Numbers · chapter 32 · verse 15
Numbers 32:15 in Kannada
ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
Neevu aatana kadeyinda tirugidare aatanu innoo hechchaagi avarannu aranyadalli irisi biduvanu; neevu ee samasta janarannu naashamaaduviri endu helidanu.
Numbers 32:15 in English
- King James Version (KJV)
- For if ye turn away from after him, he will yet again leave them in the wilderness; and ye shall destroy all this people.
- World English Bible (WEB)
- For if you turn away from after him, he will yet again leave them in the wilderness; and you will destroy all these people.”
- American Standard Version (ASV)
- For if ye turn away from after him, he will yet again leave them in the wilderness; and ye will destroy all this people.
- Bible in Basic English (BBE)
- For if you are turned away from him, he will send them wandering again in the waste land; and you will be the cause of the destruction of all this people.
- Darby Translation (DBY)
- If ye turn away from after him, he will yet again leave them in the wilderness; and ye shall destroy all this people.
- Webster's Bible (WBS)
- For if ye turn away from after him, he will yet again leave them in the wilderness; and he will destroy all this people.
- Young's Literal Translation (YLT)
- when ye turn back from after Him, then He hath added yet to leave him in the wilderness, and ye have done corruptly to all this people.'
Read in context
- 13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.
- 14ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
- 15ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
- 16ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
- 17ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
Cross references
- 2 Chronicles 15:2 2 ಪೂರ್ವಕಾಲವೃತ್ತಾಂತ 15:2ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು;
- 1 Corinthians 8:11–12 1 ಕೊರಿಂಥದವರಿಗೆ 8:11–12ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ? ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
- 2 Chronicles 7:19–22 2 ಪೂರ್ವಕಾಲವೃತ್ತಾಂತ 7:19–22ಆದರೆ ನೀವು ಹಿಂದಿರುಗಿ ನಾನು ನಿಮ್ಮ ಮುಂದೆ ಇಟ್ಟ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ತೊರೆದು ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಅವರಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ನಿರ್ಮೂಲ ಮಾಡುವೆನು. ಇದಲ್ಲದೆ ನನ್ನ ಹೆಸರಿಗೋಸ್ಕರ ನಾನು ಪರಿಶುದ್ಧ ಮಾಡಿದ ಈ ಆಲ ಯವನ್ನು ನನ್ನ ಸಮ್ಮುಖದಿಂದ ತಳ್ಳಿ ಅದನ್ನು ಸಮಸ್ತ ಜನಗಳಲ್ಲಿ ಗಾದೆಯಾಗಿಯೂ ಹಾಸ್ಯವಾಗಿಯೂ ಮಾಡುವೆನು. ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು. ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
- Matthew 18:7 ಮತ್ತಾಯನು 18:7ತೊಡಕುಗಳ ನಿಮಿತ್ತವಾಗಿ ಲೋಕಕ್ಕೆ ಅಯ್ಯೋ! ಯಾಕಂದರೆ ತೊಡಕುಗಳು ಬಂದೇ ಬರುವವು; ಆದರೆ ಯಾವ ಮನುಷ್ಯನಿಂದ ತೊಡಕು ಬರುವದೋ ಅವನಿಗೆ ಅಯ್ಯೋ!
- Romans 14:20–21 ರೋಮಾಪುರದವರಿಗೆ 14:20–21ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ. ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
- Romans 14:15 ರೋಮಾಪುರದವರಿಗೆ 14:15ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.
- Deuteronomy 28:15–68 ಧರ್ಮೋಪದೇಶಕಾಂಡ 28:15–68ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Deuteronomy 30:17–19 ಧರ್ಮೋಪದೇಶಕಾಂಡ 30:17–19ಆದರೆ ನಿನ್ನ ಹೃದಯವು ತಿರಿಗಿಬಿದ್ದು, ನೀನು ಕೇಳದೆಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆಯಲ್ಪಟ್ಟು ಅಡ್ಡಬಿದ್ದು ಅವುಗಳಿಗೆ ಸೇವೆಮಾಡಿದರೆ ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ. ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
- Numbers 14:30–35 ಅರಣ್ಯಕಾಂಡ 14:30–35ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು. ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- Leviticus 26:14–18 ಯಾಜಕಕಾಂಡ 26:14–18ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Joshua 22:16–18 ಯೆಹೋಶುವ 22:16–18ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು? ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ. ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
- Jeremiah 38:23 ಯೆರೆಮೀಯ 38:23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.