Numbers · chapter 3 · verse 3
Numbers 3:3 in Kannada
ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
Abhishe kisalpatta yaajakaraada aaronana makkala hesaru galu ive; ivarannu yaajakodyoga maaduva dakke avanu pratishthemaadidanu.
Numbers 3:3 in English
- King James Version (KJV)
- These [are] the names of the sons of Aaron, the priests which were anointed, whom he consecrated to minister in the priest’s office.
- World English Bible (WEB)
- These are the names of the sons of Aaron, the priests who were anointed, whom he consecrated to minister in the priest’s office.
- American Standard Version (ASV)
- These are the names of the sons of Aaron, the priests that were anointed, whom he consecrated to minister in the priest’s office.
- Bible in Basic English (BBE)
- These are the names of the sons of Aaron, the priests, on whom the holy oil was put, who were marked out as priests.
- Darby Translation (DBY)
- These are the names of the sons of Aaron, the anointed priests, who were consecrated to exercise the priesthood.
- Webster's Bible (WBS)
- These [are] the names of the sons of Aaron, the priests who were anointed, whom he consecrated to minister in the priest's office.
- Young's Literal Translation (YLT)
- these [are] the names of the sons of Aaron, the anointed priests, whose hand he hath consecrated for acting as priest.
Read in context
- 1ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ:
- 2ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು.
- 3ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
- 4ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- 5ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
Cross references
- Exodus 28:41 ವಿಮೋಚನಕಾಂಡ 28:41ಅವುಗಳನ್ನು ನಿನ್ನ ಸಹೋದರನಾದ ಆರೋನ ನಿಗೂ ಅವನ ಕುಮಾರರಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಪ್ರತಿಷ್ಠೆಮಾಡು. ಅವರು ನನಗೆ ಯಾಜಕ ಸೇವೆಮಾಡುವ ಹಾಗೆ ಅವರನ್ನು ಶುದ್ಧಮಾಡು.
- Leviticus 8:1–9 ಯಾಜಕಕಾಂಡ 8:1–9ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ -- ಆರೋನನನ್ನೂ ಅವನೊಂದಿಗೆ ಅವನ ಕುಮಾರರನ್ನೂ ಕರೆದು ಉಡುಪು ಗಳನ್ನೂ ಅಭಿಷೇಕ ತೈಲವನ್ನೂ ಪಾಪದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೊಂಡು. ಸಭೆ ಯವರನ್ನೆಲ್ಲಾ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು ಅಂದನು. ಆಗ ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. ಸಭೆಯು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸಲ್ಪಟ್ಟಿತು. ಮೋಶೆಯು ಸಭೆಗೆ--ಕರ್ತನು ಮಾಡುವದಕ್ಕೆ ಆಜ್ಞಾಪಿಸಿರುವದು ಇದೇ. ಮೋಶೆಯು ಆರೋನನನ್ನೂ ಅವನ ಕುಮಾರ ರನ್ನೂ ಹತ್ತಿರಕ್ಕೆ ಬರಮಾಡಿ ಅವರಿಗೆ ಸ್ನಾನಮಾಡಿಸಿ ದನು. ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು. ಅವನ ಮೇಲೆ ಎದೆ ಕವಚವನ್ನು ಹಾಕಿ ಆ ಎದೆ ಕವಚದಲ್ಲಿ ಊರೀಮ್ ತುವ್ಮೆಾಮ್ ಇವುಗಳನ್ನು ಸಹ ಹಾಕಿದನು. ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- Leviticus 8:12 ಯಾಜಕಕಾಂಡ 8:12ಅವನು ಆರೋನನ ತಲೆಯ ಮೇಲೆ ಅಭಿಷೇಕ ತೈಲವನ್ನು ಸುರಿದು ಅವನನ್ನು ಪವಿತ್ರ ಮಾಡುವದಕ್ಕಾಗಿ ಅಭಿಷೇಕಿಸಿದನು.
- Leviticus 8:30 ಯಾಜಕಕಾಂಡ 8:30ಮೋಶೆಯು ಅಭಿಷೇಕ ತೈಲವನ್ನೂ ಯಜ್ಞ ವೇದಿಯ ಮೇಲಿರುವ ರಕ್ತವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ಉಡುಪುಗಳ ಮೇಲೆ ಯೂ ಅವನೊಂದಿಗೆ ಅವನ ಕುಮಾರರ ಮೇಲೆಯೂ ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು ಮತ್ತು ಆರೋನನನ್ನೂ ಅವನ ಉಡುಪುಗಳನ್ನೂ ಅವನೊಂದಿಗೆ ಅವನ ಕುಮಾರರನ್ನೂ ಅವರ ಉಡುಪು ಗಳನ್ನೂ ಪವಿತ್ರಮಾಡಿದನು.
- Exodus 40:15 ವಿಮೋಚನಕಾಂಡ 40:15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- Hebrews 7:28 ಇಬ್ರಿಯರಿಗೆ 7:28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Exodus 40:13 ವಿಮೋಚನಕಾಂಡ 40:13ಆರೋನನು ನನಗೆ ಯಾಜಕ ಸೇವೆಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ ಶುದ್ಧ ಮಾಡಬೇಕು.
- Exodus 29:1–37 ವಿಮೋಚನಕಾಂಡ 29:1–37ಅವರು ನನಗೆ ಯಾಜಕ ಸೇವೆಮಾಡು ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ ವಂತೆ ಅವರನ್ನು ಶುದ್ಧಮಾಡುವ ಹಾಗೆ ನೀನು ಅವರಿಗೆ ಮಾಡಬೇಕಾದದ್ದೇನಂದರೆ--ಒಂದು ಹೋರಿಯನ್ನೂ ದೋಷವಿಲ್ಲದ ಎರಡು ಟಗರುಗಳನೂ ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು. ಆರೋನನನ್ನೂ ಅವನ ಕುಮಾರರನ್ನೂ ಸಭೆಯ ಗುಡಾರದ ಬಾಗಲಿನ ಬಳಿಗೆ ತಂದು ನೀರಿನಲ್ಲಿ ಅವರನ್ನು ತೊಳೆಯಬೇಕು. ತರು ವಾಯ ಆ ವಸ್ತ್ರಗಳನ್ನು ತಕ್ಕೊಂಡು ಆರೋನನಿಗೆ ಅಂಗಿಯನ್ನೂ ಎಫೋದಿನ ನಿಲುವಂಗಿಯನ್ನೂ ಎಫೋ ದನ್ನೂ ಎದೆಪದಕವನ್ನೂ ತೊಡಿಸಿ ಎಫೋದಿನ ವಿಚಿತ್ರ ವಾದ ನಡುಕಟ್ಟನ್ನು ಅವನಿಗೆ ಕಟ್ಟಿ ಅವನ ತಲೆಗೆ ಮುಂಡಾಸವನ್ನು ಇಟ್ಟು ಮುಂಡಾಸದ ಮೇಲೆ ಪರಿಶುದ್ಧ ಕಿರೀಟವನ್ನು ಇಟ್ಟು ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು. ನೀನು ಅವನ ಕುಮಾರರನ್ನು ಕರಕೊಂಡು ಬಂದು ಅವರಿಗೆ ಮೇಲಂಗಿಗಳನ್ನು ತೊಡಿಸಿ ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು. ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು. ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು. ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು. ಇದಲ್ಲದೆ ಹೋರಿಯ ಮಾಂಸ ವನ್ನೂ ಅದರ ಚರ್ಮವನ್ನೂ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪದ ಬಲಿಯಾಗಿದೆ. ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳ ಬೇಕು. ಆರೋನನೂ ಅವನ ಕುಮಾರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು. ಇದಲ್ಲದೆ ಆ ಟಗರನ್ನು ತುಂಡು ತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು. ಆ ಟಗರನ್ನು ಯಜ್ಞವೇದಿಯ ಮೇಲೆ ಸುಡಬೇಕು, ಅದು ಕರ್ತನಿಗೆ ದಹನಬಲಿಯಾಗಿದೆ. ಅದು ಕರ್ತನಿಗೆ ಸುವಾಸನೆಯ ದಹನಬಲಿಯಾಗಿದೆ. ಇನ್ನೊಂದು ಟಗರನ್ನು ನೀನು ತಂದಾಗ ಆರೋ ನನೂ ಅವನ ಕುಮಾರರೂ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ತರುವಾಯ ನೀನು ಅದನ್ನು ವಧಿಸಿ ಅದರ ರಕ್ತವನ್ನು ಆರೋನನ ಮತ್ತು ಅವನ ಕುಮಾರರ ಬಲ ಕಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು. ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಕುಮಾರರೂ ಅವರ ವಸ್ತ್ರಗಳೂ ಪರಿಶುದ್ಧ ವಾಗುವ ಹಾಗೆ ಯಜ್ಞವೇದಿಯ ಮೇಲಿರುವ ರಕ್ತವನ್ನೂ ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಕುಮಾರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು. ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿ ರುವ ಪರೆಯನ್ನೂ ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಬಲ ತೊಡೆಯನ್ನೂ ತೆಗೆದುಕೊಳ್ಳಬೇಕು. ಯಾಕಂದರೆ ಅದು ಪ್ರತಿಷ್ಠೆಯ ಟಗರು. ಕರ್ತನ ಮುಂದಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿ ಯನ್ನೂ ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಕುಮಾರರ ಕೈಗಳಿಗೆ ಕೊಟ್ಟು ಅವರು ಕರ್ತನ ಮುಂದೆ ಅದನ್ನು ತೂಗು ಅರ್ಪಣೆಗಾಗಿ ತೂಗಬೇಕು. ನೀನು ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ದಹನಬಲಿ ಯಾಗಿ ಕರ್ತನ ಮುಂದೆ ಸುವಾಸನೆಗೋಸ್ಕರ ದಹಿಸ ಬೇಕು. ಅದು ಕರ್ತನಿಗೆ ಬೆಂಕಿಯಿಂದ ಮಾಡಿದ ಅರ್ಪಣೆ. ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಕರ್ತನ ಮುಂದೆ ತೂಗು ಅರ್ಪಣೆಗಾಗಿ ತೂಗಬೇಕು. ಅದು ನಿನ್ನ ಪಾಲಾಗಿರುವದು. ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು. ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು. ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಕುಮಾರರಿಗೆ ಆಗಬೇಕು. ಅವರು ಅವುಗಳನ್ನು ತೊಟ್ಟುಕೊಂಡು ಅಭಿಷೇಕಿಸಲ್ಪಟ್ಟು ಪ್ರತಿಷ್ಠಿಸಲ್ಪಡಬೇಕು. ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡಿಸಿ ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ಬರುವದಕ್ಕಿರುವವನು ಅವುಗಳನ್ನು ಏಳು ದಿನಗಳ ವರೆಗೆ ತೊಟ್ಟುಕೊಳ್ಳಬೇಕು. ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸು. ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು. ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು. ಪ್ರತಿಷ್ಠೆಯ ಮಾಂಸದ ಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದ ವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಡ ಬೇಕು. ಅದು ಪರಿಶುದ್ಧವಾಗಿರುವದರಿಂದ ಅದನ್ನು ಊಟ ಮಾಡಬಾರದು. ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು. ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು. ಏಳು ದಿವಸ ಯಜ್ಞವೇದಿಗೋಸ್ಕರ ಪ್ರಾಯಶ್ಚಿತ್ತ ಮಾಡಿ ಅದನ್ನು ಪವಿತ್ರಮಾಡಬೇಕು. ಆಗ ಯಜ್ಞ ವೇದಿಯು ಅತಿಪರಿಶುದ್ಧವಾಗಿರುವದು. ಯಜ್ಞವೇದಿ ಯನ್ನು ಮುಟ್ಟುವದೆಲ್ಲಾ ಪವಿತ್ರವಾಗಿರಬೇಕು.