Numbers · chapter 24 · verse 2
Numbers 24:2 in Kannada
ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
Bilaamanu tanna kannugalannetti israayelu tanna kutumbagala prakaara tanna deregalalli vaasavaagi ruvadannu nodidaaga devara aatmanu avana mele bandanu.
Numbers 24:2 in English
- King James Version (KJV)
- And Balaam lifted up his eyes, and he saw Israel abiding [in his tents] according to their tribes; and the spirit of God came upon him.
- World English Bible (WEB)
- Balaam lifted up his eyes, and he saw Israel dwelling according to their tribes; and the Spirit of God came on him.
- American Standard Version (ASV)
- And Balaam lifted up his eyes, and he saw Israel dwelling according to their tribes; and the Spirit of God came upon him.
- Bible in Basic English (BBE)
- And lifting up his eyes, he saw Israel there, with their tents in the order of their tribes: and the spirit of God came on him.
- Darby Translation (DBY)
- And Balaam lifted up his eyes and saw Israel dwelling [in tents] according to his tribes; and the Spirit of God came upon him.
- Webster's Bible (WBS)
- And Balaam lifted up his eyes, and he saw Israel abiding [in his tents] according to their tribes, and the spirit of God came upon him.
- Young's Literal Translation (YLT)
- and Balaam lifteth up his eyes, and seeth Israel tabernacling, by its tribes, and the Spirit of God is upon him,
Read in context
- 1ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
- 2ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
- 3ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
- 4ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
Cross references
- 1 Samuel 19:20 1 ಸಮುವೇಲನು 19:20ಆದದರಿಂದ ಸೌಲನು ದಾವೀದನನ್ನು ಹಿಡು ಕೊಂಡು ಬರಲು ದೂತರನ್ನು ಕಳುಹಿಸಿದನು. ಅವರು ಪ್ರವಾದಿಗಳ ಗುಂಪು ಪ್ರವಾದಿಸುವದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುವೇಲನು ನಿಂತಿ ರುವದನ್ನೂ ನೋಡಿದಾಗ ದೇವರ ಆತ್ಮನು ಸೌಲನ ದೂತರ ಮೇಲೆ ಬಂದನು; ಅವರು ಸಹ ಪ್ರವಾದಿ ಸಿದರು.
- 2 Chronicles 15:1 2 ಪೂರ್ವಕಾಲವೃತ್ತಾಂತ 15:1ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ--
- 1 Samuel 19:23 1 ಸಮುವೇಲನು 19:23ಹಾಗೆಯೇ ಅವನು ರಾಮದ ನಯೋತಿಗೆ ಹೋದನು; ಆಗ ದೇವರ ಆತ್ಮ ಅವನ ಮೇಲೆ ಬಂದನು; ಅವನು ರಾಮದ ನಯೋತಿಗೆ ಸೇರುವ ವರೆಗೂ ಪ್ರವಾದಿಸುತ್ತಾ ಬಂದನು.ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- 1 Samuel 10:10 1 ಸಮುವೇಲನು 10:10ಅವನು ಆ ಗುಡ್ಡಕ್ಕೆ ಬಂದಾಗ ಇಗೋ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು; ಆಗ ದೇವರ ಆತ್ಮನು ಅವನ ಮೇಲೆ ಬಂದದರಿಂದ ಅವನು ಪ್ರವಾದಿಸಿದನು.
- Numbers 2:2–34 ಅರಣ್ಯಕಾಂಡ 2:2–34ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು. ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು. ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು. ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು. ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು. ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು. ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು. ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು. ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು. ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು. ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು. ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು. ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು. ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು. ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು. ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲ್ ಮಕ್ಕಳೊಳಗೆ ಎಣಿಸಲ್ಪಡಲಿಲ್ಲ.ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ತಂದೆಗಳ ಮನೆಯ ಪ್ರಕಾರವೂ ಇಳುಕೊಳ್ಳುತ್ತಾ ಮುಂದುವರಿಯುತ್ತಿದ್ದರು.
- Numbers 11:25–29 ಅರಣ್ಯಕಾಂಡ 11:25–29ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು. ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು. ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
- Matthew 10:4 ಮತ್ತಾಯನು 10:4ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- Numbers 24:5 ಅರಣ್ಯಕಾಂಡ 24:5ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
- Luke 10:20 ಲೂಕನು 10:20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- John 11:49–51 ಯೋಹಾನನು 11:49–51ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
- Numbers 23:9–10 ಅರಣ್ಯಕಾಂಡ 23:9–10ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ. ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
- Song of Solomon 6:4 ಪರಮಗೀತೆ 6:4ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.