Numbers · chapter 14 · verse 12
Numbers 14:12 in Kannada
ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
Naanu avarannu vyaadhiyinda hodedu nirmoolamaadi ninnannu avariginta doddadaada balavulla janaangavannaagi maaduvenu andanu.
Numbers 14:12 in English
- King James Version (KJV)
- I will smite them with the pestilence, and disinherit them, and will make of thee a greater nation and mightier than they.
- World English Bible (WEB)
- I will strike them with the pestilence, and disinherit them, and will make of you a nation greater and mightier than they.”
- American Standard Version (ASV)
- I will smite them with the pestilence, and disinherit them, and will make of thee a nation greater and mightier than they.
- Bible in Basic English (BBE)
- I will send disease on them for their destruction, and take away their heritage, and I will make of you a nation greater and stronger than they.
- Darby Translation (DBY)
- I will smite them with the pestilence, and destroy them, and will make of thee a nation greater and mightier than they.
- Webster's Bible (WBS)
- I will smite them with the pestilence, and disinherit them, and will make of thee a greater nation and mightier than they.
- Young's Literal Translation (YLT)
- I smite it with pestilence, and dispossess it, and make thee become a nation greater and mightier than it.'
Read in context
- 10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
- 11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
- 12ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
- 13ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
- 14ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.
Cross references
- Exodus 32:10 ವಿಮೋಚನಕಾಂಡ 32:10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- Numbers 25:9 ಅರಣ್ಯಕಾಂಡ 25:9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- 2 Samuel 24:1 2 ಸಮುವೇಲನು 24:1ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
- Numbers 16:46–49 ಅರಣ್ಯಕಾಂಡ 16:46–49ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು. ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು. ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು. ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
- Exodus 5:3 ವಿಮೋಚನಕಾಂಡ 5:3ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
- 2 Samuel 24:12–15 2 ಸಮುವೇಲನು 24:12–15ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು. ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು. ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು. ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.