Numbers · chapter 14 · verse 33
Numbers 14:33 in Kannada
ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
Idallade nimma makkalu naalvattu varusha aranyadalli aledaadi nimma henagalu aranyadalli haalaagi hoguva tanaka nimma jaaratva galannu taalikolluvaru.
Numbers 14:33 in English
- King James Version (KJV)
- And your children shall wander in the wilderness forty years, and bear your whoredoms, until your carcases be wasted in the wilderness.
- World English Bible (WEB)
- Your children shall be wanderers in the wilderness forty years, and shall bear your prostitution, until your dead bodies are consumed in the wilderness.
- American Standard Version (ASV)
- And your children shall be wanderers in the wilderness forty years, and shall bear your whoredoms, until your dead bodies be consumed in the wilderness.
- Bible in Basic English (BBE)
- And your children will be wanderers in the waste land for forty years, undergoing punishment for your false ways, till your bodies become dust in the waste land.
- Darby Translation (DBY)
- And your children shall wander in the wilderness forty years, and bear your whoredoms, until your carcases be wasted in the wilderness.
- Webster's Bible (WBS)
- And your children shall wander in the wilderness forty years, and bear your lewd deeds, until your carcasses shall be wasted in the wilderness.
- Young's Literal Translation (YLT)
- and your sons are evil in the wilderness forty years, and have borne your whoredoms till your carcases are consumed in the wilderness;
Read in context
- 31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
- 32ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.
- 33ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
- 34ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
- 35ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
Cross references
- Ezekiel 23:35 ಯೆಹೆಜ್ಕೇಲನು 23:35ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
- Numbers 32:13 ಅರಣ್ಯಕಾಂಡ 32:13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- Deuteronomy 2:14 ಧರ್ಮೋಪದೇಶಕಾಂಡ 2:14ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
- Psalm 107:40 ಕೀರ್ತನೆಗಳು 107:40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
- Jeremiah 3:1–2 ಯೆರೆಮೀಯ 3:1–2ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
- Ezekiel 23:45–49 ಯೆಹೆಜ್ಕೇಲನು 23:45–49ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ. ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Numbers 5:31 ಅರಣ್ಯಕಾಂಡ 5:31ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
- Hosea 9:1 ಹೋಶೇಯ 9:1ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
- Numbers 33:38 ಅರಣ್ಯಕಾಂಡ 33:38ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
- Deuteronomy 1:3 ಧರ್ಮೋಪದೇಶಕಾಂಡ 1:3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
- Joshua 14:10 ಯೆಹೋಶುವ 14:10ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ.
- Psalm 107:4 ಕೀರ್ತನೆಗಳು 107:4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,