Numbers · chapter 21 · verse 25
Numbers 21:25 in Kannada
ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
Israayelyaru aa pattanagalannellaa tegedu kondaru; israayelyaru amoriyara samasta pattanagalalliyoo heshboninalliyoo adara samasta graamagalalliyoo vaasamaadidaru.
Numbers 21:25 in English
- King James Version (KJV)
- And Israel took all these cities: and Israel dwelt in all the cities of the Amorites, in Heshbon, and in all the villages thereof.
- World English Bible (WEB)
- Israel took all these cities. Israel lived in all the cities of the Amorites, in Heshbon, and in all its villages.
- American Standard Version (ASV)
- And Israel took all these cities: and Israel dwelt in all the cities of the Amorites, in Heshbon, and in all the towns thereof.
- Bible in Basic English (BBE)
- And Israel took all their towns, living in Heshbon and all the towns and small places of the Amorites.
- Darby Translation (DBY)
- And Israel took all these cities, and Israel dwelt in all the cities of the Amorites, at Heshbon, and in all its dependent villages.
- Webster's Bible (WBS)
- And Israel took all these cities: and Israel dwelt in all the cities of the Amorites, in Heshbon, and in all its villages.
- Young's Literal Translation (YLT)
- And Israel taketh all these cities, and Israel dwelleth in all the cities of the Amorite, in Heshbon, and in all its villages;
Read in context
- 23ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
- 24ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
- 25ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
- 26ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
- 27ಅವರು ಸಾಮತಿ ಗಳಲ್ಲಿ ಮಾತನಾಡಿ -- ಹೆಷ್ಬೋನಿಗೆ ಬನ್ನಿರಿ; ಸೀಹೋನನ ಪಟ್ಟಣವು ತಿರಿಗಿ ಕಟ್ಟಲ್ಪಟ್ಟು ಸಿದ್ಧವಾಗಲಿ.
Cross references
- Jeremiah 48:45 ಯೆರೆಮೀಯ 48:45ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
- Isaiah 16:8–9 ಯೆಶಾಯ 16:8–9ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು. ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- Ezekiel 16:46 ಯೆಹೆಜ್ಕೇಲನು 16:46ನಿನ್ನ ಎಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ; ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
- Jeremiah 48:2 ಯೆರೆಮೀಯ 48:2ಮೋವಾಬಿನ ಕೀರ್ತಿ ಇನ್ನು ಮೇಲೆ ಇರುವದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ಜನಾಂಗವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ, ಮದ್ಮೆನೇ, ನೀನು ಸಹ ಕಡಿಯಲ್ಪಡುವಿ; ಕತ್ತಿಯು ನಿನ್ನನ್ನು ಹಿಂದಟ್ಟುವದು.
- Ezekiel 16:49 ಯೆಹೆಜ್ಕೇಲನು 16:49ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
- Deuteronomy 2:12 ಧರ್ಮೋಪದೇಶಕಾಂಡ 2:12ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
- Jeremiah 48:34 ಯೆರೆಮೀಯ 48:34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
- Ezekiel 16:53 ಯೆಹೆಜ್ಕೇಲನು 16:53ನಾನು ಅವರ ಸೆರೆಯನ್ನೂ ಕುಮಾರ್ತೆಯರ ಸಹಿತವಾದ ಸೊದೋಮಿನ ಸೆರೆಯನ್ನೂ ಕುಮಾರ್ತೆ ಯರ ಸಹಿತವಾದ ಸಮಾರ್ಯದ ಸೆರೆಯನ್ನೂ ತಪ್ಪಿಸುವಾಗ ಅವರೊಂದಿಗೆ ನಿನ್ನ ಸೆರೆಯವರ ಸೆರೆಯನ್ನು ತಪ್ಪಿಸುವೆನು.
- Numbers 21:31 ಅರಣ್ಯಕಾಂಡ 21:31ಹಾಗೆ ಇಸ್ರಾಯೇ ಲ್ಯರು ಅಮೋರಿಯ ದೇಶದಲ್ಲಿ ವಾಸಮಾಡಿದರು.
- Song of Solomon 7:4 ಪರಮಗೀತೆ 7:4ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
- Numbers 32:33–42 ಅರಣ್ಯಕಾಂಡ 32:33–42ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು. ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್, ಅಟ್ರೋತ್ಪೊ ಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮ್ರಾ, ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದ್ದರು. ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್, ನೆಬೋ, ಬಾಳ್ಮೆಯೋನ್ ಎಂದು ಬೇರೆ ಹೆಸರು ಹೊಂದಿದ್ದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ ತಾವು ಕಟ್ಟಿದ ಪಟ್ಟಣಗಳಿಗೆ ಹೆಸರುಗಳನ್ನು ಇಟ್ಟರು. ಮನಸ್ಸೆಯ ಮಗನಾದ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ ಅದನ್ನು ತಕ್ಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು. ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗನಾದ ಮಾಕೀರನಿಗೆ ಕೊಟ್ಟದ್ದರಿಂದ ಅವನು ಅದರಲ್ಲಿ ವಾಸಿ ಸಿದನು. ಆದರೆ ಮನಸ್ಸೆಯ ಮಗನಾದ ಯಾಯಾ ರನು ಹೋಗಿ, ಅವರ ನಗರಗಳನ್ನು ತಕ್ಕೊಂಡು, ಅವುಗಳಿಗೆ ಯಾಯಾರನ ನಗರಗಳೆಂದು ಹೆಸರಿಟ್ಟನು.ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು. ನೋಬಹನು ಹೋಗಿ ಕೇನಾತೆಂಬ ಪಟ್ಟಣವನ್ನು ಅದರ ಗ್ರಾಮಗಳನ್ನು ತಕ್ಕೊಂಡು ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂದು ಹೆಸರಿಟ್ಟನು.
- Amos 2:10 ಆಮೋಸ 2:10ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.