿಗೆ ಹೋಗುವಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿದವಳಾಗಿ ಕತ್ತೆಯಿಂದ ಇಳಿದಳು; ಕಾಲೇಬನು ಅವಳಿಗೆ--ನಿನಗೆ ಏನು ಬೇಕು ಅಂದನು. ಅವಳು ಅವನಿಗೆ--ನನಗೆ ಆಶೀರ್ವಾದಕೊಡು; ನೀನು ದಕ್ಷಿಣ ಭೂಮಿಯನ್ನು ನನಗೆ ಕೊಟ್ಟುಬಿಟ್ಟೆ ಯಲ್ಲಾ, ನೀರು ಬುಗ್ಗೆಗಳನ್ನು ಸಹ ಕೊಡು ಅಂದಳು. ಕಾಲೇಬನು ಮೇಲಿನ ಬುಗ್ಗೆಗಳನ್ನೂ ಕೆಳಗಿನ ಬುಗ್ಗೆಗಳನ್ನೂ ಅವಳಿಗೆ ಕೊಟ್ಟನು.
- Luke 1:10–15 ಲೂಕನು 1:10–15ಧೂಪಾರ್ಪಣೆಯ ಸಮಯದಲ್ಲಿ ಜನ ಸಮೂಹ ವೆಲ್ಲಾ ಹೊರಗೆ ಪ್ರಾರ್ಥಿಸುತ್ತಿದ್ದರು. ಆಗ ಧೂಪ ವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು. ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು. ನಿನಗೆ ಆನಂದವೂ ಉಲ್ಲಾಸವೂ ಆಗುವದು; ಅನೇಕರು ಅವನ ಜನನದಲ್ಲಿ ಆನಂದಿಸುವರು. ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- Numbers 27:15–23 ಅರಣ್ಯಕಾಂಡ 27:15–23ಮೋಶೆಯು ಕರ್ತನ ಸಂಗಡ ಮಾತನಾಡಿಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಕರ್ತನು ಈ ಸಭೆಯ ಮೇಲೆ ಒಬ್ಬ ಮನುಷ್ಯನನ್ನು ಇಡಲಿ. ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ; ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು. ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು. ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು. ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು. ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.