Numbers · chapter 21 · verse 21
Numbers 21:21 in Kannada
ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--
Aaga israayelyaru amoriyara arasa naada seehonana balige dootarannu kaluhisi heliddenandare--
Numbers 21:21 in English
- King James Version (KJV)
- And Israel sent messengers unto Sihon king of the Amorites, saying,
- World English Bible (WEB)
- Israel sent messengers to Sihon king of the Amorites, saying,
- American Standard Version (ASV)
- And Israel sent messengers unto Sihon king of the Amorites, saying,
- Bible in Basic English (BBE)
- And Israel sent men to Sihon, king of the Amorites, saying,
- Darby Translation (DBY)
- And Israel sent messengers to Sihon king of the Amorites, saying,
- Webster's Bible (WBS)
- And Israel sent messengers to Sihon king of the Amorites, saying,
- Young's Literal Translation (YLT)
- And Israel sendeth messengers unto Sihon king of the Amorite, saying,
Read in context
- 19ಇದಲ್ಲದೆ ಅವರು ಮತ್ತಾನದಿಂದ ನಹಲೀಯೇ ಲಕ್ಕೂ ನಹಲೀಯೇಲದಿಂದ ಬಾಮೋತಿಗೂ ಬಂದರು.
- 20ಬಾಮೋತಿನಿಂದ ಮೋವಾಬ್ ದೇಶದಲ್ಲಿ ರುವ ಕಣಿವೆಯಿಂದ ಪಿಸ್ಗಾವೆಂಬ ಬೆಟ್ಟದ ತುದಿಗೆ ಬಂದರು; ಇದು ಯೇಷೀಮೋನಿನ ಕಡೆಗೆ ಕಾಣಿಸುತ್ತದೆ.
- 21ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--
- 22ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.
- 23ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
Cross references
- Judges 11:19–21 ನ್ಯಾಯಸ್ಥಾಪಕರು 11:19–21ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು. ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
- Numbers 20:14–19 ಅರಣ್ಯಕಾಂಡ 20:14–19ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ. ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು. ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ. ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ. ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ.
- Deuteronomy 2:26–28 ಧರ್ಮೋಪದೇಶಕಾಂಡ 2:26–28ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ-- ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ. ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;