Numbers · chapter 21 · verse 35
Numbers 21:35 in Kannada
ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
Ee prakaara avaru ava nannoo avana makkalannoo samasta janarannoo avanige obbanaadaroo uliyadante hodedu avana deshavannu vashamaadikondaru.
Numbers 21:35 in English
- King James Version (KJV)
- So they smote him, and his sons, and all his people, until there was none left him alive: and they possessed his land.
- World English Bible (WEB)
- So they struck him, with his sons and all his people, until there were no survivors; and they possessed his land.
- American Standard Version (ASV)
- So they smote him, and his sons and all his people, until there was none left him remaining: and they possessed his land.
- Bible in Basic English (BBE)
- So they overcame him and his sons and his people, driving them all out: and they took his land for their heritage.
- Darby Translation (DBY)
- And they smote him, and his sons, and all his people, so that they left him none remaining, and took possession of his land.
- Webster's Bible (WBS)
- So they smote him, and his sons, and all his people, until there was none left to him alive: and they possessed his land.
- Young's Literal Translation (YLT)
- And they smite him, and his sons, and all his people, until he hath not left to him a remnant, and they possess his land.
Read in context
- 33ಆಗ ಅವರು ತಿರುಗಿ ಬಾಷಾನಿನ ಹಾದಿಯಲ್ಲಿ ಏರಿದರು; ಆಗ ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
- 34ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
- 35ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
Cross references
- Deuteronomy 3:3–17 ಧರ್ಮೋಪದೇಶಕಾಂಡ 3:3–17ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು. ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು. ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು. ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು. ಆದರೆ ಎಲ್ಲಾ ಪಶು ಗಳನ್ನೂ ಪಟ್ಟಣಗಳ ಕೊಳ್ಳೆಯನ್ನೂ ಸುಲಿಗೆಯಾಗಿ ತಕ್ಕೊಂಡೆವು. ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು. (ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.) ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು, ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
- Joshua 13:12 ಯೆಹೋಶುವ 13:12ಅಷ್ಟರೋತಿನಲ್ಲಿಯೂ ಎದ್ರೈಯ ಲ್ಲಿಯೂ ಆಳಿದ ರಾಕ್ಷಸರಲ್ಲಿ ಮಿಕ್ಕಿದ್ದ ಬಾಷಾನಿನ ಅರಸನಾದ ಓಗನ ರಾಜ್ಯವೆಲ್ಲಾ ಸಮಸ್ತ ರಾಜ್ಯವಾದ ಬಾಷಾನೂ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ ಅವರನ್ನು ಹೊಡೆದು ಹೊರಡಿಸಿದ್ದನು.
- Deuteronomy 29:7–8 ಧರ್ಮೋಪದೇಶಕಾಂಡ 29:7–8ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಬರಲಾಗಿ ನಾವು ಅವರನ್ನು ಹೊಡೆದು ಅವರ ದೇಶವನ್ನು ತಕ್ಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸ್ವಾಸ್ತ್ಯವಾಗಿ ಕೊಟ್ಟೆವು.
- Joshua 12:4–6 ಯೆಹೋಶುವ 12:4–6ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ. ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- Psalm 135:10–12 ಕೀರ್ತನೆಗಳು 135:10–12ಆತನು ದೊಡ್ಡ ಜನಾಂಗಗಳನ್ನೂ ಬಲವಾದ ಅರಸುಗಳನ್ನೂ ಕೊಂದುಹಾಕಿದನು. ಅಮೋರಿ ಯರ ಅರಸನಾದ ಸೀಹೋನನನ್ನೂ ಬಾಷಾನಿನ ಅರಸನಾದ ಓಗನನ್ನೂ ಕಾನಾನಿನ ಎಲ್ಲಾ ರಾಜ್ಯ ಗಳನ್ನೂ ಹೊಡೆದನು. ಅವರ ದೇಶವನ್ನು ಬಾಧ್ಯತೆ ಯಾಗಿ ಅಂದರೆ ತನ್ನ ಜನರಾದ ಇಸ್ರಾಯೇಲಿಗೆ ಬಾಧ್ಯತೆಯಾಗಿ ಕೊಟ್ಟನು.
- Romans 8:37 ರೋಮಾಪುರದವರಿಗೆ 8:37ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.
- Psalm 136:17–21 ಕೀರ್ತನೆಗಳು 136:17–21ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.