Numbers · chapter 20 · verse 14
Numbers 20:14 in Kannada
ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
Idallade mosheyu kaadeshininda edomina arasana balige dootarannu kaluhisi heliddenandare--ninna sahodaranaada israaye lanu heluvadenandare--namage untaada sakala aayaasavannu neenu aritiddee.
Numbers 20:14 in English
- King James Version (KJV)
- And Moses sent messengers from Kadesh unto the king of Edom, Thus saith thy brother Israel, Thou knowest all the travail that hath befallen us:
- World English Bible (WEB)
- Moses sent messengers from Kadesh to the king of Edom, saying: “Your brother Israel says: You know all the travail that has happened to us;
- American Standard Version (ASV)
- And Moses sent messengers from Kadesh unto the king of Edom, Thus saith thy brother Israel, Thou knowest all the travail that hath befallen us:
- Bible in Basic English (BBE)
- Then Moses sent men from Kadesh to the king of Edom to say to him, Your brother Israel says, You have knowledge of all the things we have been through;
- Darby Translation (DBY)
- And Moses sent messengers from Kadesh to the king of Edom, Thus says thy brother Israel: Thou knowest all the trouble that hath befallen us,
- Webster's Bible (WBS)
- And Moses sent messengers from Kadesh to the king of Edom, Thus saith thy brother Israel, Thou knowest all the travail that hath befallen us:
- Young's Literal Translation (YLT)
- And Moses sendeth messengers from Kadesh unto the king of Edom, 'Thus said thy brother Israel, Thou — thou hast known all the travail which hath found us;
Read in context
- 12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- 13ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
- 14ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.
- 15ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
- 16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
Cross references
- Judges 11:16–17 ನ್ಯಾಯಸ್ಥಾಪಕರು 11:16–17ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.
- Deuteronomy 23:7 ಧರ್ಮೋಪದೇಶಕಾಂಡ 23:7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- Deuteronomy 2:4–25 ಧರ್ಮೋಪದೇಶಕಾಂಡ 2:4–25ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು. ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ. ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು. ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು. ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು. ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು. ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು. ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು. ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು. ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು. ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು. ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ ಕರ್ತನು ನನಗೆ--ಇಂದು ನೀನು ಮೋವಾಬಿನ ಮೇರೆಯಾದ ಆರ್ ಅನ್ನು ದಾಟಬೇಕು; ಅಮ್ಮೋನನ ಮಕ್ಕಳೆದುರಿಗೆ ನೀನು ಬಂದರೆ ಅವರಿಗೆ ಉಪದ್ರ ಕೊಡಬೇಡ; ಅವರ ಸಂಗಡ ಜಗಳವಾಡ ಬೇಡ; ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು. (ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು. ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು. ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ. ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.) ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು. ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
- Obadiah 1:10–12 ಓಬದ್ಯ 1:10–12ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;
- Malachi 1:2 ಮಲಾಕಿಯ 1:2ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
- Genesis 36:31–39 ಆದಿಕಾಂಡ 36:31–39ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ. ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು; ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು. ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು. ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್. ಹದದನು ಸತ್ತಾಗ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಆಳಿದನು. ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು. ಸೌಲನು ಸತ್ತ ಮೇಲೆ ಅವನ ಬದಲಾಗಿ ಅಕ್ಬೋರನ ಮಗನಾದ ಬಾಳ್ಹಾನಾ ನನು ಆಳಿದನು. ಅಕ್ಬೋರನ ಮಗನಾದ ಬಾಳ್ಹಾನಾ ನನು ಸತ್ತ ಮೇಲೆ ಅವನ ಬದಲಾಗಿ ಹದರನು ಆಳಿದನು. ಅವನ ಪಟ್ಟಣದ ಹೆಸರು ಪಾಗು. ಅವನ ಹೆಂಡತಿಯ ಹೆಸರು ಮಹೇಟಬೇಲ್; ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
- Joshua 9:9 ಯೆಹೋಶುವ 9:9ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
- Genesis 32:3–4 ಆದಿಕಾಂಡ 32:3–4ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು. ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;
- Exodus 18:8 ವಿಮೋಚನಕಾಂಡ 18:8ಇಸ್ರಾಯೇಲ್ಯರಿಗೋಸ್ಕರ ಕರ್ತನು ಫರೋಹ ನಿಗೂ ಐಗುಪ್ತ್ಯರಿಗೂ ಮಾಡಿದ್ದೆಲ್ಲವನ್ನೂ ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಕರ್ತನು ತಮ್ಮನ್ನು ಹೇಗೆ ತಪ್ಪಿಸಿದನೆಂಬದನ್ನೂ ಮೋಶೆಯು ತನ್ನ ಮಾವ ನಿಗೆ ತಿಳಿಯಪಡಿಸಿದನು.
Original words (Hebrew)
- Moses · H4872מֹשֶׁה Môsheh
- sent · H7971שָׁלַח shâlach
- messengers · H4397מֲלְאָךְ mălʼâk
- Kadesh · H6946קָדֵשׁ Qâdêsh
- king · H4428מֶלֶךְ melek
- Edom · H123אֱדֹם ʼĔdôm
- saith · H559אָמַר ʼâmar
- brother · H251אָח ʼâch
- Israel · H3478יִשְׂרָאֵל Yisrâʼêl
- knowest · H3045יָדַע yâdaʻ
- travail · H8513תְּלָאָה tᵉlâʼâh
- befallen · H4672מָצָא mâtsâʼ