Numbers · chapter 24 · verse 7
Numbers 24:7 in Kannada
ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
Tanna tottigalinda neeru hariyamaaduvanu; avana santatiyoo aneka jalagalalli iruvadu; avana arasanu agaaganiginta unnatavaagiruvanu; avana raajyavu ghanategeriruvadu.
Numbers 24:7 in English
- King James Version (KJV)
- He shall pour the water out of his buckets, and his seed [shall be] in many waters, and his king shall be higher than Agag, and his kingdom shall be exalted.
- World English Bible (WEB)
- Water shall flow from his buckets. His seed shall be in many waters. His king shall be higher than Agag. His kingdom shall be exalted.
- American Standard Version (ASV)
- Water shall flow from his buckets, And his seed shall be in many waters, And his king shall be higher than Agag, And his kingdom shall be exalted.
- Bible in Basic English (BBE)
- Peoples will be in fear before his strength, his arm will be on great nations: his king will be higher than Agag, and his kingdom made great in honour.
- Darby Translation (DBY)
- Water shall flow out of his buckets, and his seed shall be in great waters, And his king shall be higher than Agag, and his kingdom shall be exalted.
- Webster's Bible (WBS)
- He shall pour the water out of his buckets, and his seed [shall be] in many waters, and his king shall be higher than Agag, and his kingdom shall be exalted.
- Young's Literal Translation (YLT)
- He maketh water flow from his buckets, And his seed [is] in many waters; And higher than Agag [is] his king, And exalted is his kingdom.
Read in context
- 5ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
- 6ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
- 7ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
- 8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
- 9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
Cross references
- 2 Samuel 5:12 2 ಸಮುವೇಲನು 5:12ದಾವೀದನು ತನ್ನನ್ನು ಕರ್ತನು ಇಸ್ರಾಯೇ ಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದನೆಂದೂ ತನ್ನ ಜನವಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದನೆಂದೂ ತಿಳಿದುಕೊಂಡನು.
- 1 Chronicles 14:2 1 ಪೂರ್ವಕಾಲವೃತ್ತಾಂತ 14:2ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು.
- Jeremiah 51:13 ಯೆರೆಮೀಯ 51:13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
- Revelation 17:1 ಪ್ರಕಟನೆ 17:1ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
- 1 Samuel 15:8–9 1 ಸಮುವೇಲನು 15:8–9ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು. ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
- Revelation 17:15 ಪ್ರಕಟನೆ 17:15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- Revelation 19:16 ಪ್ರಕಟನೆ 19:16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- Isaiah 48:1 ಯೆಶಾಯ 48:1ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
- Psalm 145:11–13 ಕೀರ್ತನೆಗಳು 145:11–13ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು. ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು. ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
- Psalm 18:43 ಕೀರ್ತನೆಗಳು 18:43ನೀನು ಜನರ ವಿವಾದಗಳಿಂದ ನನ್ನನ್ನು ತಪ್ಪಿಸಿದ್ದೀ; ಅನ್ಯ ಜನಾಂಗಗಳ ತಲೆಯಾಗಿ ನನ್ನನ್ನು ಮಾಡಿದ್ದೀ; ನಾನ ರಿಯದ ಜನರು ನನ್ನನ್ನು ಸೇವಿಸುವರು.
- Psalm 93:3–4 ಕೀರ್ತನೆಗಳು 93:3–4ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ. ಬಹಳ ನೀರುಗಳ ಶಬ್ದಕ್ಕಿಂತಲೂ ಹೌದು, ಸಮುದ್ರದ ಬಲವಾದ ಅಲೆ ಗಳಿಗಿಂತಲೂ ಉನ್ನತದಲ್ಲಿ ಕರ್ತನು ಬಲಿಷ್ಠನಾಗಿ ದ್ದಾನೆ.ನಿನ್ನ ಸಾಕ್ಷಿಗಳು ಬಹಳ ನಿಶ್ಚಯವಾದವುಗಳು; ಓ ಕರ್ತನೇ, ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.
- Psalm 2:6–10 ಕೀರ್ತನೆಗಳು 2:6–10ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ. ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ. ನನ್ನನ್ನು ಕೇಳು; ಆಗ ಅನ್ಯಜನರನ್ನು ನಿನ್ನ ಬಾಧ್ಯತೆಯಾಗಿಯೂ ಭೂಮಿಯ ಕಟ್ಟಕಡೆಯ ವರೆಗೆ ನಿನ್ನ ಸ್ವಾಸ್ಥ್ಯವಾಗಿಯೂ ಕೊಡುವೆನು. ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ. ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.