Numbers · chapter 27 · verse 18
Numbers 27:18 in Kannada
ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
Aaga kartanu moshege--aatmavulla manushyanaagiruva noonana maganaada yehoshu vanannu takkondu ninna kaiyannu avana mele ittu
Numbers 27:18 in English
- King James Version (KJV)
- And the LORD said unto Moses, Take thee Joshua the son of Nun, a man in whom [is] the spirit, and lay thine hand upon him;
- World English Bible (WEB)
- The LORD said to Moses, “Take Joshua the son of Nun, a man in whom is the Spirit, and lay your hand on him.
- American Standard Version (ASV)
- And Jehovah said unto Moses, Take thee Joshua the son of Nun, a man in whom is the Spirit, and lay thy hand upon him;
- Bible in Basic English (BBE)
- And the Lord said to Moses, Take Joshua, the son of Nun, a man in whom is the spirit, and put your hand on him;
- Darby Translation (DBY)
- And Jehovah said to Moses, Take Joshua the son of Nun, a man in whom is the Spirit, and thou shalt lay thy hand upon him;
- Webster's Bible (WBS)
- And the LORD said to Moses, Take to thee Joshua the son of Nun, a man in whom [is] the spirit, and lay thy hand upon him;
- Young's Literal Translation (YLT)
- And Jehovah saith unto Moses, 'Take to thee Joshua son of Nun, a man in whom [is] the Spirit, and thou hast laid thine hand upon him,
Read in context
- 16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
- 17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- 18ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
- 19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
- 20ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
Cross references
- Deuteronomy 34:9 ಧರ್ಮೋಪದೇಶಕಾಂಡ 34:9ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
- Genesis 41:38 ಆದಿಕಾಂಡ 41:38ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
- Numbers 27:23 ಅರಣ್ಯಕಾಂಡ 27:23ಅವನ ಮೇಲೆ ತನ್ನ ಕೈಗಳನ್ನು ಇಟ್ಟು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
- Deuteronomy 31:7–8 ಧರ್ಮೋಪದೇಶಕಾಂಡ 31:7–8ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Deuteronomy 3:28 ಧರ್ಮೋಪದೇಶಕಾಂಡ 3:28ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- Deuteronomy 31:23 ಧರ್ಮೋಪದೇಶಕಾಂಡ 31:23ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- Acts 19:6 ಅಪೊಸ್ತಲರ ಕೃತ್ಯಗಳು 19:6ಆಗ ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮನು ಅವರ ಮೇಲೆ ಬಂದನು; ಅವರು ಭಾಷೆಗಳನ್ನಾಡಿದರು ಮತ್ತು ಪ್ರವಾದಿಸಿದರು.
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- 1 Samuel 16:13–14 1 ಸಮುವೇಲನು 16:13–14ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು. ಆದರೆ ಕರ್ತನ ಆತ್ಮನು ಸೌಲನನ್ನು ಬಿಟ್ಟು ಹೋದನು;
- Numbers 11:25–29 ಅರಣ್ಯಕಾಂಡ 11:25–29ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ. ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್, ಮತ್ತೊಬ್ಬನ ಹೆಸರು ಮೇದಾದ್; ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಬರೆಯಲ್ಪಟ್ಟವರಾಗಿ ಗುಡಾರಕ್ಕೆ ಹೊರಟು ಹೋಗದೆ ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ ತಿಳಿಸಿ ಹೇಳಿದ್ದೇನಂದರೆಎಲ್ದಾದನೂ ಮೇದಾದನೂ ಪಾಳೆಯದಲ್ಲಿ ಪ್ರವಾದಿ ಸುತ್ತಾರೆ ಅಂದನು. ಅದಕ್ಕೆ ತನ್ನ ಯೌವನಸ್ಥರಲ್ಲಿ ಒಬ್ಬನೂ ಮೋಶೆಯ ಸೇವಕನೂ ಆಗಿದ್ದ ನೂನನ ಮಗನಾದ ಯೆಹೋಶುವನು ಹೇಳಿದ್ದೇನಂದರೆ--ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ ಅಂದನು. ಮೋಶೆಯು ಅವನಿಗೆ ಹೇಳಿದ್ದೇ ನಂದರೆ--ನನ್ನ ನಿಮಿತ್ತವಾಗಿ ನೀನು ಹೊಟ್ಟೇಕಿಚ್ಚು ಪಡುತ್ತೀಯೋ? ಕರ್ತನ ಜನರೆಲ್ಲಾ ಪ್ರವಾದಿಗಳಾ ಗಿದ್ದು ಕರ್ತನು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೇದು ಅಂದನು!
- Judges 11:29 ನ್ಯಾಯಸ್ಥಾಪಕರು 11:29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.