Numbers · chapter 20 · verse 28
Numbers 20:28 in Kannada
ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
Aaga mosheyu aaronana vastragalannu tegedu avana maganaada ellaajaaranige todisidanu; aaga aaronanu alle bettada tudiyalli sattanu. Mosheyoo ellaajaaranoo bettadinda ilidu bandaru.aaronanu teerihodanendu sabheyallaa nodidaaga israayelyara maneya varellaru aaronanigoskara moovattu divasada varegoo duhkhisidaru.
Numbers 20:28 in English
- King James Version (KJV)
- And Moses stripped Aaron of his garments, and put them upon Eleazar his son; and Aaron died there in the top of the mount: and Moses and Eleazar came down from the mount.
- World English Bible (WEB)
- Moses stripped Aaron of his garments, and put them on Eleazar his son. Aaron died there on the top of the mountain, and Moses and Eleazar came down from the mountain.
- American Standard Version (ASV)
- And Moses stripped Aaron of his garments, and put them upon Eleazar his son; and Aaron died there on the top of the mount: and Moses and Eleazar came down from the mount.
- Bible in Basic English (BBE)
- And Moses took off Aaron's robes, and put them on Eleazar, his son; and there on the top of the mountain death came to Aaron: then Moses and Eleazar came down from the mountain.
- Darby Translation (DBY)
- And Moses stripped Aaron of his garments, and put them upon Eleazar his son; and Aaron died there upon the top of the mountain; and Moses and Eleazar came down from the mountain.
- Webster's Bible (WBS)
- And Moses stripped Aaron of his garments, and put them upon Eleazar his son; and Aaron died there on the top of the mount: and Moses and Eleazar came down from the mount.
- Young's Literal Translation (YLT)
- and Moses strippeth Aaron of his garments, and clotheth with them Eleazar his son, and Aaron dieth there on the top of the mount; and Moses cometh down — Eleazar also — from the mount,
Read in context
- 26ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.
- 27ಕರ್ತನು ಆಜ್ಞಾಪಿಸಿದ ಪ್ರಕಾರ ಮೋಶೆಯು ಮಾಡಿದನು. ಅವರು ಸಮಸ್ತ ಸಭೆಯ ಕಣ್ಣು ಗಳಿಗೆದುರಾಗಿ ಹೋರ್ ಬೆಟ್ಟವನ್ನೇರಿದರು.
- 28ಆಗ ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು; ಆಗ ಆರೋನನು ಅಲ್ಲೆ ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
- 29ಆರೋನನು ತೀರಿಹೋದನೆಂದು ಸಭೆಯಲ್ಲಾ ನೋಡಿದಾಗ ಇಸ್ರಾಯೇಲ್ಯರ ಮನೆಯ ವರೆಲ್ಲರು ಆರೋನನಿಗೋಸ್ಕರ ಮೂವತ್ತು ದಿವಸದ ವರೆಗೂ ದುಃಖಿಸಿದರು.
Cross references
- Deuteronomy 10:6 ಧರ್ಮೋಪದೇಶಕಾಂಡ 10:6ಇದಲ್ಲದೆ ಇಸ್ರಾಯೇಲ್ ಮಕ್ಕಳು ಯಾಕಾನನ ಮಕ್ಕಳ ಬೇರೋತನ್ನು ಬಿಟ್ಟು ಮೋಸೇರಕ್ಕೆ ಹೊರಟಾಗ ಆರೋನನು ಅಲ್ಲಿ ಸತ್ತನು; ಅಲ್ಲೇ ಅವನನ್ನು ಹೂಣಿ ಟ್ಟೆವು; ಅವನ ಮಗನಾದ ಎಲ್ಲಾಜಾರನು ಅವನ ಬದಲಾಗಿ ಯಾಜಕನಾದನು.
- Exodus 29:29–30 ವಿಮೋಚನಕಾಂಡ 29:29–30ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು. ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು.
- Numbers 27:16–23 ಅರಣ್ಯಕಾಂಡ 27:16–23ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ; ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು. ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು. ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು. ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು. ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
- 1 Chronicles 22:11–12 1 ಪೂರ್ವಕಾಲವೃತ್ತಾಂತ 22:11–12ಈಗ ನನ್ನ ಮಗನೇ, ಕರ್ತನು ನಿನ್ನನ್ನು ಕುರಿತು ಹೇಳಿದ ಪ್ರಕಾರ ನೀನು ಸಫಲವನ್ನು ಹೊಂದುವ ಹಾಗೆಯೂ ನೀನು ನಿನ್ನ ದೇವರಾದ ಕರ್ತನ ಮನೆಯನ್ನು ಕಟ್ಟಿಸುವ ಹಾಗೆಯೂ ಆತನು ನಿನ್ನ ಸಂಗಡ ಇರಲಿ. ಆದರೆ ಕರ್ತನು ನಿನಗೆ ಬುದ್ಧಿಯನ್ನೂ ಗ್ರಹಿಕೆಯನ್ನೂ ಕೊಡಲಿ; ಇಸ್ರಾಯೇ ಲನ್ನು ಕುರಿತು ನಿನಗೆ ಆಜ್ಞಾಪಿಸಲಿ; ನಿನ್ನ ದೇವರಾದ ಕರ್ತನ ನ್ಯಾಯಪ್ರಮಾಣವನ್ನು ನೀನು ಕೈಕೊಳ್ಳುವ ಹಾಗೆ
- 2 Peter 1:15 2 ಪೇತ್ರನು 1:15ಹೇಗಿದ್ದರೂ ನೀವು ನನ್ನ ಮರಣಾನಂತರದಲ್ಲಿ ಇವುಗಳನ್ನು ಯಾವಾಗಲೂ ಜ್ಞಾಪಕಮಾಡಿಕೊಳ್ಳುವದು ಸಾಧ್ಯವಾಗುವಂತೆ ಪ್ರಯಾಸಪಡುವೆನು.
- Deuteronomy 32:49–50 ಧರ್ಮೋಪದೇಶಕಾಂಡ 32:49–50ಈ ಅಬಾರೀಮ್ ಪರ್ವತದ ಮೇಲೆ ಮೋವಾಬ್ ದೇಶದ ಲ್ಲಿಯೂ ಯೆರಿಕೋವಿಗೆ ಎದುರಾಗಿಯೂ ಇರುವ ನೆಬೋ ಬೆಟ್ಟದ ಮೇಲೆ ಏರಿಹೋಗು; ನಾನು ಇಸ್ರಾ ಯೇಲ್ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವ ಕಾನಾನ್ ದೇಶವನ್ನು ನೋಡು, ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು ತನ್ನ ಜನರ ಬಳಿಗೆ ಕೂಡಿಸಲ್ಪಟ್ಟ ಹಾಗೆ ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು ನಿನ್ನ ಜನರ ಬಳಿಗೆ ಕೂಡಿಸಲ್ಪಡಬೇಕು.
- Numbers 33:38–49 ಅರಣ್ಯಕಾಂಡ 33:38–49ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು. ಆರೋನನು ಹೋರ್ ಗುಡ್ಡ ದಲ್ಲಿ ಸಾಯುವಾಗ ಅವನು ನೂರ ಇಪ್ಪತ್ತು ಮೂರು ವರುಷದವನಾಗಿದ್ದನು. ಆಗ ಇಸ್ರಾಯೇಲ್ ಮಕ್ಕಳು ಬರುವದನ್ನು ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿದ್ದ ಕಾನಾನ್ಯ ರಿಗೆ ಅರಸನಾದ ಅರಾದನು ಕೇಳಿದನು. ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು. ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು. ಪೂನೋನಿ ನಿಂದ ಹೊರಟು ಒಬೋತಿನಲ್ಲಿ ಇಳಿದುಕೊಂಡರು. ಒಬೋತಿನಿಂದ ಹೊರಟು ಮೋವಾಬಿನ ಮೇರೆ ಯಲ್ಲಿರುವ ಇಯ್ಯಾಮಿನಲ್ಲಿ ಇಳಿದುಕೊಂಡರು. ಇಯ್ಯಾಮಿನಿಂದ ಹೊರಟು ದೀಬೋನ್ಗಾದಿನಲ್ಲಿ ಇಳಿದುಕೊಂಡರು. ದೀಬೋನ್ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದು ಕೊಂಡರು. ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೇಬೋವಿಗೆದುರಾಗಿರುವ ಅಬಾರೀಮ್ ಗುಡ್ಡಗಳಲ್ಲಿ ಇಳಿದುಕೊಂಡರು. ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು. ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
- 1 Chronicles 22:17 1 ಪೂರ್ವಕಾಲವೃತ್ತಾಂತ 22:17ಇದಲ್ಲದೆ ದಾವೀದನು ತನ್ನ ಮಗನಾದ ಸೊಲೊ ಮೋನನಿಗೆ ಸಹಾಯ ಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--
- Acts 20:25–29 ಅಪೊಸ್ತಲರ ಕೃತ್ಯಗಳು 20:25–29ಇಗೋ, ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು. ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು. ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ. ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ.
- Deuteronomy 34:5 ಧರ್ಮೋಪದೇಶಕಾಂಡ 34:5ಕರ್ತನ ಮಾತಿನ ಹಾಗೆ ಕರ್ತನ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಸತ್ತನು.
- Deuteronomy 31:7–8 ಧರ್ಮೋಪದೇಶಕಾಂಡ 31:7–8ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Numbers 20:26 ಅರಣ್ಯಕಾಂಡ 20:26ಆರೋನನ ವಸ್ತ್ರಗಳನ್ನು ತೆಗೆದು ಅವುಗಳನ್ನು ಅವನ ಮಗನಾದ ಎಲ್ಲಾಜಾರ ನಿಗೆ ತೊಡಿಸು; ಆರೋನನು ಅಲ್ಲಿಯೇ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಡುವನು ಎಂದು ಹೇಳಿದನು.
Original words (Hebrew)
- Moses · H4872מֹשֶׁה Môsheh
- stripped · H6584פָּשַׁט pâshaṭ
- Aaron · H175אַהֲרוֹן ʼAhărôwn
- garments · H899בֶּגֶד beged
- put · H3847לָבַשׁ lâbash
- Eleazar · H499אֶלְעָזָר ʼElʻâzâr
- son · H1121בֵּן bên
- Aaron · H175אַהֲרוֹן ʼAhărôwn
- died · H4191מוּת mûwth
- top · H7218רֹאשׁ rôʼsh
- mount · H2022הַר har
- Moses · H4872מֹשֶׁה Môsheh
- Eleazar · H499אֶלְעָזָר ʼElʻâzâr
- down · H3381יָרַד yârad
- mount · H2022הַר har