Numbers · chapter 20 · verse 2
Numbers 20:2 in Kannada
ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
Aaga sabhege neerillade iralaagi avaru moshegoo aaronanigoo virodhavaagi koodi kondaru.
Numbers 20:2 in English
- King James Version (KJV)
- And there was no water for the congregation: and they gathered themselves together against Moses and against Aaron.
- World English Bible (WEB)
- There was no water for the congregation; and they assembled themselves together against Moses and against Aaron.
- American Standard Version (ASV)
- And there was no water for the congregation: and they assembled themselves together against Moses and against Aaron.
- Bible in Basic English (BBE)
- And there was no water for the people: and they came together against Moses and against Aaron.
- Darby Translation (DBY)
- And there was no water for the assembly, and they gathered themselves together against Moses and against Aaron.
- Webster's Bible (WBS)
- And there was no water for the congregation: and they assembled themselves against Moses and against Aaron.
- Young's Literal Translation (YLT)
- And there hath been no water for the company, and they are assembled against Moses, and against Aaron,
Read in context
- 1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
- 2ಆಗ ಸಭೆಗೆ ನೀರಿಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿ ಕೊಂಡರು.
- 3ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
- 4ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಯಾಕೆ ಕರ್ತನ ಸಭೆಯನ್ನು ಈ ಅರಣ್ಯಕ್ಕೆ ತಂದಿರಿ?
Cross references
- Numbers 16:19 ಅರಣ್ಯಕಾಂಡ 16:19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
- Numbers 16:42 ಅರಣ್ಯಕಾಂಡ 16:42ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.
- Exodus 15:23–24 ವಿಮೋಚನಕಾಂಡ 15:23–24ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು. ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.
- Numbers 21:5 ಅರಣ್ಯಕಾಂಡ 21:5ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
- Exodus 16:7 ವಿಮೋಚನಕಾಂಡ 16:7ಬೆಳಿಗ್ಗೆ ಕರ್ತನ ಮಹಿಮೆ ಯನ್ನು ನೋಡುವಿರಿ; ಕರ್ತನಿಗೆ ವಿರೋಧವಾಗಿ ನೀವು ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ; ನಮಗೆ ವಿರೋಧ ವಾಗಿ ನೀವು ಗುಣುಗುಟ್ಟುವ ಹಾಗೆ ನಾವು ಯಾರು ಅಂದರು.
- 1 Corinthians 10:10–11 1 ಕೊರಿಂಥದವರಿಗೆ 10:10–11ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
- Exodus 16:12 ವಿಮೋಚನಕಾಂಡ 16:12ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
- Numbers 16:3 ಅರಣ್ಯಕಾಂಡ 16:3ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
- Exodus 16:2 ವಿಮೋಚನಕಾಂಡ 16:2ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
- Exodus 17:1–4 ವಿಮೋಚನಕಾಂಡ 17:1–4ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಕರ್ತನ ಅಪ್ಪಣೆಯ ಪ್ರಕಾರ ಅವರವರು ಹೊರ ಡುವ ಕ್ರಮದಂತೆ ಸೀನ್ ಅರಣ್ಯದಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯು ವದಕ್ಕೆ ನೀರು ಇರಲಿಲ್ಲ. ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು. ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು. ಆಗ ಮೋಶೆಯು ಕರ್ತನಿಗೆ ಮೊರೆಯಿಟ್ಟು--ಈ ಜನರಿಗೆ ನಾನೇನು ಮಾಡಲಿ? ಅವರು ಬಹಳ ಮಟ್ಟಿಗೆ ನನ್ನನ್ನು ಕಲ್ಲೆಸೆಯುವದಕ್ಕಿದ್ದಾರೆ ಅಂದನು.
- Numbers 11:1–6 ಅರಣ್ಯಕಾಂಡ 11:1–6ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು. ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು. ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು. ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು? ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ. ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು; ಈ ಮನ್ನವಲ್ಲದೆ ಮತ್ತೆ ಬೇರೆ ಯಾವದೂ ನಮ್ಮ ಕಣ್ಣುಗಳ ಮುಂದೆ ಇರುವದಿಲ್ಲ ಅಂದರು.