Numbers · chapter 16 · verse 21
Numbers 16:21 in Kannada
ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
Ee sabheya madhyadolaginda nimmannu pratyekisikolliri. Naanu avarannu kshanamaatra dalli dahisibiduttene andanu.
Numbers 16:21 in English
- King James Version (KJV)
- Separate yourselves from among this congregation, that I may consume them in a moment.
- World English Bible (WEB)
- “Separate yourselves from among this congregation, that I may consume them in a moment!”
- American Standard Version (ASV)
- Separate yourselves from among this congregation, that I may consume them in a moment.
- Bible in Basic English (BBE)
- Come out from among this people, so that I may send sudden destruction on them.
- Darby Translation (DBY)
- Separate yourselves from the midst of this assembly, and I will consume them in a moment.
- Webster's Bible (WBS)
- Separate yourselves from among this congregation, that I may consume them in a moment.
- Young's Literal Translation (YLT)
- 'Be ye separated from the midst of this company, and I consume them in a moment;'
Read in context
- 19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
- 20ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ--
- 21ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
- 22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- 23ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
Cross references
- Numbers 16:45 ಅರಣ್ಯಕಾಂಡ 16:45ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
- Exodus 32:10 ವಿಮೋಚನಕಾಂಡ 32:10ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- Exodus 33:5 ವಿಮೋಚನಕಾಂಡ 33:5ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Psalm 73:19 ಕೀರ್ತನೆಗಳು 73:19ಕ್ಷಣಮಾತ್ರದಲ್ಲಿ ಹೀಗೆ ನಾಶನಕ್ಕೆ ಅವರನ್ನು ಬರಮಾಡಿದಿ. ಅವರು ದಿಗಿಲುಗಳಿಂದ ಸಂಪೂರ್ಣವಾಗಿ ನಾಶವಾಗಿದ್ದಾರೆ.
- Hebrews 12:28–29 ಇಬ್ರಿಯರಿಗೆ 12:28–29ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Genesis 19:15–22 ಆದಿಕಾಂಡ 19:15–22ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು. ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು; ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು. ಲೋಟನು ಅವರಿಗೆ--ಹಾಗಲ್ಲ, ನನ್ನ ಕರ್ತನೇ, ಇಗೋ, ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ಕೃಪೆಯನ್ನು ಘನಪಡಿಸಿದ್ದೀ. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗಲಾರೆನು; ನನಗೆ ಕೇಡು ಉಂಟಾಗಿ ನಾನು ಸತ್ತೇನು; ಇಗೋ, ಈ ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು. ಆತನು ಅವನಿಗೆ--ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ, ನೋಡು; ನೀನು ಹೇಳಿದ ಆ ಪಟ್ಟಣವನ್ನು ಕೆಡವಿಹಾಕುವದಿಲ್ಲ. ತ್ವರೆಯಾಗಿ ತಪ್ಪಿಸಿಕೊಂಡು ಅಲ್ಲಿಗೆ ಹೋಗು; ಯಾಕಂದರೆ ನೀನು ಅಲ್ಲಿಗೆ ಹೋಗುವ ವರೆಗೆ ನಾನೇನೂ ಮಾಡಲಾರೆನು ಅಂದನು. ಆದದರಿಂದ ಆ ಪಟ್ಟಣಕ್ಕೆ ಚೋಗರ್ ಎಂದು ಹೆಸರಾಯಿತು.
- Numbers 14:15 ಅರಣ್ಯಕಾಂಡ 14:15ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--
- Isaiah 37:36 ಯೆಶಾಯ 37:36ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
- Numbers 14:12 ಅರಣ್ಯಕಾಂಡ 14:12ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.
- Jeremiah 5:16 ಯೆರೆಮೀಯ 5:16ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ; ಅವರೆಲ್ಲರೂ ಪರಾಕ್ರಮ ಶಾಲಿಗಳೇ.
- Acts 2:40 ಅಪೊಸ್ತಲರ ಕೃತ್ಯಗಳು 2:40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.