Numbers · chapter 15 · verse 3
Numbers 15:3 in Kannada
ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
Pashugalindalaadaroo kurigalindalaa daroo kartanige suvaasaneyannuntumaaduva dahanabaliyaagali pramaanavannu eederisuva baliyaagali uchitavaada arpaneyaagali nimma pavitra habbagalallaagali kartanige benkiyinda arpisali andanu.
Numbers 15:3 in English
- King James Version (KJV)
- And will make an offering by fire unto the LORD, a burnt offering, or a sacrifice in performing a vow, or in a freewill offering, or in your solemn feasts, to make a sweet savour unto the LORD, of the herd, or of the flock:
- World English Bible (WEB)
- and will make an offering by fire to the LORD—a burnt offering, or a sacrifice, to accomplish a vow, or as a free will offering, or in your set feasts, to make a pleasant aroma to the LORD, of the herd, or of the flock—
- American Standard Version (ASV)
- and will make an offering by fire unto Jehovah, a burnt-offering, or a sacrifice, to accomplish a vow, or as a freewill-offering, or in your set feasts, to make a sweet savor unto Jehovah, of the herd, or of the flock;
- Bible in Basic English (BBE)
- And are going to make an offering by fire to the Lord, a burned offering or an offering in connection with an oath, or an offering freely given, or at your regular feasts, an offering for a sweet smell to the Lord, from the herd or the flock:
- Darby Translation (DBY)
- and will make an offering by fire to Jehovah, a burnt-offering or a sacrifice for the performance of a vow, or as a voluntary offering, or in your set feasts, to make a sweet odour to Jehovah, of the herd or of the flock,
- Webster's Bible (WBS)
- And will make an offering by fire to the LORD, a burnt-offering, or a sacrifice in performing a vow, or in a free-will-offering, or in your solemn feasts, to make a sweet savor to the LORD, of the herd, or of the flock:
- Young's Literal Translation (YLT)
- then ye have prepared a fire-offering to Jehovah, a burnt-offering, or a sacrifice, at separating a vow or free-will-offering, or in your appointed things, to make a sweet fragrance to Jehovah, out of the herd, or out of the flock.
Read in context
- 1ಕರ್ತನು ಮೋಶೆಗೆ--
- 2ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
- 3ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
- 4ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
- 5ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.
Cross references
- Exodus 29:18 ವಿಮೋಚನಕಾಂಡ 29:18ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Numbers 28:27 ಅರಣ್ಯಕಾಂಡ 28:27ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- Leviticus 1:1–17 ಯಾಜಕಕಾಂಡ 1:1–17ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು. ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು. ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು. ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಆ ದಹನಬಲಿಯ ಚರ್ಮವನ್ನು ಸುಲಿದು ಅದನ್ನು ತುಂಡುಗಳನ್ನಾಗಿ ಮಾಡಬೇಕು. ಯಾಜಕನಾದ ಆರೋನನ ಕುಮಾ ರರು ಯಜ್ಞವೇದಿಯ ಮೇಲೆ ಬೆಂಕಿ ಇಟ್ಟು ಆ ಬೆಂಕಿಯ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು. ಆಗ ಆರೋನನ ಕುಮಾರರಾದ ಯಾಜಕರು ಅದರ ಭಾಗಗಳನ್ನು ಅಂದರೆ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು; ಅದರ ಕರುಳುಗಳನ್ನೂ ಕಾಲುಗಳನ್ನೂ ಅವನು ನೀರಿನಲ್ಲಿ ತೊಳೆಯಬೇಕು; ಯಾಜಕನು ಎಲ್ಲವನ್ನೂ ಯಜ್ಞವೇದಿಯ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ ಕರ್ತನಿಗೆ ಸುವಾಸನೆಯಾಗು ವಂತೆಯೂ ಸುಡಬೇಕು. ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು. ಅವನು ಅದನ್ನು ಯಜ್ಞವೇದಿಯ ಉತ್ತರದ ಕಡೆಯಲ್ಲಿ ಕರ್ತನ ಮುಂದೆ ವಧಿಸಬೇಕು. ಇದಲ್ಲದೆ ಆರೋನನ ಕುಮಾರ ರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಅವನು ಅದರ ತಲೆ ಮತ್ತು ಕೊಬ್ಬಿನೊಂದಿಗೆ ತುಂಡುಗಳನ್ನಾಗಿ ಮಾಡ ಬೇಕು. ಯಾಜಕನು ಅವುಗಳನ್ನು ಕ್ರಮವಾಗಿ ಯಜ್ಞ ವೇದಿಯ ಮೇಲಿನ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಇಡಬೇಕು. ಆದರೆ ಅವನು ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು; ಆಗ ಯಾಜಕನು ಅವೆಲ್ಲವುಗಳನ್ನು ತಂದು ಯಜ್ಞವೇದಿಯ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿಯ ಹಾಗೆಯೂ ಕರ್ತನಿಗೆ ಸುವಾಸನೆ ಯಾಗುವಂತೆಯೂ ಸುಡಬೇಕು. ಅವನು ಕರ್ತನಿಗೆ ಸಮರ್ಪಿಸುವ ದಹನಬಲಿಯು ಪಕ್ಷಿಗಳಾಗಿದ್ದರೆ ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯ ನ್ನಾಗಲಿ ಪಾರಿವಾಳದ ಮರಿಯನ್ನಾಗಲಿ ತರಬೇಕು. ಆಗ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು ಅದರ ತಲೆಯನ್ನು ಮುರಿದು ಯಜ್ಞವೇದಿಯ ಮೇಲೆ ಸುಡಬೇಕು; ಅದರ ರಕ್ತವನ್ನು ಯಜ್ಞವೇದಿಯ ಹೊರಬದಿಯಲ್ಲಿ ಹಿಂಡಬೇಕು. ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು. ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- Leviticus 23:1–44 ಯಾಜಕಕಾಂಡ 23:1–44ತರುವಾಯ ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ, ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು. ನೀವು ಅವುಗಳ ಕಾಲಗಳಲ್ಲಿ ಪ್ರಕಟಿಸಬೇಕಾದ ಪವಿತ್ರ ಸಭಾಕೂಟ ಗಳೂ ಕರ್ತನ ಹಬ್ಬಗಳೂ ಇವೇ. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು. ಮೊದಲನೆಯ ದಿನದಲ್ಲಿ ನಿಮಗೆ ಪವಿತ್ರ ಸಭಾಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಏಳು ದಿವಸ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು; ಏಳನೆಯ ದಿನದಲ್ಲಿ ಪರಿಶುದ್ಧ ಸಭಾ ಕೂಟವಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿ (ಬೆಳೆ)ಯನ್ನು ಕೊಯಿದರೆ ನಿಮ್ಮ ಸುಗ್ಗಿಯ ಮೊದಲನೆಯ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು. ನೀವು ಸಿವುಡನ್ನು ಆಡಿಸುವ ದಿನದಲ್ಲಿ ಕರ್ತನಿಗೆ ದಹನಬಲಿಯಾಗಿ ಸಮರ್ಪಿಸು ವಂತೆ ಒಂದು ವರುಷದ ಮತ್ತು ದೋಷವಿಲ್ಲದ ಕುರಿ ಮರಿಯನ್ನು ಅರ್ಪಿಸಬೇಕು. ಕರ್ತನಿಗೆ ಸುಗಂಧ ವಾಸನೆಯಾಗುವಂತೆ ಬೆಂಕಿಯಿಂದ ಮಾಡುವ ಆಹಾರ ಸಮರ್ಪಣೆಯು ಎಣ್ಣೇ ಮಿಶ್ರಿತವಾದ ನಯವಾದ ಹಿಟ್ಟಿನ ಹತ್ತರಲ್ಲಿ ಎರಡು ಪಾಲು ಇರಬೇಕು. ಪಾನ ಸಮರ್ಪಣೆಯು ಒಂದು ಹಿನ್ನಿನ ನಾಲ್ಕನೆಯ ಪಾಲು ದ್ರಾಕ್ಷಾರಸವಾಗಿರಬೇಕು. ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಸಮರ್ಪಣೆಯನ್ನು ತರುವ ವರೆಗೆ ರೊಟ್ಟಿಯನ್ನಾಗಲಿ ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ಸಬ್ಬತ್ತಿನ ಮಾರನೆಯ ದಿನ ನೀವು ಆಡಿಸುವ ಬಲಿಯಾದ ಸಿವುಡನ್ನು ತಂದ ದಿನದಿಂದ ಏಳು ಸಬ್ಬತ್ತು ಗಳು ಪೂರ್ಣವಾಗುವ ವರೆಗೆ ಲೆಕ್ಕಿಸಬೇಕು. ಏಳ ನೆಯ ಸಬ್ಬತ್ತಿನ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಕರ್ತನಿಗೆ ಹೊಸ ಆಹಾರ ಬಲಿಯನ್ನು ಅರ್ಪಿಸಬೇಕು. ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು. ಇದಲ್ಲದೆ ನೀವು ರೊಟ್ಟಿಯೊಂದಿಗೆ ದೋಷವಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದು ಎಳೇ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸ ಬೇಕು; ಅವು ಕರ್ತನಿಗೆ ದಹನಬಲಿಯಾಗಿರುವವು. ಅವುಗಳೊಂದಿಗೆ ಆಹಾರ ಬಲಿಯು ಪಾನಾರ್ಪಣೆಗಳು ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು. ತರುವಾಯ ಆಡುಗಳೊ ಳಗೆ ಒಂದು ಮರಿಯನ್ನು ಪಾಪಬಲಿಯಾಗಿಯೂ ಮತ್ತು ಒಂದು ವರುಷದ ಎರಡು ಕುರಿಮರಿಗಳನ್ನು ಸಮಾಧಾನ ಯಜ್ಞಬಲಿಗಳಾಗಿಯೂ ಅರ್ಪಿಸಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು. ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು. ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು. ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು. ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು. ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Leviticus 22:18–23 ಯಾಜಕಕಾಂಡ 22:18–23ಆರೋನನೊಂದಿಗೂ ಅವನ ಕುಮಾರರೊಂದಿಗೂ ಇಸ್ರಾಯೇಲ್ ಎಲ್ಲಾ ಮಕ್ಕ ಳೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದ ದ್ದೇನಂದರೆ--ಇಸ್ರಾಯೇಲ್ ಮನೆತನದವರಲ್ಲಾಗಲಿ ಇಸ್ರಾಯೇಲ್ಯರ ಪರಕೀಯರಲ್ಲಾಗಲಿ ಯಾವನಾದರೂ ತನ್ನ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಕರ್ತನಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ ನೀವು ನಿಮ್ಮ ಸ್ವಇಚ್ಛೆಯಿಂದ ಪಶುಗಳೊಳಗೆ ಕುರಿಗಳೊಳಗೆ ಇಲ್ಲವೆ ಮೇಕೆಗಳೊಳಗೆ ದೋಷವಿಲ್ಲದ ಗಂಡಾಗಿರುವದನ್ನು ಅರ್ಪಿಸಬೇಕು; ಆದರೆ ದೋಷವಿರುವ ಯಾವದನ್ನೂ ಸಮರ್ಪಿಸ ಬಾರದು; ಅದು ನಿಮಗೋಸ್ಕರ ಅಂಗೀಕಾರವಾಗು ವದಿಲ್ಲ. ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
- Numbers 28:16–19 ಅರಣ್ಯಕಾಂಡ 28:16–19ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
- Leviticus 27:2 ಯಾಜಕಕಾಂಡ 27:2ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Numbers 29:1–2 ಅರಣ್ಯಕಾಂಡ 29:1–2ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು. ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು.
- Deuteronomy 12:11 ಧರ್ಮೋಪದೇಶಕಾಂಡ 12:11ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
Original words (Hebrew)
- make · H6213עָשָׂה ʻâsâh
- fire · H801אִשָּׁה ʼishshâh
- offering · H5930עֹלָה ʻôlâh
- sacrifice · H2077זֶבַח zebach
- performing · H6381פָּלָא pâlâʼ
- vow · H5088נֶדֶר neder
- offering · H5071נְדָבָה nᵉdâbâh
- feasts · H4150מוֹעֵד môwʻêd
- make · H6213עָשָׂה ʻâsâh
- sweet · H5207נִיחוֹחַ nîychôwach
- savour · H7381רֵיחַ rêyach
- herd · H1241בָּקָר bâqâr
- flock · H6629צֹאן tsôʼn