Numbers · chapter 28 · verse 17
Numbers 28:17 in Kannada
ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
Aa tingalina hadinaidane divasavu habbavaagide; elu divasagala varegoo huliyillada rottiyannu tinnabeku.
Numbers 28:17 in English
- King James Version (KJV)
- And in the fifteenth day of this month [is] the feast: seven days shall unleavened bread be eaten.
- World English Bible (WEB)
- On the fifteenth day of this month shall be a feast. Unleavened bread shall be eaten for seven days.
- American Standard Version (ASV)
- And on the fifteenth day of this month shall be a feast: seven days shall unleavened bread be eaten.
- Bible in Basic English (BBE)
- On the fifteenth day of this month there is to be a feast; for seven days let your food be unleavened cakes.
- Darby Translation (DBY)
- And on the fifteenth day of this month is the feast; seven days shall unleavened bread be eaten.
- Webster's Bible (WBS)
- And on the fifteenth day of this month [is] the feast: seven days shall unleavened bread be eaten.
- Young's Literal Translation (YLT)
- and in the fifteenth day of this month [is] a festival, seven days unleavened food is eaten;
Read in context
- 15ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು.
- 16ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು.
- 17ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
- 18ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
- 19ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
Cross references
- Leviticus 23:6 ಯಾಜಕಕಾಂಡ 23:6ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
- Exodus 23:15 ವಿಮೋಚನಕಾಂಡ 23:15ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.)
- Deuteronomy 16:3–8 ಧರ್ಮೋಪದೇಶಕಾಂಡ 16:3–8ಅದರಲ್ಲಿ ಹುಳಿ ರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿ ಇಲ್ಲದ ಶ್ರಮೆಯ ರೊಟ್ಟಿಗಳನ್ನು ಅದರಲ್ಲಿ ತಿನ್ನಬೇಕು; ತ್ವರೆಯಾಗಿ ಐಗುಪ್ತದೇಶದೊಳಗಿಂದ ನೀನು ಹೊರಗೆ ಬಂದಿ; ಆದಕಾರಣ ನೀನು ಐಗುಪ್ತದೇಶದೊಳಗಿಂದ ಹೊರಗೆ ಬಂದ ದಿವಸವನ್ನು ನೀನು ಜೀವಿಸುವ ದಿವಸ ಗಳಲ್ಲೆಲ್ಲಾ ಜ್ಞಾಪಕಮಾಡಬೇಕು. ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿನ್ನ ಮೇರೆಗಳಲ್ಲೆಲ್ಲೂ ಕಾಣಬಾರದು. ಮೊದಲನೇ ದಿನದ ಸಾಯಂಕಾಲದಲ್ಲಿ ನೀನು ಕೊಯ್ದ ಮಾಂಸದಲ್ಲಿ ಏನಾದರೂ ಮರು ದಿವಸದ ವರೆಗೆ ಉಳಿಸಬಾರದು. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದ್ವಾರಗಳ ಯಾವದೊಂದರಲ್ಲಾದರೂ ನೀನು ಪಸ್ಕವನ್ನು ಅರ್ಪಿಸ ಬಾರದು. ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲೇ ನೀನು ಪಸ್ಕವನ್ನು ಸಾಯಂಕಾಲದಲ್ಲಿ ಸೂರ್ಯನು ಅಸ್ತಮಿಸುವಾಗ ನೀನು ಐಗುಪ್ತವನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು. ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು; ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
- Exodus 34:18 ವಿಮೋಚನಕಾಂಡ 34:18ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಅಬೀಬ್ ತಿಂಗಳಿನಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ಅಬೀಬ್ ತಿಂಗಳಿ ನಲ್ಲಿ ನೀವು ಐಗುಪ್ತದೇಶವನ್ನು ಬಿಟ್ಟು ಬಂದಿದ್ದೀರಿ.
- Exodus 13:6 ವಿಮೋಚನಕಾಂಡ 13:6ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಕರ್ತನಿಗೆ ಹಬ್ಬವನ್ನಾಚ ರಿಸಬೇಕು.
- Exodus 12:15–17 ವಿಮೋಚನಕಾಂಡ 12:15–17ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.