Numbers · chapter 15 · verse 35
Numbers 15:35 in Kannada
ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
Aaga kartanu moshege--aa manushyanu khanditavaa giyoo saayalebeku; sabheyellaa paaleyada horage avanannu kalleseyabeku endu helidanu.
Numbers 15:35 in English
- King James Version (KJV)
- And the LORD said unto Moses, The man shall be surely put to death: all the congregation shall stone him with stones without the camp.
- World English Bible (WEB)
- The LORD said to Moses, “The man shall surely be put to death. All the congregation shall stone him with stones outside of the camp.”
- American Standard Version (ASV)
- And Jehovah said unto Moses, The man shall surely be put to death: all the congregation shall stone him with stones without the camp.
- Bible in Basic English (BBE)
- Then the Lord said to Moses, Certainly the man is to be put to death: let him be stoned by all the people outside the tent-circle.
- Darby Translation (DBY)
- And Jehovah said to Moses, The man shall certainly be put to death: the whole assembly shall stone him with stones outside the camp.
- Webster's Bible (WBS)
- And the LORD said to Moses, The man shall surely be put to death: all the congregation shall stone him with stones without the camp.
- Young's Literal Translation (YLT)
- And Jehovah saith unto Moses, 'The man is certainly put to death, all the company stoning him with stones, at the outside of the camp.'
Read in context
- 33ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
- 34ಅವ ನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ ಅವನನ್ನು ಕಾವಲಲ್ಲಿ ಹಾಕಿದರು.
- 35ಆಗ ಕರ್ತನು ಮೋಶೆಗೆ--ಆ ಮನುಷ್ಯನು ಖಂಡಿತವಾ ಗಿಯೂ ಸಾಯಲೇಬೇಕು; ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆಯಬೇಕು ಎಂದು ಹೇಳಿದನು.
- 36ಆಗ ಸಭೆಯೆಲ್ಲಾ ಅವನನ್ನು ಪಾಳೆಯದ ಹೊರಗೆ ತಕ್ಕೊಂಡು ಹೋಗಿ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಸಾಯುವ ಹಾಗೆ ಅವನಿಗೆ ಕಲ್ಲೆಸೆದರು.
- 37ಕರ್ತನು ಮೋಶೆಗೆ--ಹೇಳಿದ್ದೇನಂದರೆ
Cross references
- Acts 7:58 ಅಪೊಸ್ತಲರ ಕೃತ್ಯಗಳು 7:58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- Exodus 31:14–15 ವಿಮೋಚನಕಾಂಡ 31:14–15ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು. ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- Leviticus 24:14–16 ಯಾಜಕಕಾಂಡ 24:14–16ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ. ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಕರ್ತನ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು ಮತ್ತು ಸಭೆಯವರೆಲ್ಲರು ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ದೇಶದೊಳಗೆ ಹುಟ್ಟಿದ ಪರಕೀಯನು ಕರ್ತನ ಹೆಸರನ್ನು ದೂಷಣೆ ಮಾಡಿದಾಗ ಅವನನ್ನು ಮರಣಕ್ಕೆ ಒಳಪಡಿಸಬೇಕು.
- Deuteronomy 21:21 ಧರ್ಮೋಪದೇಶಕಾಂಡ 21:21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Leviticus 24:23 ಯಾಜಕಕಾಂಡ 24:23ಶಪಿಸಿದವನನ್ನು ಪಾಳೆಯದ ಹೊರಗೆ ತಂದು ಅವನನ್ನು ಕಲ್ಲೆಸೆಯುವಂತೆ ಮೋಶೆಯು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳು ಮಾಡಿದರು.
- Leviticus 20:2 ಯಾಜಕಕಾಂಡ 20:2ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
- Hebrews 13:11–12 ಇಬ್ರಿಯರಿಗೆ 13:11–12ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ; ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.