Numbers · chapter 14 · verse 8
Numbers 14:8 in Kannada
ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
Kartanu nammalli ishtapattare haalu jenoo hariyuva aa deshakke nammannu baramaadi adannu namage koduvanu.
Numbers 14:8 in English
- King James Version (KJV)
- If the LORD delight in us, then he will bring us into this land, and give it us; a land which floweth with milk and honey.
- World English Bible (WEB)
- If the LORD delights in us, then he will bring us into this land, and give it to us: a land which flows with milk and honey.
- American Standard Version (ASV)
- If Jehovah delight in us, then he will bring us into this land, and give it unto us; a land which floweth with milk and honey.
- Bible in Basic English (BBE)
- And if the Lord has delight in us, he will take us into this land and give it to us, a land flowing with milk and honey.
- Darby Translation (DBY)
- If Jehovah delight in us, he will bring us into this land, and give it us, a land that flows with milk and honey;
- Webster's Bible (WBS)
- If the LORD delighteth in us, then he will bring us into this land, and give it to us; a land which floweth with milk and honey.
- Young's Literal Translation (YLT)
- if Jehovah hath delighted in us, then He hath brought us in unto this land, and hath given it to us, a land which is flowing with milk and honey;
Read in context
- 6ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು
- 7ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
- 8ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
- 9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- 10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.
Cross references
- 2 Samuel 22:20 2 ಸಮುವೇಲನು 22:20ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.
- Isaiah 62:4 ಯೆಶಾಯ 62:4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- Numbers 13:27 ಅರಣ್ಯಕಾಂಡ 13:27ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
- Deuteronomy 10:15 ಧರ್ಮೋಪದೇಶಕಾಂಡ 10:15ಆದರೂ ನಿನ್ನ ಪಿತೃಗಳ ಮೇಲೆ ಕರ್ತನು ತಾನೇ ಮನಸ್ಸಿಟ್ಟು ಅವರನ್ನು ಪ್ರೀತಿಮಾಡಿ ಅವರ ಸಂತಾನವಾಗಿರುವ ನಿಮ್ಮನ್ನು ಈಹೊತ್ತು ಇರುವ ಪ್ರಕಾರ ಎಲ್ಲಾ ಜನಗಳೊಳಗಿಂದ ಆದುಕೊಂಡನು.
- Psalm 147:10–11 ಕೀರ್ತನೆಗಳು 147:10–11ಆತನು ಕುದು ರೆಯ ಶಕ್ತಿಯಲ್ಲಿ ಸಂತೋಷಿಸುವದಿಲ್ಲ; ಮನುಷ್ಯನ ತೊಡೆಯಬಲವನ್ನು ಮೆಚ್ಚುವದಿಲ್ಲ. ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Psalm 22:8 ಕೀರ್ತನೆಗಳು 22:8ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.
- 1 Kings 10:9 1 ಅರಸುಗಳು 10:9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Jeremiah 32:41 ಯೆರೆಮೀಯ 32:41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- 2 Samuel 15:25–26 2 ಸಮುವೇಲನು 15:25–26ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು. ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.