Numbers · chapter 18 · verse 10
Numbers 18:10 in Kannada
ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
Neenu adannu parishuddha sthaladalli tinnabeku; ellaa gandasaru adannu tinnabeku. Adu ninage parishuddhavaagiruvadu.
Numbers 18:10 in English
- King James Version (KJV)
- In the most holy [place] shalt thou eat it; every male shall eat it: it shall be holy unto thee.
- World English Bible (WEB)
- You shall eat of it like the most holy things. Every male shall eat of it. It shall be holy to you.
- American Standard Version (ASV)
- As the most holy things shalt thou eat thereof; every male shall eat thereof: it shall be holy unto thee.
- Bible in Basic English (BBE)
- As most holy things they are to be your food: let every male have them for food; it is to be holy to you.
- Darby Translation (DBY)
- As most holy shalt thou eat it: every male shall eat it; it shall be holy unto thee.
- Webster's Bible (WBS)
- In the most holy [place] shalt thou eat it; every male shall eat it: it shall be holy to thee.
- Young's Literal Translation (YLT)
- in the holy of holies thou dost eat it; every male doth eat it; holy it is to thee.
Read in context
- 8ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
- 9ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.
- 10ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- 11ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
- 12ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
Cross references
- Leviticus 7:6 ಯಾಜಕಕಾಂಡ 7:6ಯಾಜಕರಲ್ಲಿ ಗಂಡಸರೆಲ್ಲರೂ ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಅತಿ ಪರಿಶುದ್ಧವಾದದ್ದು.
- Leviticus 6:29 ಯಾಜಕಕಾಂಡ 6:29ಯಾಜಕರಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು; ಅದು ಅತಿ ಪರಿಶುದ್ಧವಾದದ್ದು.ಯಾವ ಪಾಪದ ಬಲಿಯ ರಕ್ತವು ಸಭೆಯ ಡೇರೆಯೊಳಗೆ ಸಮಾಧಾನಕ್ಕಾಗಿ ತರಲ್ಪಟ್ಟಿತೋ ಆ ಪಾಪದ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು; ಅದನ್ನು ಬೆಂಕಿಯಿಂದ ಸುಡಬೇಕು.
- Leviticus 6:16 ಯಾಜಕಕಾಂಡ 6:16ಅದ ರಲ್ಲಿ ಉಳಿದದ್ದನ್ನು ಆರೋನನೂ ಅವನ ಕುಮಾರರೂ ತಿನ್ನಬೇಕು; ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು; ಅದನ್ನು ಅವರು ಸಭೆಯ ಗುಡಾರದ ಅಂಗಳದಲ್ಲಿ ತಿನ್ನಬೇಕು.
- Leviticus 6:18 ಯಾಜಕಕಾಂಡ 6:18ಆರೋನನ ಮಕ್ಕಳಲ್ಲಿ ಎಲ್ಲಾ ಗಂಡು ಮಕ್ಕಳು ಅದನ್ನು ತಿನ್ನಬೇಕು, ಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವದು; ಅವುಗಳನ್ನು ಮುಟ್ಟುವ ಪ್ರತಿ ಯೊಬ್ಬನು ಪರಿಶುದ್ಧನಾಗಿರಬೇಕು ಅಂದನು.
- Leviticus 14:13 ಯಾಜಕಕಾಂಡ 14:13ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
- Leviticus 10:13 ಯಾಜಕಕಾಂಡ 10:13ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.
- Leviticus 6:26 ಯಾಜಕಕಾಂಡ 6:26ಪಾಪಕ್ಕಾಗಿ ಸಮರ್ಪಣೆ ಮಾಡುವ ಯಾಜಕನು ಅದನ್ನು ತಿನ್ನಬೇಕು; ಅದನ್ನು ಸಭೆಯ ಗುಡಾರ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.
- Exodus 29:31–32 ವಿಮೋಚನಕಾಂಡ 29:31–32ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು. ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು.
- Leviticus 10:17 ಯಾಜಕಕಾಂಡ 10:17ಅದು ಅತಿ ಪರಿಶುದ್ಧವಾದದರಿಂದಲೂ ಕರ್ತನ ಸನ್ನಿಧಿಯಲ್ಲಿ ಅವ ರಿಗಾಗಿ ಪ್ರಾಯಶ್ಚಿತ್ತಮಾಡುವದಕ್ಕಾಗಿಯೂ ಸಭೆಯ ಅಪರಾಧವನ್ನು ಹೊರುವದಕ್ಕಾಗಿ ದೇವರು ಅದನ್ನು ಕೊಟ್ಟದ್ದೆಂದೂ ನೀವು ತಿಳಿದು ಪಾಪಬಲಿಯನ್ನು ಪರಿ ಶುದ್ಧವಾದ ಸ್ಥಳದಲ್ಲಿ ಯಾಕೆ ತಿನ್ನಲಿಲ್ಲ?
- Leviticus 21:22 ಯಾಜಕಕಾಂಡ 21:22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.