Numbers · chapter 27 · verse 19
Numbers 27:19 in Kannada
ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
Avanannu yaajakanaada ellaajaarana mundeyoo samasta sabheya mundeyoo nillisi avarigeduraagi avanannu nemisu.
Numbers 27:19 in English
- King James Version (KJV)
- And set him before Eleazar the priest, and before all the congregation; and give him a charge in their sight.
- World English Bible (WEB)
- Set him before Eleazar the priest, and before all the congregation; and commission him in their sight.
- American Standard Version (ASV)
- and set him before Eleazar the priest, and before all the congregation; and give him a charge in their sight.
- Bible in Basic English (BBE)
- And take him before Eleazar the priest and all the meeting of the people, and give him his orders before their eyes.
- Darby Translation (DBY)
- and thou shalt set him before Eleazar the priest, and before the whole assembly; and give him commandment before their eyes.
- Webster's Bible (WBS)
- And set him before Eleazar the priest, and before all the congregation: and give him a charge in their sight.
- Young's Literal Translation (YLT)
- and hast caused him to stand before Eleazar the priest, and before all the company, and hast charged him before their eyes,
Read in context
- 17ಕರ್ತನ ಸಭೆಯು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು ಎಂದು ಅಂದನು.
- 18ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
- 19ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
- 20ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
- 21ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
Cross references
- Deuteronomy 3:28 ಧರ್ಮೋಪದೇಶಕಾಂಡ 3:28ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.ಆಗ ನಾವು ಬೇತ್ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.
- Deuteronomy 31:7–8 ಧರ್ಮೋಪದೇಶಕಾಂಡ 31:7–8ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು. ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Deuteronomy 31:23 ಧರ್ಮೋಪದೇಶಕಾಂಡ 31:23ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
- 1 Timothy 6:13–17 1 ತಿಮೊಥೆಯನಿಗೆ 6:13–17ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು. ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ; ಆತನೊಬ್ಬನೇ ಅಮರತ್ವವುಳ್ಳವನೂ ಯಾರೂ ಸವಿಾಪಿಸಲಾರದಂತ ಬೆಳಕಿನಲ್ಲಿ ವಾಸಿಸುವಾತನೂ ಆಗಿದ್ದಾನೆ; ಯಾವ ಮನುಷ್ಯನೂ ಆತನನ್ನು ಕಾಣಲಿಲ್ಲ; ಯಾರೂ ಕಾಣ ಲಾರರು; ಆತನಿಗೆ ಮಾನವೂ ನಿತ್ಯಾಧಿಕಾರವೂ ಇರಲಿ. ಆಮೆನ್. ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Luke 10:2–11 ಲೂಕನು 10:2–11ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ. ಹೋಗಿರಿ, ಇಗೋ, ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ. ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ. ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು. ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ; ಯಾವದಾದರೂ ಪಟ್ಟಣದೊಳಗೆ ನೀವು ಪ್ರವೇಶಿಸುವಾಗ ಅವರು ನಿಮ್ಮನ್ನು ಸೇರಿಸಿಕೊಂಡರೆ ನಿಮ್ಮ ಮುಂದೆ ಇಡುವಂಥವುಗಳನ್ನು ತಿನ್ನಿರಿ. ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿರಿ; ಮತ್ತು ಅವರಿಗೆ--ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂದು ಹೇಳಿರಿ. ಆದರೆ ನೀವು ಪ್ರವೇಶಿ ಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ ನೀವು ಹೊರಟು ಅದೇ ಬೀದಿ ಗಳಲ್ಲಿ ಹೋಗಿ-- ನಮ್ಮ ಮೇಲೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ; ಆದಾಗ್ಯೂ ದೇವರ ರಾಜ್ಯವು ನಿಮ್ಮ ಸವಿಾಪಕ್ಕೆ ಬಂದಿದೆ ಎಂಬದು ನಿಮಗೆ ಖಚಿತವಾಗಿ ತಿಳಿದಿರಲಿ ಎಂದು ಹೇಳಿರಿ.
- 1 Timothy 5:21 1 ತಿಮೊಥೆಯನಿಗೆ 5:21ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
- Acts 20:28–31 ಅಪೊಸ್ತಲರ ಕೃತ್ಯಗಳು 20:28–31ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- 2 Timothy 4:1–6 2 ತಿಮೊಥೆಯನಿಗೆ 4:1–6ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ-- ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು. ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು. ಆದರೆ ನೀನು ಎಲ್ಲಾ ವಿಷಯ ಗಳಲ್ಲಿ ಎಚ್ಚರವಾಗಿರು, ಶ್ರಮೆಗಳನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನ್ನ ಸೇವೆಯನ್ನು ಸಂಪೂರ್ಣ ಮಾಡು. ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- Luke 9:1–5 ಲೂಕನು 9:1–5ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು. ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು. ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು. ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ. ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.