Numbers · chapter 15 · verse 41
Numbers 15:41 in Kannada
ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
Naanu nimma devaraagiruva haage nimmannu aigupta desha dolaginda horage tanda nimma kartanaagiruva devaru naane. Nimma devaraagiruva kartanu naane.
Numbers 15:41 in English
- King James Version (KJV)
- I [am] the LORD your God, which brought you out of the land of Egypt, to be your God: I [am] the LORD your God.
- World English Bible (WEB)
- I am the LORD your God, who brought you out of the land of Egypt, to be your God: I am the LORD your God.”
- American Standard Version (ASV)
- I am Jehovah your God, who brought you out of the land of Egypt, to be your God: I am Jehovah your God.
- Bible in Basic English (BBE)
- I am the Lord your God, who took you out of the land of Egypt, so that I might be your God: I am the Lord your God.
- Darby Translation (DBY)
- I am Jehovah your God, who brought you out of the land of Egypt to be your God: I am Jehovah your God.
- Webster's Bible (WBS)
- I [am] the LORD your God, who brought you out of the land of Egypt, to be your God: I [am] the LORD your God.
- Young's Literal Translation (YLT)
- I [am] Jehovah your God, who hath brought you out from the land of Egypt to become your God; I, Jehovah, [am] your God.'
Read in context
- 39ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
- 40ನನ್ನ ಆಜ್ಞೆಗಳನ್ನೆಲ್ಲಾ ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ದೇವರಿಗೆ ಪರಿಶುದ್ಧರಾಗಿರುವಿರಿ.ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
- 41ನಾನು ನಿಮ್ಮ ದೇವರಾಗಿರುವ ಹಾಗೆ ನಿಮ್ಮನ್ನು ಐಗುಪ್ತ ದೇಶ ದೊಳಗಿಂದ ಹೊರಗೆ ತಂದ ನಿಮ್ಮ ಕರ್ತನಾಗಿರುವ ದೇವರು ನಾನೇ. ನಿಮ್ಮ ದೇವರಾಗಿರುವ ಕರ್ತನು ನಾನೇ.
Cross references
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Leviticus 25:38 ಯಾಜಕಕಾಂಡ 25:38ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.
- Jeremiah 32:37–41 ಯೆರೆಮೀಯ 32:37–41ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು. ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Leviticus 22:33 ಯಾಜಕಕಾಂಡ 22:33ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
- Hebrews 11:16 ಇಬ್ರಿಯರಿಗೆ 11:16ಆದರೆ ಈಗ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವ ರಾಗಿದ್ದಾರೆ. ಆದದರಿಂದ ದೇವರು ಅವರ ದೇವರೆನಿ ಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾನೆ.
- Ezekiel 36:25–27 ಯೆಹೆಜ್ಕೇಲನು 36:25–27ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Jeremiah 31:31–33 ಯೆರೆಮೀಯ 31:31–33ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Psalm 105:45 ಕೀರ್ತನೆಗಳು 105:45ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.