Numbers · chapter 33 · verse 52
Numbers 33:52 in Kannada
ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
Neevu nimma munde aa deshada samasta nivaasigalannu horadisi avara chitragalannoo avara kettida vigrahagalannoo naashamaadi avara samasta medugalannoo haalumaadabeku.
Numbers 33:52 in English
- King James Version (KJV)
- Then ye shall drive out all the inhabitants of the land from before you, and destroy all their pictures, and destroy all their molten images, and quite pluck down all their high places:
- World English Bible (WEB)
- then you shall drive out all the inhabitants of the land from before you, destroy all their stone idols, destroy all their molten images, and demolish all their high places.
- American Standard Version (ASV)
- then ye shall drive out all the inhabitants of the land from before you, and destroy all their figured [stones], and destroy all their molten images, and demolish all their high places:
- Bible in Basic English (BBE)
- See that all the people of the land are forced out from before you, and put to destruction all their pictured stones, and all their metal images, and all their high places:
- Darby Translation (DBY)
- then ye shall dispossess all the inhabitants of the land from before you, and ye shall destroy all their figured images, and all their molten images shall ye destroy, and all their high places shall ye lay waste;
- Webster's Bible (WBS)
- Then ye shall drive out all the inhabitants of the land from before you, and destroy all their pictures, and destroy all their molten images, and quite demolish all their high places:
- Young's Literal Translation (YLT)
- then ye have dispossessed all the inhabitants of the land from before you, and have destroyed all their imagery, yea, all their molten images ye destroy, and all their high places ye lay waste,
Read in context
- 50ಕರ್ತನು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- 51ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಯೊರ್ದನನ್ನು ದಾಟಿ ಕಾನಾನ್ ದೇಶಕ್ಕೆ ಬರುವಾಗ
- 52ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
- 53ನೀವು ಆ ದೇಶವನ್ನು ತಕ್ಕೊಂಡು ಅದರಲ್ಲಿ ವಾಸಮಾಡಿರಿ; ಯಾಕಂದರೆ ಅದನ್ನು ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
- 54ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟಿನಿಂದ ಸ್ವಾಧೀನಮಾಡಿ ಹಂಚಿಕೊಳ್ಳಬೇಕು; ಹೆಚ್ಚಾದವರಿಗೆ ಸ್ವಾಸ್ತ್ಯವನ್ನು ಹೆಚ್ಚಿಸಿ ಕಡಿಮೆಯಾದ ವರಿಗೆ ಸ್ವಾಸ್ತ್ಯವನ್ನು ಕಡಿಮೆಮಾಡಬೇಕು; ಒಬ್ಬೊಬ್ಬ ನಿಗೆ ಚೀಟು ಎಲ್ಲಿ ಬೀಳುವದೋ ಅದೇ ಅವನಿಗಾಗ ಬೇಕು; ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
Cross references
- Exodus 23:24 ವಿಮೋಚನಕಾಂಡ 23:24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
- Leviticus 26:1 ಯಾಜಕಕಾಂಡ 26:1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
- Deuteronomy 20:16–18 ಧರ್ಮೋಪದೇಶಕಾಂಡ 20:16–18ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಈ ಜನಗಳ ಪಟ್ಟಣಗಳಲ್ಲಿ ಮಾತ್ರ ಶ್ವಾಸ ವುಳ್ಳ ಯಾವದನ್ನಾದರೂ ಉಳಿಸಬಾರದು. ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಅವರು ತಮ್ಮ ದೇವರುಗಳಿಗೆ ಮಾಡಿದ ಎಲ್ಲಾ ಅಸಹ್ಯಗಳನ್ನು ಮಾಡುವದಕ್ಕೆ ನಿಮಗೆ ಕಲಿಸದ ಹಾಗೆಯೂ ನೀವು ನಿಮ್ಮ ದೇವರಾದ ಕರ್ತನಿಗೆ ಪಾಪ ಮಾಡದ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಹಾಗೆ ನಿರ್ಮೂಲ ಮಾಡಬೇಕು.
- Deuteronomy 7:2–5 ಧರ್ಮೋಪದೇಶಕಾಂಡ 7:2–5ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು. ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- Judges 2:2 ನ್ಯಾಯಸ್ಥಾಪಕರು 2:2ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ ಅವರ ಬಲಿಪೀಠಗಳನ್ನು ಕೆಡವಿ ಬಿಡಿರಿ ಎಂದು ಹೇಳಿದೆನು. ಆದರೆ ನೀವು ನನ್ನ ಮಾತಿಗೆ ವಿಧೇಯರಾಗಲಿಲ್ಲ; ಹೀಗೆ ಯಾಕೆ ಮಾಡಿ ದಿರಿ?
- Deuteronomy 12:2–3 ಧರ್ಮೋಪದೇಶಕಾಂಡ 12:2–3ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- Joshua 23:7 ಯೆಹೋಶುವ 23:7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
- Exodus 34:12–17 ವಿಮೋಚನಕಾಂಡ 34:12–17ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು. ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು. ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು. ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು. ನೀನು ಎರಕಹೊಯ್ದ ವಿಗ್ರಹಗಳನ್ನು ಮಾಡಿ ಕೊಳ್ಳಬಾರದು.
- Exodus 23:31–33 ವಿಮೋಚನಕಾಂಡ 23:31–33ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದ ವರೆಗೂ ಅರಣ್ಯದಿಂದ ನದಿಯ ವರೆಗೂ ನಿಮ್ಮ ಮೇರೆ ಗಳನ್ನು ನೇಮಿಸುವೆನು; ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿ ನಿಂದ ಓಡಿಸಿಬಿಡುವಿರಿ. ಅವರ ಸಂಗಡಲೂ ಅವರ ದೇವರುಗಳ ಸಂಗಡಲೂ ಯಾವ ಒಡಂಬಡಿಕೆಯನ್ನೂ ಮಾಡಬಾರದು.ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು. ನನಗೆ ವಿರೋಧವಾಗಿ ನೀವು ಪಾಪಮಾಡದಂತೆ ಅವರು ನಿಮ್ಮ ದೇಶದಲ್ಲಿ ವಾಸವಾ ಗಿರಬಾರದು. ನೀವು ಅವರ ದೇವರುಗಳನ್ನು ಸೇವಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವದು.
- Psalm 106:34–36 ಕೀರ್ತನೆಗಳು 106:34–36ಕರ್ತನು ಅವರಿಗೆ ಹೇಳಿದ ಜನಗಳನ್ನು ಅವರು ನಾಶಮಾಡದೆ ಹೋದರು. ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು. ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
- Joshua 11:11–12 ಯೆಹೋಶುವ 11:11–12ಅವರು ಶ್ವಾಸವುಳ್ಳ ಒಂದನ್ನಾದರೂ ಉಳಿಸದೆ ಅದರಲ್ಲಿರುವ ಪ್ರಾಣಗಳನ್ನೆಲ್ಲಾ ಕತ್ತಿಯಿಂದ ಹೊಡೆದು ಸಂಪೂರ್ಣವಾಗಿ ನಾಶಮಾಡಿ ಹಾಚೋರನ್ನು ಬೆಂಕಿ ಯಿಂದ ಸುಟ್ಟುಬಿಟ್ಟರು. ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ ಅವುಗಳ ಸಮಸ್ತ ಅರಸುಗಳನ್ನೂ ಹಿಡಿದು ಕತ್ತಿಯಿಂದ ಹೊಡೆದು ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ ಹಾಗೆಯೇ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.
- Deuteronomy 12:30–31 ಧರ್ಮೋಪದೇಶಕಾಂಡ 12:30–31ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.