Numbers · chapter 32 · verse 10
Numbers 32:10 in Kannada
ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ--
Kartanu ade samayadalli kopodrekavullavanaagi pramaanamaadi--
Numbers 32:10 in English
- King James Version (KJV)
- And the LORD’s anger was kindled the same time, and he sware, saying,
- World English Bible (WEB)
- The LORD’s anger burned in that day, and he swore, saying,
- American Standard Version (ASV)
- And Jehovah’s anger was kindled in that day, and he sware, saying,
- Bible in Basic English (BBE)
- And at that time the Lord was moved to wrath, and made an oath, saying,
- Darby Translation (DBY)
- And Jehovah's anger was kindled the same time, and he swore, saying,
- Webster's Bible (WBS)
- And the LORD'S anger was kindled the same time, and he swore, saying,
- Young's Literal Translation (YLT)
- and the anger of Jehovah burneth in that day, and He sweareth, saying,
Read in context
- 8ನಾನು ದೇಶವನ್ನು ನೋಡುವದಕ್ಕೆ ಕಾದೇಶ್ಬರ್ನೇಯದಿಂದ ಅವರನ್ನು ಕಳುಹಿಸಿದಾಗ ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.
- 9ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
- 10ಕರ್ತನು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವನಾಗಿ ಪ್ರಮಾಣಮಾಡಿ--
- 11ಅವರು ನನ್ನನ್ನು ಪೂರ್ಣವಾಗಿ ಹಿಂಬಾಲಿ ಸದೆ ಇರುವದರಿಂದ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶವನ್ನು ಐಗುಪ್ತದೊಳಗಿಂದ ಏರಿಬಂದ ಇಪ್ಪತ್ತು ವರುಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ
- 12ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಹೊರತು ಒಬ್ಬನಾದರೂ ನೋಡುವದಿಲ್ಲ; ಯಾಕಂದರೆ ಇವರೇ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದ್ದಾರೆ.
Cross references
- Numbers 14:11 ಅರಣ್ಯಕಾಂಡ 14:11ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?
- Hebrews 3:8–19 ಇಬ್ರಿಯರಿಗೆ 3:8–19ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ. ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು. ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ. ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ). ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು. ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ. ಮೊದಲಿ ನಿಂದಿರುವ ನಮ್ಮ ಭರವಸವನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡುಕೊಳ್ಳು ವದಾದರೆ ಕ್ರಿಸ್ತನಲ್ಲಿ ಪಾಲುಗಾರಾಗಿದ್ದೇವಲ್ಲಾ! ಈ ಹೊತ್ತು ನೀವು ಆತನ ಧ್ವನಿಯನ್ನು ಕೇಳಿದರೆ ಎಂದು ಹೇಳುವಾಗ (ನಿಮ್ಮ ಹಿರಿಯರು) ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದಯ ಗಳನ್ನು ಕಠಿಣಮಾಡಿಕೊಳ್ಳಬೇಡಿರಿ. ಕೆಲವರು ಆತನು ನುಡಿದದ್ದನ್ನು ಕೇಳಿದಾಗ ಕೋಪವ ನ್ನೆಬ್ಬಿಸಿದರು; ಆದಾಗ್ಯೂ ಮೋಶೆಯ ಮೂಲಕ ಐಗುಪ್ತದಿಂದ ಬಂದವರೆಲ್ಲರೂ ಅಲ್ಲ. ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ! ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Numbers 14:23 ಅರಣ್ಯಕಾಂಡ 14:23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- Numbers 14:29 ಅರಣ್ಯಕಾಂಡ 14:29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.
- Psalm 95:11 ಕೀರ್ತನೆಗಳು 95:11ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Numbers 14:21 ಅರಣ್ಯಕಾಂಡ 14:21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- Deuteronomy 1:34–40 ಧರ್ಮೋಪದೇಶಕಾಂಡ 1:34–40ಕರ್ತನು ನಿಮ್ಮ ಮಾತುಗಳ ಧ್ವನಿಯನ್ನು ಕೇಳಿ ಕೋಪಿಸಿಕೊಂಡು ಪ್ರಮಾಣಮಾಡಿ-- ನಿಶ್ಚಯವಾಗಿ ಕೆಟ್ಟಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಆ ಒಳ್ಳೇ ದೇಶವನ್ನು ನೋಡುವದಿಲ್ಲ. ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಕರ್ತನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದ ಅವನು ಸಂಚರಿಸಿದ ದೇಶ ವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು. ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ. ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗನಾದ ಯೆಹೋಶುವನೇ ಅದರಲ್ಲಿ ಪ್ರವೇಶಿ ಸುವನು; ಅವನಿಗೆ ಧೈರ್ಯಕೊಡು; ಅವನೇ ಅದನ್ನು ಇಸ್ರಾಯೇಲಿಗೆ ಸ್ವಾಸ್ತ್ಯವಾಗಿ ಕೊಡುವನು. ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು. ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟುಹೋಗಿರಿ ಎಂದು ಹೇಳಿದನು.