Numbers · chapter 29 · verse 11
Numbers 29:11 in Kannada
ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
Paapa baligaagi ondu meke mariyallade praayashchittada paapa baliyannoo nitya dahanabaliyannoo adara aahaara samarpaneyannoo avugalige takka paanada arpanegalannoo arpisabeku.
Numbers 29:11 in English
- King James Version (KJV)
- One kid of the goats [for] a sin offering; beside the sin offering of atonement, and the continual burnt offering, and the meat offering of it, and their drink offerings.
- World English Bible (WEB)
- one male goat for a sin offering, in addition to the sin offering of atonement, and the continual burnt offering, and its meal offering, and their drink offerings.
- American Standard Version (ASV)
- one he-goat for a sin-offering; besides the sin-offering of atonement, and the continual burnt-offering, and the meal-offering thereof, and their drink-offerings.
- Bible in Basic English (BBE)
- One he-goat for a sin-offering; in addition to the offering for taking away your sin, and the regular burned offering and its meal offering, and their drink offerings.
- Darby Translation (DBY)
- [and] one buck of the goats for a sin-offering, — besides the sin-offering of atonement, and the continual burnt-offering and its oblation, and their drink-offerings.
- Webster's Bible (WBS)
- One kid of the goats [for] a sin-offering; besides the sin-offering of atonement, and the continual burnt-offering, and the meat-offering of it, and their drink-offerings.
- Young's Literal Translation (YLT)
- one kid of the goats, a sin-offering; apart from the sin-offering of the atonements, and the continual burnt-offering, and its present, and their libations.
Read in context
- 9ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ
- 10ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ
- 11ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 12ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು.
- 13ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು;
Cross references
- Leviticus 16:3 ಯಾಜಕಕಾಂಡ 16:3ಆರೋನನು ಪಾಪಬಲಿಗಾಗಿ ಒಂದು ಹೋರಿಯನ್ನು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಪರಿಶುದ್ಧವಾದ ಸ್ಥಳಕ್ಕೆ ಬರಬೇಕು.
- Leviticus 16:5 ಯಾಜಕಕಾಂಡ 16:5ಅವನು ಪರಿ ಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟು ಕೊಂಡು ತನ್ನ ಶರೀರದ ಮೇಲೆ ನಾರುಬಟ್ಟೆಯ ಇಜಾರುಗಳನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು; ಆದಕಾರಣ ಅವನು ತನ್ನ ಶರೀರವನ್ನು ನೀರಿನಿಂದ ತೊಳೆದುಕೊಂಡು ಅವುಗಳನ್ನು ಧರಿಸಿಕೊಳ್ಳಬೇಕು.
- Hebrews 9:25–28 ಇಬ್ರಿಯರಿಗೆ 9:25–28ಇದ ಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯರಕವನ್ನು ತೆಗೆದುಕೊಂಡು ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪ್ರವೇಶಿಸಲಿಲ್ಲ. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು. ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು. ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Numbers 28:3–8 ಅರಣ್ಯಕಾಂಡ 28:3–8ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- Leviticus 16:9 ಯಾಜಕಕಾಂಡ 16:9ಆರೋನನು ಕರ್ತನ ಚೀಟು ಬಿದ್ದ ಆಡನ್ನು ತಂದು ಅದನ್ನು ಪಾಪಬಲಿಗಾಗಿ ಸಮರ್ಪಿಸ ಬೇಕು.
- Hebrews 7:27 ಇಬ್ರಿಯರಿಗೆ 7:27ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Numbers 29:6 ಅರಣ್ಯಕಾಂಡ 29:6ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು.
- Daniel 9:24–26 ದಾನಿಯೇಲನು 9:24–26ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.