Numbers · chapter 29 · verse 39
Numbers 29:39 in Kannada
ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
Idallade nimma pramaanagalannoo uchitavaada baligalannoo dahanabaligalannoo aahaara paanada arpanegalannoo samaadhaana baligalannoo neevu nimma habbagalalli kartanige maadatakka arpanegalu ive endukartanu tanage aajnyaapisiddellaadara prakaara mosheyu israayel makkalige helidanu.
Numbers 29:39 in English
- King James Version (KJV)
- These [things] ye shall do unto the LORD in your set feasts, beside your vows, and your freewill offerings, for your burnt offerings, and for your meat offerings, and for your drink offerings, and for your peace offerings.
- World English Bible (WEB)
- “‘You shall offer these to the LORD in your set feasts—in addition to your vows and your free will offerings—for your burnt offerings, your meal offerings, your drink offerings, and your peace offerings.’”
- American Standard Version (ASV)
- These ye shall offer unto Jehovah in your set feasts, besides your vows, and your freewill-offerings, for your burnt-offerings, and for your meal-offerings, and for your drink-offerings, and for your peace-offerings.
- Bible in Basic English (BBE)
- These are the offerings which you are to give to the Lord at your regular feasts, in addition to the offerings for an oath, and the free offerings you give, for your burned offerings and your drink offerings and your peace-offerings.
- Darby Translation (DBY)
- These shall ye offer to Jehovah in your set feasts, besides your vows, and your voluntary-offerings, for your burnt-offerings, and for your oblations, and for your drink-offerings, and for your peace-offerings.
- Webster's Bible (WBS)
- These [things] ye shall do to the LORD in your set feasts, besides your vows, and your free-will-offerings, for your burnt-offerings, and for your meat-offerings, and for your drink-offerings, and for your peace-offerings.
- Young's Literal Translation (YLT)
- 'These ye prepare to Jehovah in your appointed seasons, apart from your vows, and your free-will offerings, for your burnt-offerings, and for your presents, and for your libations, and for your peace-offerings.'
Read in context
- 37ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ
- 38ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು.
- 39ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
- 40ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.
Cross references
- Leviticus 23:2 ಯಾಜಕಕಾಂಡ 23:2ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಪರಿಶುದ್ಧ ಸಭೆಗಳಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ,
- 2 Chronicles 31:3 2 ಪೂರ್ವಕಾಲವೃತ್ತಾಂತ 31:3ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
- 1 Chronicles 23:31 1 ಪೂರ್ವಕಾಲವೃತ್ತಾಂತ 23:31ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿವಸಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವದಕ್ಕೂಕರ್ತನ ಮನೆಯ ಸೇವೆಯಲ್ಲಿ ಸಭೆಯ ಗುಡಾರದ ಕಾವಲಿಯನ್ನೂ ಪರಿಶುದ್ಧಸ್ಥಾನದ ಕಾವಲಿಯನ್ನೂ ತಮ್ಮ ಸಹೋದರರಾದ ಆರೋನನ ಕುಮಾರರ ಆಜ್ಞೆಯನ್ನೂ ಕೈಕೊಳ್ಳುವದಕ್ಕೆ ಅವರಿಗೆ ನೇಮಕವಾಗಿತ್ತು.
- Isaiah 1:14 ಯೆಶಾಯ 1:14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- Nehemiah 10:33 ನೆಹೆಮೀಯ 10:33ಇಸ್ರಾಯೇಲ್ಯರ ಪ್ರಾಯ ಶ್ಚಿತ್ತವಾದ ಪಾಪಬಲಿಗೋಸ್ಕರವೂ ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ನಮ್ಮ ದೇವರ ಆಲಯದ ಸೇವೆಯ ನಿಮಿತ್ತವಾಗಿ ವರುಷಕ್ಕೆ ಶೆಕೆಲಿನಲ್ಲಿ ಮೂರರಲ್ಲಿ ಒಂದು ಪಾಲು ಕೊಡಲು ನಮಗೆ ನಾವು ನೇಮಕ ಮಾಡಿಕೊಂಡೆವು.
- Leviticus 7:11 ಯಾಜಕಕಾಂಡ 7:11ಅವನು ಕರ್ತನಿಗೆ ಸಮರ್ಪಿಸಬೇಕಾದ ಸಮಾ ಧಾನ ಯಜ್ಞಸಮರ್ಪಣೆಗಳ ನಿಯಮವು ಇದೇ:
- Ezra 3:5 ಎಜ್ರನು 3:5ಅದರ ತರುವಾಯ ಅವರು ನಿತ್ಯವು ತಿಂಗಳ ಮೊದಲನೇ ದಿನದಲ್ಲಿಯೂ ಕರ್ತನ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಅರ್ಪಿಸುವ ದಹನಬಲಿಯನ್ನು ಅವನವನು ಕರ್ತನಿಗೆ ಅರ್ಪಿ ಸುವ ಉಚಿತಾರ್ಥವಾದ ಬಲಿಯನ್ನು ಅರ್ಪಿಸಿದರು.
- Deuteronomy 12:6 ಧರ್ಮೋಪದೇಶಕಾಂಡ 12:6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Leviticus 7:16–38 ಯಾಜಕಕಾಂಡ 7:16–38ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು. ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿ ಯಿಂದ ಸುಡಬೇಕು. ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು. ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು. ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು. ಕರ್ತನು ಮೋಶೆಯೊಂದಿಗೆ ಮಾತನಾಡಿ-- ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು. ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು. ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು. ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು. ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು. ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು. ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು. ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು. ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ. ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ. ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ. ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ. ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು. ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
- Leviticus 22:21–23 ಯಾಜಕಕಾಂಡ 22:21–23ತನ್ನ ಪ್ರಮಾಣವನ್ನು ಪೂರೈಸುವ ಹಾಗೆ ಯಾವನಾದರೂ ಸಮಾಧಾನದ ಬಲಿಗಳ ಯಜ್ಞ ಸಮರ್ಪಣೆಯನ್ನಾಗಲಿ ಪಶುಗಳನ್ನಾಗಲಿ ಕುರಿಗಳ ನ್ನಾಗಲಿ ಉಚಿತವಾದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸುವದಾದರೆ ಅದು ಅಂಗೀಕಾರಕ್ಕೆ ಪರಿಪೂರ್ಣ ವುಳ್ಳದ್ದಾಗಿರಬೇಕು; ಅದರೊಳಗೆ ಯಾವ ದೋಷವು ಇರಬಾರದು. ಕುರುಡಾದದ್ದು, ಮುರಿದದ್ದು, ಅಂಗ ಹೀನವಾದದ್ದು, ಬೊಕ್ಕೆಯುಳ್ಳದ್ದು, ತುರಿಯುಳ್ಳದ್ದು, ಇಲ್ಲವೆ ಹುರುಕುಳ್ಳದ್ದು ಇವುಗಳನ್ನು ನೀವು ಕರ್ತನಿಗೆ ಸಮರ್ಪಿಸಲೂಬಾರದು ಮತ್ತು ಅವುಗಳಿಂದ ಯಜ್ಞ ವೇದಿಯ ಮೇಲೆ ದಹನಬಲಿಯಾಗಿ ಕರ್ತನಿಗೆ ಸಮರ್ಪಿಸಲೂಬಾರದು. ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವ ದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆ ಯಿರುವದಾಗಿದ್ದರೆ ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು; ಆದರೆ ಪ್ರಮಾಣಕ್ಕಾಗಿ ಅದು ಅಂಗೀಕಾರವಾಗುವದಿಲ್ಲ.
- Numbers 6:21 ಅರಣ್ಯಕಾಂಡ 6:21ಪ್ರಮಾಣಮಾಡಿಕೊಂಡ ನಾಜೀರನ ನಿಯ ಮವು ಇದೇ. ಅವನ ಕೈಗೆ ದೊರಕಿದ್ದಲ್ಲದೆ ಅವನು ತನ್ನ ಪ್ರತ್ಯೇಕಿಸುವಿಕೆಗಾಗಿ ಕರ್ತನಿಗೆ ಅರ್ಪಿಸತಕ್ಕದ್ದು. ಅವನು ಪ್ರಮಾಣಮಾಡಿಕೊಂಡ ಪ್ರಕಾರ ತಾನು ಪ್ರತ್ಯೇಕಿಸಿಕೊಂಡಂತೆ ಅವನು ಮಾಡಬೇಕು.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.