Numbers · chapter 22 · verse 32
Numbers 22:32 in Kannada
ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
Kartana dootanu avanige heliddu--ninna katteyannu eega mooru saari hodedaddu yaake? Igo, ninna maarga nanna munde vakravaagiruvadarinda naanu eduraali yaagi horatenu.
Numbers 22:32 in English
- King James Version (KJV)
- And the angel of the LORD said unto him, Wherefore hast thou smitten thine ass these three times? behold, I went out to withstand thee, because [thy] way is perverse before me:
- World English Bible (WEB)
- The LORD’s angel said to him, “Why have you struck your donkey these three times? Behold, I have come out as an adversary, because your way is perverse before me.
- American Standard Version (ASV)
- And the angel of Jehovah said unto him, Wherefore hast thou smitten thine ass these three times? behold, I am come forth for an adversary, because thy way is perverse before me:
- Bible in Basic English (BBE)
- And the angel of the Lord said to him, Why have you given your ass blows these three times? See, I have come out against you to keep you back, because your purpose is not pleasing to me.
- Darby Translation (DBY)
- And the Angel of Jehovah said to him, Wherefore hast thou smitten thine ass these three times? behold, it was I who came forth to withstand thee, for the way [thou walkest in] is for ruin before me.
- Webster's Bible (WBS)
- And the angel of the LORD said to him, Why hast thou smitten thy ass these three times? behold, I went out to withstand thee, because [thy] way is perverse before me:
- Young's Literal Translation (YLT)
- and the messenger of Jehovah saith unto him, 'Wherefore hast thou smitten thine ass these three times? lo, I — I have come out for an adversary, for [thy] way hath been perverse before me,
Read in context
- 30ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು.
- 31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
- 32ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು.
- 33ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು.
- 34ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
Cross references
- Numbers 22:22 ಅರಣ್ಯಕಾಂಡ 22:22ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- Acts 13:10 ಅಪೊಸ್ತಲರ ಕೃತ್ಯಗಳು 13:10ಎಲ್ಲಾ ಮೋಸದಿಂದಲೂ ಎಲ್ಲಾ ಕೆಟ್ಟತನ ದಿಂದಲೂ ತುಂಬಿರುವವನೇ, ಸೈತಾನನ ಮಗನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೀಟಾದ ಮಾರ್ಗಗಳನ್ನು ಡೊಂಕು ಮಾಡುವದನ್ನು ಬಿಡುವದಿಲ್ಲವೋ?
- Proverbs 28:6 ಜ್ಞಾನೋಕ್ತಿಗಳು 28:6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
- Proverbs 14:2 ಜ್ಞಾನೋಕ್ತಿಗಳು 14:2ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.
- Numbers 22:20 ಅರಣ್ಯಕಾಂಡ 22:20ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
- Psalm 147:9 ಕೀರ್ತನೆಗಳು 147:9ಆತನು ಪಶುಗಳಿಗೂ ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾನೆ.
- Deuteronomy 23:4 ಧರ್ಮೋಪದೇಶಕಾಂಡ 23:4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- Exodus 3:2–6 ವಿಮೋಚನಕಾಂಡ 3:2–6ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ. ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು. ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು. ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು. ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- Numbers 22:35 ಅರಣ್ಯಕಾಂಡ 22:35ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
- Psalm 145:9 ಕೀರ್ತನೆಗಳು 145:9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- 2 Peter 2:14–15 2 ಪೇತ್ರನು 2:14–15ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.