Numbers · chapter 25 · verse 5
Numbers 25:5 in Kannada
ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
Moshe israaye lina nyaayaadhipatigalige--nimmalli obbobbanu baalpeyorige koodikondiruva tanna manushyarannu kollabeku andanu.
Numbers 25:5 in English
- King James Version (KJV)
- And Moses said unto the judges of Israel, Slay ye every one his men that were joined unto Baal-peor.
- World English Bible (WEB)
- Moses said to the judges of Israel, “Everyone kill his men who have joined themselves to Baal Peor.”
- American Standard Version (ASV)
- And Moses said unto the judges of Israel, Slay ye every one his men that have joined themselves unto Baal-peor.
- Bible in Basic English (BBE)
- So Moses said to the judges of Israel, Let everyone put to death those of his men who have had relations with the women of Moab in honour of the Baal of Peor.
- Darby Translation (DBY)
- And Moses said to the judges of Israel, Slay every one his men that have joined themselves to Baal-Peor.
- Webster's Bible (WBS)
- And Moses said to the judges of Israel, Slay ye every one his men that were joined to Baal-peor.
- Young's Literal Translation (YLT)
- And Moses saith unto the judges of Israel, 'Slay ye each his men who are joined to Baal-Peor.'
Read in context
- 3ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- 4ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
- 5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- 6ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
- 7ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು
Cross references
- Exodus 18:21 ವಿಮೋಚನಕಾಂಡ 18:21ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
- Exodus 22:20 ವಿಮೋಚನಕಾಂಡ 22:20ಕರ್ತನಿಗೆ ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಮಾಡುವವನು ಸಂಪೂರ್ಣವಾಗಿ ನಾಶವಾಗಬೇಕು.
- Deuteronomy 13:6 ಧರ್ಮೋಪದೇಶಕಾಂಡ 13:6ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
- Deuteronomy 13:13 ಧರ್ಮೋಪದೇಶಕಾಂಡ 13:13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
- Exodus 32:27–28 ವಿಮೋಚನಕಾಂಡ 32:27–28ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.
- Exodus 18:25–26 ವಿಮೋಚನಕಾಂಡ 18:25–26ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- Deuteronomy 13:15 ಧರ್ಮೋಪದೇಶಕಾಂಡ 13:15ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು.
- Deuteronomy 13:9 ಧರ್ಮೋಪದೇಶಕಾಂಡ 13:9ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
- Deuteronomy 17:3–5 ಧರ್ಮೋಪದೇಶಕಾಂಡ 17:3–5ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.