Numbers · chapter 32 · verse 19
Numbers 32:19 in Kannada
ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
Naavu yordan nadiya aacheyalli avara sangada svaastyavannu takkolluvadilla. Yaakandare namma svaastyavu namage yordan nadiya eecheyalli moodana kadeyalli bantu endu helidaru.
Numbers 32:19 in English
- King James Version (KJV)
- For we will not inherit with them on yonder side Jordan, or forward; because our inheritance is fallen to us on this side Jordan eastward.
- World English Bible (WEB)
- For we will not inherit with them on the other side of the Jordan and beyond, because our inheritance has come to us on this side of the Jordan eastward.”
- American Standard Version (ASV)
- For we will not inherit with them on the other side of the Jordan, and forward; because our inheritance is fallen to us on this side of the Jordan eastward.
- Bible in Basic English (BBE)
- For we will not have our heritage with them on the other side of Jordan and forward; because our heritage has come to us on this side of Jordan to the east.
- Darby Translation (DBY)
- For we will not inherit with them on yonder side the Jordan, and further, because our inheritance is fallen to us on this side the Jordan eastward.
- Webster's Bible (WBS)
- For we will not inherit with them on the other side of Jordan, or forward; because our inheritance hath fallen to us on this side of Jordan eastward.
- Young's Literal Translation (YLT)
- for we do not inherit with them beyond the Jordan and yonder, for our inheritance hath come unto us beyond the Jordan at the [sun] -rising.'
Read in context
- 17ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
- 18ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
- 19ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸ್ವಾಸ್ತ್ಯವನ್ನು ತಕ್ಕೊಳ್ಳುವದಿಲ್ಲ. ಯಾಕಂದರೆ ನಮ್ಮ ಸ್ವಾಸ್ತ್ಯವು ನಮಗೆ ಯೊರ್ದನ್ ನದಿಯ ಈಚೆಯಲ್ಲಿ ಮೂಡಣ ಕಡೆಯಲ್ಲಿ ಬಂತು ಎಂದು ಹೇಳಿದರು.
- 20ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
- 21ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ
Cross references
- Joshua 13:8 ಯೆಹೋಶುವ 13:8ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
- 1 Chronicles 5:25–26 1 ಪೂರ್ವಕಾಲವೃತ್ತಾಂತ 5:25–26ಆದರೆ ಅವರು ತಮ್ಮ ಪಿತೃಗಳ ದೇವರಿಗೆ ವಿರೋಧವಾಗಿ ಅಪರಾಧಮಾಡಿ ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ. ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- Proverbs 20:21 ಜ್ಞಾನೋಕ್ತಿಗಳು 20:21ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
- Numbers 34:15 ಅರಣ್ಯಕಾಂಡ 34:15ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
- Genesis 14:12 ಆದಿಕಾಂಡ 14:12ಸೊದೋ ಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗನಾದ ಲೋಟನನ್ನೂ ಅವನ ಸಂಪತ್ತನ್ನೂ ತೆಗೆದುಕೊಂಡು ಹೋದರು.
- 2 Kings 15:29 2 ಅರಸುಗಳು 15:29ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
- 2 Kings 10:32–33 2 ಅರಸುಗಳು 10:32–33ಆ ದಿವಸಗಳಲ್ಲಿ ಕರ್ತನು ಇಸ್ರಾಯೇಲನ್ನು ಕಡಿಮೆ ಮಾಡಲು ಆರಂಭಿಸಿದನು. ಯಾಕಂದರೆ ಹಜಾಯೇ ಲನು ಇಸ್ರಾಯೇಲಿನ ಎಲ್ಲಾ ಮೇರೆಗಳಲ್ಲಿ ಅವರನ್ನು ಸಂಹರಿಸಿದನು. ಮೂಡಣದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ ರೂಬೆನ್ಯರೂ ವಾಸ ವಾಗಿದ್ದ ಗಿಲ್ಯಾದಿನ ಎಲ್ಲಾ ದೇಶವನ್ನೂ ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲು ಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಶಾನ್ ಸಂಹರಿಸಿದನು.
- Numbers 32:32–33 ಅರಣ್ಯಕಾಂಡ 32:32–33ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು. ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
- Joshua 12:1–6 ಯೆಹೋಶುವ 12:1–6ಯೊರ್ದನಿಗೆ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೂ ಮೂಡಣ ಬೈಲಿನ ಎಲ್ಲಾದರಲ್ಲಿಯೂ ಇಸ್ರಾಯೇಲ್ ಮಕ್ಕಳು ಅವರನ್ನು ಹೊಡೆದು ಸ್ವಾಧೀನ ಪಡಿಸಿಕೊಂಡ ದೇಶಗಳ ಅರಸರು ಯಾರಂದರೆ: ಅರ್ನೋನ್ ನದಿಯ ಮಧ್ಯಭಾಗ, ದಡದ ಬಳಿಯಲ್ಲಿ ಇರುವ ಅರೋಯೇರಿ ನಿಂದಲೂ ಅರ್ಧ ಗಿಲ್ಯಾದಿನಿಂದಲೂ ಅಮ್ಮೋನನ ಮಕ್ಕಳ ಮೇರೆಯಾದ ಯಬ್ಬೋಕ್ ನದಿಯ ವರೆಗೆ ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ ಅಷ್ಟರೋತಿನಲ್ಲಿಯೂ ಎದ್ರೈಯಲ್ಲಿ ವಾಸಮಾಡಿ ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ. ಇವರನ್ನು ಕರ್ತನ ಸೇವಕನಾದ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಹೊಡೆದು ಬಿಟ್ಟು ಅವರ ದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
- Genesis 13:10–12 ಆದಿಕಾಂಡ 13:10–12ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು. ತರುವಾಯ ಲೋಟನು ಯೊರ್ದನಿನ ಮೈದಾನ ವನ್ನೆಲ್ಲಾ ತನಗಾಗಿ ಆರಿಸಿಕೊಂಡನು; ಹೀಗೆ ಲೋಟನು ಮೂಡಣಕ್ಕೆ ಹೊರಟು ಹೋದದ್ದರಿಂದ ಅವರು ಒಬ್ಬರಿಂದೊಬ್ಬರು ಪ್ರತ್ಯೇಕಿಸಲ್ಪಟ್ಟರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಸೊದೋಮಿನ ಬಳಿಯಲ್ಲಿ ಗುಡಾರಗಳನ್ನು ಹಾಕಿ ಕೊಂಡು ಮೈದಾನದ ಪಟ್ಟಣಗಳಲ್ಲಿ ವಾಸಿಸಿದನು.
- Joshua 1:14–15 ಯೆಹೋಶುವ 1:14–15ಹೇಗಂದರೆ ನಿಮ್ಮ ಹೆಂಡತಿಯರೂ ಚಿಕ್ಕವರೂ ಪಶುಗಳೂ ಮೋಶೆ ನಿಮಗೆ ಕೊಟ್ಟ ಯೊರ್ದನಿಗೆ ಈಚೆ ಇರುವ ದೇಶದಲ್ಲೇ ಇರಲಿ; ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ನಿಮ್ಮ ಸಹೋದರರ ಮುಂದೆ ಯುದ್ಧಸನ್ನದ್ಧರಾಗಿ ನಡೆದುಹೋಗಿ ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.