Numbers · chapter 25 · verse 2
Numbers 25:2 in Kannada
ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
Ivaru janarannu tamma devarugala baligalige karedaru; janaru tindu avara devaru galige addabiddaru.
Numbers 25:2 in English
- King James Version (KJV)
- And they called the people unto the sacrifices of their gods: and the people did eat, and bowed down to their gods.
- World English Bible (WEB)
- for they called the people to the sacrifices of their gods. The people ate and bowed down to their gods.
- American Standard Version (ASV)
- for they called the people unto the sacrifices of their gods; and the people did eat, and bowed down to their gods.
- Bible in Basic English (BBE)
- For they sent for the people to be present at the offerings made to their gods; and the people took part in their feasts and gave honour to their gods.
- Darby Translation (DBY)
- And they invited the people to the sacrifices of their gods; and the people ate, and bowed down to their gods.
- Webster's Bible (WBS)
- And they called the people to the sacrifices of their gods: and the people ate, and bowed down to their gods.
- Young's Literal Translation (YLT)
- and they call for the people to the sacrifices of their gods, and the people eat, and bow themselves to their gods,
Read in context
- 1ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
- 2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
- 3ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- 4ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
Cross references
- 1 Corinthians 10:20 1 ಕೊರಿಂಥದವರಿಗೆ 10:20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Exodus 34:15–16 ವಿಮೋಚನಕಾಂಡ 34:15–16ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- Psalm 106:28 ಕೀರ್ತನೆಗಳು 106:28ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
- Hosea 9:10 ಹೋಶೇಯ 9:10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
- 1 Kings 11:1–8 1 ಅರಸುಗಳು 11:1–8ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು. ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು. ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು. ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ. ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು. ಹೀಗೆಯೇ ಸೊಲೊಮೋನನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸದೆ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು. ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು ಬಲಿಗಳನ್ನು ಅರ್ಪಿಸುವ ತನ್ನ ಅನ್ಯ ಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.
- Joshua 22:17 ಯೆಹೋಶುವ 22:17ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Deuteronomy 32:38 ಧರ್ಮೋಪದೇಶಕಾಂಡ 32:38ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ.
- Joshua 23:16 ಯೆಹೋಶುವ 23:16ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- 2 Corinthians 6:16–17 2 ಕೊರಿಂಥದವರಿಗೆ 6:16–17ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ. ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- 1 Kings 19:18 1 ಅರಸುಗಳು 19:18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.