Numbers · chapter 28 · verse 6
Numbers 28:6 in Kannada
ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
Ondu kurimarige takka paanada arpane hinnina naalkane paalu parishuddha sthaladalli amaleruva draakshaarasada paanada arpaneyannu kartanige hoyisabeku.
Numbers 28:6 in English
- King James Version (KJV)
- [It is] a continual burnt offering, which was ordained in mount Sinai for a sweet savour, a sacrifice made by fire unto the LORD.
- World English Bible (WEB)
- It is a continual burnt offering which was ordained in Mount Sinai for a pleasant aroma, an offering made by fire to the LORD.
- American Standard Version (ASV)
- It is a continual burnt-offering, which was ordained in mount Sinai for a sweet savor, an offering made by fire unto Jehovah.
- Bible in Basic English (BBE)
- It is a regular burned offering, as it was ordered in Mount Sinai, for a sweet smell, an offering made by fire to the Lord.
- Darby Translation (DBY)
- [it is] the continual burnt-offering which was ordained on mount Sinai for a sweet odour, an offering by fire to Jehovah.
- Webster's Bible (WBS)
- [It is] a continual burnt-offering, which was ordained in mount Sinai for a sweet savor, a sacrifice made by fire to the LORD.
- Young's Literal Translation (YLT)
- a continual burnt-offering, which was made in mount Sinai, for sweet fragrance, a fire-offering to Jehovah;
Read in context
- 4ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು.
- 5ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.
- 6ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು.
- 7ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
- 8ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
Cross references
- Amos 5:25 ಆಮೋಸ 5:25ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?
- 2 Chronicles 31:3 2 ಪೂರ್ವಕಾಲವೃತ್ತಾಂತ 31:3ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
- 2 Chronicles 2:4 2 ಪೂರ್ವಕಾಲವೃತ್ತಾಂತ 2:4ಇಗೋ, ನನ್ನ ದೇವರಾದ ಕರ್ತನಿಗೆ ಅದನ್ನು ಪ್ರತಿಷ್ಠೆ ಮಾಡುವದಕ್ಕೂ ಆತನ ಮುಂದೆ ಪರಿಮಳ ಧೂಪವನ್ನು ಸುಡುವದಕ್ಕೂ ನಿತ್ಯ ಸಮ್ಮುಖದ ರೊಟ್ಟಿ ಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮಾವಾಸ್ಯೆಗಳ ಲ್ಲಿಯೂ ಇಸ್ರಾಯೇಲಿಗೆ ನಿರಂತರವಾಗಿರಲು ನೇಮಿ ಸಿದ ನಮ್ಮ ದೇವರಾದ ಕರ್ತನ ಹಬ್ಬಗಳಲ್ಲಿಯೂ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋ ಸ್ಕರವೂ ಆತನ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
- Ezra 3:4 ಎಜ್ರನು 3:4ಇದಲ್ಲದೆ ಬರೆ ಯಲ್ಪಟ್ಟ ಹಾಗೆಯೇ ಅವರು ಪರ್ಣಶಾಲೆಗಳ ಹಬ್ಬ ವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ದಿನದಿನದ ದಹನಬಲಿ ಗಳನ್ನು ಅರ್ಪಿಸಿದರು.
- Exodus 31:18 ವಿಮೋಚನಕಾಂಡ 31:18ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Ezekiel 46:14 ಯೆಹೆಜ್ಕೇಲನು 46:14ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಏಫದ ಆರನೇ ಪಾಲನ್ನು ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಎಣ್ಣೆಯ ಹಿನ್ನಿನಲ್ಲಿ ಮೂರನೇ ಪಾಲನ್ನು ಸಿದ್ಧಮಾಡಬೇಕು. ಇದು ಕರ್ತನಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದೆ ಆಹಾರದ ಅರ್ಪಣೆಯಾಗಿದೆ.
- Exodus 29:38–42 ವಿಮೋಚನಕಾಂಡ 29:38–42ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- Psalm 50:8 ಕೀರ್ತನೆಗಳು 50:8ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ.
- Leviticus 6:9 ಯಾಜಕಕಾಂಡ 6:9ಆರೋನನಿಗೂ ಅವನ ಕುಮಾರರಿಗೂ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ಇದು ದಹನಬಲಿಯ ನಿಯಮವಾಗಿದೆ, ಇದು ದಹನಬಲಿ; ಇಡೀ ರಾತ್ರಿ ಅಂದರೆ ಬೆಳಗಿನ ವರೆಗೆ ಅದು ಯಜ್ಞವೇದಿಯ ಮೇಲೆ ಸುಡುತ್ತಿರುವದು. ಯಜ್ಞವೇದಿಯ ಬೆಂಕಿಯು ಅದರೊ ಳಗೆ ಸುಡುತ್ತಾ ಇರುವದು.
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.