Numbers · chapter 23 · verse 9
Numbers 23:9 in Kannada
ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
Bandegala tudiyinda avanannu nodu ttene; guddagalinda avanannu drushtisiddene; igo, aa janaangavu ontiyaagi vaasisuvadu, janaanga galalli adu enisalpaduvadilla.
Numbers 23:9 in English
- King James Version (KJV)
- For from the top of the rocks I see him, and from the hills I behold him: lo, the people shall dwell alone, and shall not be reckoned among the nations.
- World English Bible (WEB)
- For from the top of the rocks I see him. From the hills I see him. Behold, it is a people that dwells alone, and shall not be listed among the nations.
- American Standard Version (ASV)
- For from the top of the rocks I see him, And from the hills I behold him: Lo, it is a people that dwelleth alone, And shall not be reckoned among the nations.
- Bible in Basic English (BBE)
- From the top of the rocks I see him, looking down on him from the hills: it is a people made separate, not to be numbered among the nations.
- Darby Translation (DBY)
- For from the top of the rocks I see him, and from the hills I behold him: Lo, [it is] a people that shall dwell alone and shall not be reckoned among the nations.
- Webster's Bible (WBS)
- For from the top of the rocks I see him, and from the hills I behold him: lo, the people shall dwell alone, and shall not be reckoned among the nations.
- Young's Literal Translation (YLT)
- For from the top of rocks I see it, And from heights I behold it; Lo a people! alone it doth tabernacle, And among nations doth not reckon itself.
Read in context
- 7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- 8ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
- 9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
- 10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
- 11ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
Cross references
- Deuteronomy 33:28 ಧರ್ಮೋಪದೇಶಕಾಂಡ 33:28ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Deuteronomy 32:8 ಧರ್ಮೋಪದೇಶಕಾಂಡ 32:8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Exodus 33:16 ವಿಮೋಚನಕಾಂಡ 33:16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
- Ezra 9:2 ಎಜ್ರನು 9:2ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
- Esther 3:8 ಎಸ್ತೇರಳು 3:8ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Jeremiah 46:28 ಯೆರೆಮೀಯ 46:28ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Romans 15:8–10 ರೋಮಾಪುರದವರಿಗೆ 15:8–10ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ. ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ.