Numbers · chapter 13 · verse 8
Numbers 13:8 in Kannada
ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು,
Ephraayaam gotrada noonana maganaada hosheyanu,
Numbers 13:8 in English
- King James Version (KJV)
- Of the tribe of Ephraim, Oshea the son of Nun.
- World English Bible (WEB)
- Of the tribe of Ephraim, Hoshea the son of Nun.
- American Standard Version (ASV)
- Of the tribe of Ephraim, Hoshea the son of Nun.
- Bible in Basic English (BBE)
- Of the tribe of Ephraim, Hoshea, the son of Nun.
- Darby Translation (DBY)
- for the tribe of Ephraim, Hoshea the son of Nun;
- Webster's Bible (WBS)
- Of the tribe of Ephraim, Oshea the son of Nun.
- Young's Literal Translation (YLT)
- For the tribe of Ephraim, Oshea, son of Nun.
Read in context
- 6ಯೂದಾ ಗೋತ್ರದ ಯೆಫುನ್ನೆಯ ಮಗನಾದ ಕಾಲೇಬನು,
- 7ಇಸ್ಸಾಕಾರ್ ಗೋತ್ರದ ಯೋಸೇಫನ ಮಗನಾದ ಇಗಾಲನು,
- 8ಎಫ್ರಾಯಾಮ್ ಗೋತ್ರದ ನೂನನ ಮಗನಾದ ಹೋಶೇಯನು,
- 9ಬೆನ್ಯಾವಿಾನ್ ಗೋತ್ರದ ರಾಫೂವನ ಮಗನಾದ ಪಲ್ಟೀಯು,
- 10ಜೆಬುಲೂನ್ ಗೋತ್ರದ ಸೋದೀಯ ಮಗನಾದ ಗದ್ದೀಯೇಲ್,
Cross references
- Numbers 11:28 ಅರಣ್ಯಕಾಂಡ 11:28ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು.
- Exodus 24:13 ವಿಮೋಚನಕಾಂಡ 24:13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- Deuteronomy 32:44 ಧರ್ಮೋಪದೇಶಕಾಂಡ 32:44ಆಗ ಮೋಶೆಯು ನೂನನ ಮಗನಾದ ಯೆಹೋಶುವನ ಸಂಗಡ ಬಂದು ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.
- Deuteronomy 31:7–8 ಧರ್ಮೋಪದೇಶಕಾಂಡ 31:7–8ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Deuteronomy 31:23 ಧರ್ಮೋಪದೇಶಕಾಂಡ 31:23ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
- Joshua 24:1–33 ಯೆಹೋಶುವ 24:1–33ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು. ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು; ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು. ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು. ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು. ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು. ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು. ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು. ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು. ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿ ಗಳೂ ಅಮೋರಿಯರೂ ಪೆರಿಜ್ಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿ ಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು. ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳು ಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸುಗಳನ್ನೂ ಓಡಿಸಿಬಿಟ್ಟವು; ನಿಮ್ಮ ಕತ್ತಿ, ಬಿಲ್ಲುಗ ಳಿಂದಲ್ಲ. ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ. ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ. ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು. ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು. ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು. ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು. ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು. ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು. ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು. ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು. ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು. ಈ ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು. ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು. ಹೀಗೆ ಯೆಹೋಶುವನು ಜನರನ್ನು ಅವರವರ ಬಾಧ್ಯೆತೆಗಳಿಗೆ ಕಳುಹಿಸಿದನು. ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು. ಅವ ನನ್ನು ಎಫ್ರಾಯಾಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ಸೆರಹ ಎಂಬ ಅವನ ಬಾಧ್ಯ ತೆಯ ಮೇರೆಯಲ್ಲಿ ಹೂಣಿಟ್ಟರು. ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ತರುವಾಯ ಕರ್ತನು ಇಸ್ರಾಯೇಲಿಗೆ ಮಾಡಿದ ಸಕಲಕಾರ್ಯಗಳನ್ನು ಅರಿತಿದ್ದ ಹಿರಿಯರ ಸಕಲ ದಿನಗಳಲ್ಲಿಯೂ ಇಸ್ರಾಯೇಲ್ಯರು ಕರ್ತನನ್ನು ಸೇವಿಸಿದರು. ಇದ ಲ್ಲದೆ ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು ಅವರು ಶೆಕೆಮಿನಲ್ಲಿ ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯಗಳಿಗೆ ಕೊಂಡು ಕೊಂಡಿದ್ದ, ಯೋಸೇಫನ ಮಕ್ಕಳಿಗೆ ಬಾಧ್ಯತೆ ಯಾದ, ನೆಲದ ಭಾಗದಲ್ಲಿ ಹೂಣಿಟ್ಟರು.ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು. ಆರೋ ನನ ಮಗನಾದ ಎಲೀಯಾಜರನು ಸತ್ತನು; ಅವ ನನ್ನು ಅವನ ಮಗನಾದ ಫೀನೆಹಾಸನಿಗೆ ಎಫ್ರಾ ಯಾಮ್ ಬೆಟ್ಟದ ದೇಶದಲ್ಲಿ ಕೊಡಲ್ಪಟ್ಟ ಗುಡ್ಡದಲ್ಲಿ ಹೂಣಿಟ್ಟರು.
- Exodus 32:17 ವಿಮೋಚನಕಾಂಡ 32:17ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು.
- Deuteronomy 31:14 ಧರ್ಮೋಪದೇಶಕಾಂಡ 31:14ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಈ ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
- Joshua 1:1–9 ಯೆಹೋಶುವ 1:1–9ಕರ್ತನ ಸೇವಕನಾದ ಮೋಶೆ ಸತ್ತ ತರುವಾಯ ಕರ್ತನು ಮೋಶೆಯ ಸೇವಕನಾದ ನೂನನ ಮಗನಾಗಿರುವ ಯೆಹೋಶುವನಿಗೆ-- ನನ್ನ ಸೇವಕನಾದ ಮೋಶೆಯು ಸತ್ತನು; ಈಗ ನೀನು ಈ ಜನರೆಲ್ಲರ ಸಹಿತವಾಗಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶಕ್ಕೆ ಹೋಗು. ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು. ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು. ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ. ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ. ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ. ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ. ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.
- Deuteronomy 34:9 ಧರ್ಮೋಪದೇಶಕಾಂಡ 34:9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
- Exodus 17:9–13 ವಿಮೋಚನಕಾಂಡ 17:9–13ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು. ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು. ಮೋಶೆಯು ತನ್ನ ಕೈಯನ್ನು ಎತ್ತಿದಾಗ ಇಸ್ರಾಯೇಲ್ಯರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು. ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು. ಯೆಹೋಶು ವನು ಅಮಾಲೇಕ್ಯನನ್ನೂ ಅವನ ಜನರನ್ನೂ ಕತ್ತಿಯಿಂದ ಸೋಲಿಸಿದನು.
- Numbers 27:18–22 ಅರಣ್ಯಕಾಂಡ 27:18–22ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು. ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು. ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.