Numbers · chapter 14 · verse 24
Numbers 14:24 in Kannada
ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
Aadare nanna sevakanaada kaalebanalli nanna aatmavidaddarindaloo avanu nannannu poorna vaagi himbaalisiddarindaloo avanu sancharisida deshakke avanannu taruvenu; avana santaanavu adannu svatantrisikolluvadu.
Numbers 14:24 in English
- King James Version (KJV)
- But my servant Caleb, because he had another spirit with him, and hath followed me fully, him will I bring into the land whereinto he went; and his seed shall possess it.
- World English Bible (WEB)
- But my servant Caleb, because he had another spirit with him, and has followed me fully, him I will bring into the land into which he went. His offspring shall possess it.
- American Standard Version (ASV)
- but my servant Caleb, because he had another spirit with him, and hath followed me fully, him will I bring into the land whereinto he went; and his seed shall possess it.
- Bible in Basic English (BBE)
- But my servant Caleb, because he had a different spirit in him, and has been true to me with all his heart, him I will take into that land into which he went, and his seed will have it for their heritage.
- Darby Translation (DBY)
- But my servant Caleb, because he hath another spirit in him, and hath followed me fully, him will I bring into the land whereinto he came; and his seed shall possess it.
- Webster's Bible (WBS)
- But my servant Caleb, because he had another spirit with him, and hath followed me fully, him will I bring into the land into which he went; and his seed shall possess it.
- Young's Literal Translation (YLT)
- and My servant Caleb, because there hath been another spirit with him, and he is fully after Me — I have brought him in unto the land whither he hath entered, and his seed doth possess it.
Read in context
- 22ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
- 23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- 24ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
- 25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.
- 26ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--
Cross references
- Joshua 14:6–14 ಯೆಹೋಶುವ 14:6–14ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ; ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ. ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Numbers 14:6–9 ಅರಣ್ಯಕಾಂಡ 14:6–9ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ. ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು. ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- Numbers 32:11–12 ಅರಣ್ಯಕಾಂಡ 32:11–12ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- Deuteronomy 1:36 ಧರ್ಮೋಪದೇಶಕಾಂಡ 1:36ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು.
- Ephesians 6:6 ಎಫೆಸದವರಿಗೆ 6:6ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಪ್ರಕಾರ ಕಣ್ಣಿಗೆ ಕಾಣುವಾಗ ಮಾತ್ರ ಸೇವೆ ಮಾಡದೆ ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಹೃದಯ ಪೂರ್ವಕವಾಗಿ ನಡಿಸಿರಿ.
- Numbers 13:30 ಅರಣ್ಯಕಾಂಡ 13:30ಆದರೆ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ--ನಾವು ತಕ್ಷಣವೇ ಹೋಗಿ ಅದನ್ನು ಸ್ವಾಧೀನಮಾಡಿಕೊಳ್ಳೋಣ. ಅದನ್ನು ಜಯಿ ಸಲು ನಾವು ನಿಜವಾಗಿಯೂ ಶಕ್ತ ರಾಗಿದ್ದೇವೆ ಅಂದನು.
- Numbers 26:65 ಅರಣ್ಯಕಾಂಡ 26:65ಕರ್ತನು--ಅವರು ಅರಣ್ಯದಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಅವರಿಗೆ ಹೇಳಿದ್ದನು; ಈ ಪ್ರಕಾರ ಯೆಫುನ್ನೆಯ ಮಗನಾದ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನಾದರೂ ಉಳಿಯಲಿಲ್ಲ.
- Psalm 119:80 ಕೀರ್ತನೆಗಳು 119:80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
- 1 Chronicles 29:9 1 ಪೂರ್ವಕಾಲವೃತ್ತಾಂತ 29:9ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
- 1 Chronicles 29:18 1 ಪೂರ್ವಕಾಲವೃತ್ತಾಂತ 29:18ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
- 2 Chronicles 25:2 2 ಪೂರ್ವಕಾಲವೃತ್ತಾಂತ 25:2ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.