Numbers · chapter 32 · verse 22
Numbers 32:22 in Kannada
ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
Deshavu kartana munde vashavaada taruvaaya neevu kartanindaloo israa yelyarindaloo niraparaadhigalaagiddu tirugikolla bahudu; ee deshavu kartana munde nimma svaastyakkaaguvadu.
Numbers 32:22 in English
- King James Version (KJV)
- And the land be subdued before the LORD: then afterward ye shall return, and be guiltless before the LORD, and before Israel; and this land shall be your possession before the LORD.
- World English Bible (WEB)
- and the land is subdued before the LORD; then afterward you shall return, and be clear of obligation to the LORD and to Israel. Then this land shall be your possession before the LORD.
- American Standard Version (ASV)
- and the land is subdued before Jehovah; then afterward ye shall return, and be guiltless towards Jehovah, and towards Israel; and this land shall be unto you for a possession before Jehovah.
- Bible in Basic English (BBE)
- And the land is under the rule of the Lord: then after that you may come back, having done no wrong to the Lord and to Israel; and this land will be yours for your heritage before the Lord.
- Darby Translation (DBY)
- and the land is subdued before Jehovah, and afterwards ye return, ye shall be guiltless toward Jehovah and toward Israel, and this land shall be your possession before Jehovah.
- Webster's Bible (WBS)
- And the land shall be subdued before the LORD: then afterward ye shall return, and be guiltless before the LORD, and before Israel; and this land shall be your possession before the LORD.
- Young's Literal Translation (YLT)
- and the land hath been subdued before Jehovah — then afterwards ye do turn back, and have been acquitted by Jehovah, and by Israel; and this land hath been to you for a possession before Jehovah.
Read in context
- 20ಆಗ ಮೋಶೆಯು ಇವರಿಗೆ--ನೀವು ಈ ಕಾರ್ಯ ವನ್ನು ಮಾಡಿದರೆ ನೀವು ಕರ್ತನ ಮುಂದೆ ಯುದ್ದಕ್ಕೆ ಸಿದ್ಧವಾಗಿದ್ದರೆ
- 21ನಿಮ್ಮಲ್ಲಿ ಯುದ್ಧಕ್ಕೆ ಸಿದ್ಧವಾದವರೆಲ್ಲರು ಕರ್ತನು ತನ್ನ ಶತ್ರುಗಳನ್ನು ತನ್ನ ಸನ್ನಿಧಿಯಿಂದ ಹೊರಡಿಸುವ ವರೆಗೆ ಕರ್ತನ ಮುಂದೆ ಯೊರ್ದನ್ ನದಿಯನ್ನು ದಾಟಿದರೆ
- 22ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
- 23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
- 24ನಿಮ್ಮ ಮಕ್ಕಳಿ ಗೋಸ್ಕರ ಪಟ್ಟಣಗಳನ್ನೂ ನಿಮ್ಮ ಕುರಿಗಳಿಗೋಸ್ಕರ ಹಟ್ಟಿಗಳನ್ನೂ ಕಟ್ಟಿ ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ ಎಂದು ಹೇಳಿದನು.
Cross references
- Joshua 22:4 ಯೆಹೋಶುವ 22:4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
- Joshua 22:9 ಯೆಹೋಶುವ 22:9ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
- Deuteronomy 3:20 ಧರ್ಮೋಪದೇಶಕಾಂಡ 3:20ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
- Joshua 13:8 ಯೆಹೋಶುವ 13:8ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
- Joshua 1:15 ಯೆಹೋಶುವ 1:15ಕರ್ತನು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿ ಪಡಿಸಿ ಅವರು ನಿಮ್ಮ ದೇವರಾದ ಕರ್ತನು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಿರಿ; ತರುವಾಯ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸ್ವಾಸ್ತ್ಯವಾದ ದೇಶಕ್ಕೆ ತಿರಿಗಿ ಬಂದು ಅದನ್ನು ಅನುಭವಿಸಿರಿ ಅಂದನು.
- Deuteronomy 3:12–18 ಧರ್ಮೋಪದೇಶಕಾಂಡ 3:12–18ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು. ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು. ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಗಿಲ್ಯಾದ್ ಮೊದಲುಗೊಂಡು ಅರ್ನೋನ್ ನದಿಯ ವರೆಗೆ ಕೊಟ್ಟೆನು. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು. ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
- Joshua 13:29–32 ಯೆಹೋಶುವ 13:29–32ಇದಲ್ಲದೆ ಮನೆಸ್ಸೆಯ ಮಕ್ಕಳ ಅರ್ಧಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಸ್ವಾಸ್ತ್ಯವನ್ನು ಕೊಟ್ಟನು. ಅದು ಯಾವದಂದರೆ, ಮಹನಯಾಮಿ ನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ ಬಾಷಾನಿನಲ್ಲಿರುವ ಯಾಯಾರಿನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು. ಗಿಲ್ಯಾದಿ ನಲ್ಲಿ ಅರ್ಧವನ್ನೂ ಬಾಷಾನಿನಲ್ಲಿ ಅಷ್ಟರೋತ್, ಎದ್ರೈ ಎಂಬ ಓಗನ ರಾಜ್ಯದ ಪಟ್ಟಣಗಳನ್ನೂ ಮನಸ್ಸೆಯ ಮಗನಾದ ಮಾಕೀರನ ಮಕ್ಕಳಿಗೆ, ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನಕ್ಕೆ ಕೊಟ್ಟನು. ಸೂರ್ಯೋದಯದ ದಿಕ್ಕಿನಲ್ಲಿ ಯೆರಿಕೋವಿನ ಬಳಿಯಲ್ಲಿ ಹೀಗೆಯೇ ಮೋಶೆಯು ಯೊರ್ದನಿಗೆ ಆಚೆಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಬಾಧ್ಯತೆ ಯಾಗಿ ಹಂಚಿದ ದೇಶಗಳು ಇವೇ.ಆದರೆ ಲೇವಿ ಯನ ಗೋತ್ರಕ್ಕೆ ಮೋಶೆಯು ಯಾವ ಬಾಧ್ಯತೆಯನ್ನು ಕೊಡಲಿಲ್ಲ. ಇಸ್ರಾಯೇಲ್ ದೇವರಾದ ಕರ್ತನು ಅವರಿಗೆ ಹೇಳಿದ ಪ್ರಕಾರ ತಾನೇ ಅವರ ಬಾಧ್ಯತೆ.
- 2 Samuel 3:28 2 ಸಮುವೇಲನು 3:28ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ.
- Psalm 78:55 ಕೀರ್ತನೆಗಳು 78:55ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು.
- Joshua 2:19 ಯೆಹೋಶುವ 2:19ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.
- Joshua 11:23 ಯೆಹೋಶುವ 11:23ಹೀಗೆಯೇ ಯೆಹೋಶುವನು ದೇಶವನ್ನೆಲ್ಲಾ ಕರ್ತನು ಮೋಶೆಗೆ ಹೇಳಿದ ಪ್ರಕಾರವೇ ಹಿಡಿದು ಅದನ್ನು ಇಸ್ರಾಯೇಲಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿ ಕೊಂಡಿತು.
- Joshua 10:42 ಯೆಹೋಶುವ 10:42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.