Numbers · chapter 24 · verse 14
Numbers 24:14 in Kannada
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
Baa, ee janaru ninna janarige kade divasagalalli enu maaduvaro adannu ninage tilisuvenu andanu.
Numbers 24:14 in English
- King James Version (KJV)
- And now, behold, I go unto my people: come [therefore, and] I will advertise thee what this people shall do to thy people in the latter days.
- World English Bible (WEB)
- Now, behold, I go to my people. Come, I will inform you what this people shall do to your people in the latter days.”
- American Standard Version (ASV)
- And now, behold, I go unto my people: come, [and] I will advertise thee what this people shall do to thy people in the latter days.
- Bible in Basic English (BBE)
- So now I will go back to my people: but first let me make clear to you what this people will do to your people in days to come.
- Darby Translation (DBY)
- And now behold, I go to my people: come, I will admonish thee what this people will do to thy people at the end of days.
- Webster's Bible (WBS)
- And now, behold, I go to my people: come [therefore] , I will advertise thee what this people will do to thy people in the latter days.
- Young's Literal Translation (YLT)
- and, now, lo, I am going to my people; come, I counsel thee [concerning] that which this people doth to thy people, in the latter end of the days.'
Read in context
- 12ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--
- 13ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
- 14ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
- 15ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
- 16ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
Cross references
- Micah 6:5 ಮೀಕ 6:5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- Genesis 49:1 ಆದಿಕಾಂಡ 49:1ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Daniel 2:28 ದಾನಿಯೇಲನು 2:28ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,
- 2 Timothy 3:1 2 ತಿಮೊಥೆಯನಿಗೆ 3:1ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
- Daniel 10:14 ದಾನಿಯೇಲನು 10:14ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.
- Numbers 31:7–18 ಅರಣ್ಯಕಾಂಡ 31:7–18ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ ಗಂಡಸರೆಲ್ಲರನ್ನು ಕೊಂದುಹಾಕಿದರು. ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು. ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ಸ್ತ್ರೀಯರನ್ನೂ ಅವರ ಮಕ್ಕಳನ್ನೂ ಸೆರೆಹಿಡಿದು ಸಮಸ್ತ ಪಶುಗಳನ್ನೂ ಹಿಂಡುಗಳನ್ನೂ ಸಾಮಗ್ರಿಗಳನ್ನೂ ಸುಲುಕೊಂಡರು. ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ ಅವರ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು. ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ ಲೂಟಿಯನ್ನೂ ತಕ್ಕೊಂಡರು. ಅವರು ಸೆರೆಯವರನ್ನೂ ಲೂಟಿಯನ್ನೂ ಸುಲಿಗೆ ಯನ್ನೂ ಮೋಶೆ ಯಾಜಕನಾದ ಎಲ್ಲಾಜಾರನು ಇಸ್ರಾಯೇಲ್ ಮಕ್ಕಳ ಸಭೆಯವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬೈಲುಗಳಲ್ಲಿ ಇದ್ದ ಪಾಳೆಯ ದೊಳಗೆ ತಂದರು. ಮೋಶೆಯೂ ಯಾಜಕನಾದ ಎಲ್ಲಾಜಾರನೂ ಸಭೆಯ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು. ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವವರ ಮೇಲೆ ಕೋಪಗೊಂಡು ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ? ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು. ಆದ ಕಾರಣ ಈಗ ಚಿಕ್ಕವರೊಳಗೆ ಎಲ್ಲಾ ಗಂಡಸರನ್ನೂ ಕೊಂದು, ಪುರುಷ ಸಂಗಮ ಮಾಡಿದ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ. ಆದರೆ ಪುರುಷ ಸಂಗಮ ಮಾಡದಿರುವ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗೆ ಉಳಿಸಿಕೊಳ್ಳಿರಿ.
- Isaiah 24:22 ಯೆಶಾಯ 24:22ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Jeremiah 49:39 ಯೆರೆಮೀಯ 49:39ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Acts 2:17 ಅಪೊಸ್ತಲರ ಕೃತ್ಯಗಳು 2:17ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ