Numbers · chapter 23 · verse 1
Numbers 23:1 in Kannada
ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
Aaga bilaamanu baalaakanige--elu balipeethagalannu katti, elu hori galannoo elu tagarugalannoo nanage illi siddhamaadu andanu.
Numbers 23:1 in English
- King James Version (KJV)
- And Balaam said unto Balak, Build me here seven altars, and prepare me here seven oxen and seven rams.
- World English Bible (WEB)
- Balaam said to Balak, “Build here seven altars for me, and prepare here seven bulls and seven rams for me.”
- American Standard Version (ASV)
- And Balaam said unto Balak, Build me here seven altars, and prepare me here seven bullocks and seven rams.
- Bible in Basic English (BBE)
- And Balaam said to Balak, Make me here seven altars and get ready seven oxen and seven male sheep.
- Darby Translation (DBY)
- And Balaam said to Balak, Build me here seven altars, and prepare me here seven bullocks and seven rams.
- Webster's Bible (WBS)
- And Balaam said to Balak, Build me here seven altars, and prepare me here seven oxen and seven rams.
- Young's Literal Translation (YLT)
- And Balaam saith unto Balak, 'Build for me in this [place] seven altars, and make ready for me in this [place] seven bullocks and seven rams.'
Read in context
- 1ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
- 2ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.
- 3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
Cross references
- Numbers 23:29 ಅರಣ್ಯಕಾಂಡ 23:29ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Ezekiel 45:23 ಯೆಹೆಜ್ಕೇಲನು 45:23ಹಬ್ಬದ ಏಳು ದಿವಸಗಳಲ್ಲಿ ಪ್ರತಿ ದಿನವೂ ಅವನು ಕರ್ತನಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿ ದಿನವೂ ಪಾಪಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು;
- Job 42:8 ಯೋಬನು 42:8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- Exodus 20:24 ವಿಮೋಚನಕಾಂಡ 20:24ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
- 2 Chronicles 29:21 2 ಪೂರ್ವಕಾಲವೃತ್ತಾಂತ 29:21ಅವರು ರಾಜ್ಯಕ್ಕೋಸ್ಕರವೂ ಪರಿಶುದ್ಧ ಸ್ಥಾನಕ್ಕೋಸ್ಕರವೂ ಯೆಹೂದಕ್ಕೋಸ್ಕರವೂ ಪಾಪದ ಬಲಿಯಾಗಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಮೇಕೆ ಗಳನ್ನೂ ತಂದರು. ಆಗ ಕರ್ತನ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಆರೋನನ ಮಕ್ಕಳಾದ ಯಾಜಕರಿಗೆ ಹೇಳಿದನು.
- 2 Kings 18:22 2 ಅರಸುಗಳು 18:22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
- 1 Chronicles 15:26 1 ಪೂರ್ವಕಾಲವೃತ್ತಾಂತ 15:26ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.
- Numbers 29:32 ಅರಣ್ಯಕಾಂಡ 29:32ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ
- Exodus 27:1–8 ವಿಮೋಚನಕಾಂಡ 27:1–8ಇದಲ್ಲದೆ ಜಾಲೀ ಮರದಿಂದ ಯಜ್ಞವೇದಿಯನ್ನು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಮಾಡಬೇಕು. ಆ ಯಜ್ಞವೇದಿಯು ಚಚ್ಚೌಕವಾಗಿರಬೇಕು. ಅದರ ಎತ್ತ ರವು ಮೂರು ಮೊಳ ಇರಬೇಕು. ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು. ಅದರ ಬೂದಿಗಾಗಿ ತಟ್ಟೆಗಳನ್ನು ಸಲಿಕೆಗಳನ್ನು ಬೋಗುಣಿಗಳನ್ನು ಮುಳ್ಳುಗಳನ್ನು ಅಗ್ನಿಪಾತ್ರೆಗಳನ್ನು ಎಲ್ಲಾ ಉಪಕರಣಗಳನ್ನು ಹಿತ್ತಾಳೆಯಿಂದ ಮಾಡಬೇಕು. ಅದಕ್ಕೆ ಹಿತ್ತಾಳೆಯ ಜಾಳಿಗೆಯನ್ನು ಮಾಡಿ ಆ ಜಾಳಿಗೆಯ ಮೇಲೆ ನಾಲ್ಕು ಮೂಲೆಗಳಿಗೆ ಹಿತ್ತಾಳೆಯ ನಾಲ್ಕು ಬಳೆಗಳನ್ನು ಮಾಡಬೇಕು. ಆ ಜಾಳಿಗೆಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರು ವಂತೆ ಹಾಕಿಸಬೇಕು. ಯಜ್ಞವೇದಿಗೆ ಜಾಲೀ ಮರ ದಿಂದ ಕೋಲುಗಳನ್ನು ಮಾಡಿ ಅವುಗಳನ್ನು ಹಿತ್ತಾಳೆ ಯಿಂದ ಹೊದಿಸಬೇಕು. ಆ ಕೋಲುಗಳನ್ನು ಬಳೆ ಗಳಲ್ಲಿ ಸೇರಿಸಬೇಕು. ಅವುಗಳು ಯಜ್ಞವೇದಿಯನ್ನು ಹೊರುವದಕ್ಕೆ ಅದರ ಎರಡೂ ಪಾರ್ಶ್ವಗಳಲ್ಲಿ ಇರ ಬೇಕು. ಹಲಗೆಗಳಿಂದ ಅದನ್ನು ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಬೇಕು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.