Numbers · chapter 23 · verse 4
Numbers 23:4 in Kannada
ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
Aaga devaru bilaamanannu sandhisidanu. Avanu aatanige--naanu elu bali peethagalannu siddhamaadi, ondondu balipeethada mele ondondu horiyannoo ondondu tagarannoo arpisiddene andanu.
Numbers 23:4 in English
- King James Version (KJV)
- And God met Balaam: and he said unto him, I have prepared seven altars, and I have offered upon [every] altar a bullock and a ram.
- World English Bible (WEB)
- God met Balaam, and he said to him, “I have prepared the seven altars, and I have offered up a bull and a ram on every altar.”
- American Standard Version (ASV)
- And God met Balaam: and he said unto him, I have prepared the seven altars, and I have offered up a bullock and a ram on every altar.
- Bible in Basic English (BBE)
- And God came to Balaam, and Balaam said to him, I have made ready seven altars, offering an ox and a male sheep on every altar.
- Darby Translation (DBY)
- And God met Balaam; and [Balaam] said to him, I have disposed seven altars, and have offered up a bullock and a ram upon [each] altar.
- Webster's Bible (WBS)
- And God met Balaam: and he said to him, I have prepared seven altars, and I have offered upon [every] altar a bullock and a ram.
- Young's Literal Translation (YLT)
- And God cometh unto Balaam, and he saith unto Him, 'The seven altars I have arranged, and I offer a bullock and a ram on the altar;'
Read in context
- 2ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.
- 3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
- 4ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
- 5ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
- 6ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
Cross references
- Numbers 23:16 ಅರಣ್ಯಕಾಂಡ 23:16ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.
- Luke 18:12 ಲೂಕನು 18:12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Ephesians 2:9 ಎಫೆಸದವರಿಗೆ 2:9ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
- Numbers 23:1 ಅರಣ್ಯಕಾಂಡ 23:1ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
- Matthew 20:12 ಮತ್ತಾಯನು 20:12ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು.
- Romans 3:27 ರೋಮಾಪುರದವರಿಗೆ 3:27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
- Numbers 22:9 ಅರಣ್ಯಕಾಂಡ 22:9ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.
- Numbers 22:20 ಅರಣ್ಯಕಾಂಡ 22:20ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
- Isaiah 58:3–4 ಯೆಶಾಯ 58:3–4ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ. ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
- John 16:2 ಯೋಹಾನನು 16:2ಅವರು ನಿಮ್ಮನ್ನು ಸಭಾಮಂದಿರಗಳಿಂದ ಹೊರಗೆ ಹಾಕುವರು; ಹೌದು, ನಿಮ್ಮನ್ನು ಕೊಲ್ಲುವವನು ದೇವರ ಸೇವೆ ಮಾಡುತ್ತಾನೆಂದು ನೆನಸುವ ಗಳಿಗೆ ಬರುತ್ತದೆ.