Numbers · chapter 26 · verse 28
Numbers 26:28 in Kannada
ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
Kutumbagala prakaara yosephana kumaa raru: manasseyoo ephraayaamanoo. Manasseya kumaararu: maakeeraninda maakeeryara kutumba.
Numbers 26:28 in English
- King James Version (KJV)
- The sons of Joseph after their families [were] Manasseh and Ephraim.
- World English Bible (WEB)
- The sons of Joseph after their families: Manasseh and Ephraim.
- American Standard Version (ASV)
- The sons of Joseph after their families: Manasseh and Ephraim.
- Bible in Basic English (BBE)
- The sons of Joseph by their families: Manasseh and Ephraim.
- Darby Translation (DBY)
- The sons of Joseph, after their families: Manasseh and Ephraim.
- Webster's Bible (WBS)
- The sons of Joseph after their families [were] Manasseh and Ephraim.
- Young's Literal Translation (YLT)
- Sons of Joseph by their families [are] Manasseh and Ephraim.
Read in context
- 26ಜೆಬುಲೂನನ ಕುಮಾ ರರು--ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನಿಂದ ಏಲೋನ್ಯರ ಕುಟುಂಬ; ಯಹಲೇಲನಿಂದ ಯಹಲೇಲ್ಯರ ಕುಟುಂಬ.
- 27ಜೆಬುಲೂನಿಯರ ಕುಟುಂಬಗಳು ಇವೇ. ಅವರಲ್ಲಿ ಎಣಿಸಲ್ಪಟ್ಟವರು ಅರವತ್ತುಸಾವಿರದ ಐನೂರು ಮಂದಿ.
- 28ಕುಟುಂಬಗಳ ಪ್ರಕಾರ ಯೋಸೇಫನ ಕುಮಾ ರರು: ಮನಸ್ಸೆಯೂ ಎಫ್ರಾಯಾಮನೂ. ಮನಸ್ಸೆಯ ಕುಮಾರರು: ಮಾಕೀರನಿಂದ ಮಾಕೀರ್ಯರ ಕುಟುಂಬ.
- 29ಮಾಕೀರನು ಗಿಲ್ಯಾದನನ್ನು ಪಡೆದನು; ಗಿಲ್ಯಾದ ನಿಂದ ಗಿಲ್ಯಾದ್ಯರ ಕುಟುಂಬ;
- 30ಗಿಲ್ಯಾದನ ಕುಮಾರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;
Cross references
- Genesis 46:20 ಆದಿಕಾಂಡ 46:20ಯೋಸೇಫನಿಗೆ ಐಗುಪ್ತ ದೇಶದಲ್ಲಿ ಮಕ್ಕಳು ಹುಟ್ಟಿದರು: ಓನಿನ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತಳು ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಅವನಿಗೆ ಹೆತ್ತಳು.
- Genesis 48:5 ಆದಿಕಾಂಡ 48:5ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು.
- Genesis 48:13–20 ಆದಿಕಾಂಡ 48:13–20ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
- Genesis 41:51–52 ಆದಿಕಾಂಡ 41:51–52ಚೊಚ್ಚಲ ಮಗನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಯಾಕಂದರೆ ಅವನು--ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನೆಲ್ಲಾ ಮರೆತುಬಿಡುವಂತೆ ಮಾಡಿದನು ಅಂದನು. ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.