Numbers · chapter 18 · verse 5
Numbers 18:5 in Kannada
ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
Israayel makkala mele innu munde endigoo raudravu baaradahaage parishuddha sthalada aajnyeyannoo balipeethada aajnyeyannoo neevu kaapaadabeku.
Numbers 18:5 in English
- King James Version (KJV)
- And ye shall keep the charge of the sanctuary, and the charge of the altar: that there be no wrath any more upon the children of Israel.
- World English Bible (WEB)
- “You shall perform the duty of the sanctuary and the duty of the altar, that there be no more wrath on the children of Israel.
- American Standard Version (ASV)
- And ye shall keep the charge of the sanctuary, and the charge of the altar; that there be wrath no more upon the children of Israel.
- Bible in Basic English (BBE)
- You are to be responsible for the holy place and the altar, so that wrath may never again come on the children of Israel.
- Darby Translation (DBY)
- And ye shall keep the charge of the sanctuary, and the charge of the altar; that there come no wrath any more upon the children of Israel.
- Webster's Bible (WBS)
- And ye shall keep the charge of the sanctuary, and the charge of the altar: that there be no wrath any more upon the children of Israel.
- Young's Literal Translation (YLT)
- and ye have kept the charge of the sanctuary, and the charge of the altar, and there is no more wrath against the sons of Israel.
Read in context
- 3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
- 4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
- 5ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು.
- 6ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ.
- 7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
Cross references
- Exodus 27:21 ವಿಮೋಚನಕಾಂಡ 27:21ಸಭೆಯ ಗುಡಾರ ದಲ್ಲಿ ಮಂಜೂಷದ ಮುಂದೆ ಇರುವ ತೆರೆಯ ಹೊರಗೆ ಅರೋನನೂ ಅವನ ಮಕ್ಕಳೂ ಅದನ್ನು ಸಾಯಂಕಾಲ ದಿಂದ ಉದಯದ ವರೆಗೂ ಕರ್ತನ ಮುಂದೆ ದೀಪ ವನ್ನು ಸರಿಪಡಿಸುತ್ತಿರಬೇಕು. ಇದು ಇಸ್ರಾಯೇಲ್ ಮಕ್ಕಳ ಪರವಾಗಿ ಅವರ ಸಂತತಿಯವರಿಗೆ ಶಾಶ್ವತವಾದ ಕಟ್ಟಳೆಯಾಗಿರಬೇಕು.
- Leviticus 24:3 ಯಾಜಕಕಾಂಡ 24:3ಸಭೆಯ ಗುಡಾರದೊಳಗೆ ಸಾಕ್ಷಿಯ ಪರದೆಯ ಹೊರಗಡೆ ಕರ್ತನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ವರೆಗೂ ಇರುವಂತೆ ಆರೋನನು ಅದನ್ನು ಕ್ರಮಪಡಿಸಬೇಕು. ಇದು ನಿಮ್ಮ ಸಂತತಿಯವರೊಳಗೆ ಶಾಶ್ವತವಾದ ನಿಯಮವಾಗಿ ರುವದು.
- Numbers 16:46 ಅರಣ್ಯಕಾಂಡ 16:46ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
- Numbers 8:19 ಅರಣ್ಯಕಾಂಡ 8:19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
- Zechariah 10:3 ಜೆಕರ್ಯ 10:3ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
- 1 Timothy 5:21 1 ತಿಮೊಥೆಯನಿಗೆ 5:21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- 1 Timothy 6:20 1 ತಿಮೊಥೆಯನಿಗೆ 6:20ಓ ತಿಮೊಥೆಯನೇ, ಅಪಭ್ರಷ್ಟವಾದ ವ್ಯರ್ಥ ಮಾತುಗಳಿಗೂ ಸುಳ್ಳು ಹೆಸರುಳ್ಳ ಜ್ಞಾನದ ತರ್ಕ ಗಳಿಗೂ ತಪ್ಪಿಸಿಕೊಂಡು ನಿನ್ನ ವಶಕ್ಕೆ ಕೊಟ್ಟಿರುವದನು ಕಾಪಾಡು.ಕೆಲವರು ಆ ಸುಳ್ಳಾದ ಜ್ಞಾನವನ್ನು ಹೇಳಿಕೊಂಡು ನಂಬಿಕೆಯಿಂದ ತಪ್ಪಿಹೋದರು. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 1 Chronicles 24:5 1 ಪೂರ್ವಕಾಲವೃತ್ತಾಂತ 24:5ಇವರು ಅವರ ಸಂಗಡ ಬೆರೆತಿದ್ದು ಚೀಟು ಗಳಿಂದ ವಿಭಾಗಿಸಲ್ಪಟ್ಟಿದ್ದರು; ಪರಿಶುದ್ಧ ಸ್ಥಾನದ ಪ್ರಧಾನರೂ ದೈವೀಕ ಕಾರ್ಯಗಳಲ್ಲಿ ಪ್ರಧಾನರೂ ಎಲ್ಲಾಜಾರನ ಕುಮಾರರಿಂದಲೂ ಈತಾಮಾರನ ಕುಮಾರರಿಂದಲೂ ಇದ್ದರು.
- 1 Timothy 1:18 1 ತಿಮೊಥೆಯನಿಗೆ 1:18ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
- 1 Chronicles 9:19 1 ಪೂರ್ವಕಾಲವೃತ್ತಾಂತ 9:19ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
- 1 Chronicles 9:33 1 ಪೂರ್ವಕಾಲವೃತ್ತಾಂತ 9:33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- 1 Timothy 3:15 1 ತಿಮೊಥೆಯನಿಗೆ 3:15ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ