Numbers · chapter 35 · verse 10
Numbers 35:10 in Kannada
ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
Neenu israayel makkala sangada maatanaadi avarige helabekaadaddenandare--neevu yorda nannu daati kaanaan deshakke bandaaga
Numbers 35:10 in English
- King James Version (KJV)
- Speak unto the children of Israel, and say unto them, When ye be come over Jordan into the land of Canaan;
- World English Bible (WEB)
- “Speak to the children of Israel, and tell them, ‘When you pass over the Jordan into the land of Canaan,
- American Standard Version (ASV)
- Speak unto the children of Israel, and say unto them, When ye pass over the Jordan into the land of Canaan,
- Bible in Basic English (BBE)
- Say to the children of Israel, when you have gone over Jordan into the land of Canaan;
- Darby Translation (DBY)
- Speak unto the children of Israel, and say unto them, When ye pass over the Jordan into the land of Canaan,
- Webster's Bible (WBS)
- Speak to the children of Israel, and say to them, When ye have passed over Jordan into the land of Canaan;
- Young's Literal Translation (YLT)
- 'Speak unto the sons of Israel, and thou hast said unto them, When ye are passing over the Jordan to the land of Canaan,
Read in context
- 8ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
- 9ಕರ್ತನು ಮೋಶೆಯ ಸಂಗಡ ಮಾತನಾಡಿ--
- 10ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
- 11ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
- 12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
Cross references
- Joshua 20:2–6 ಯೆಹೋಶುವ 20:2–6ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ. ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು. ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು. ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು. ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.
- Deuteronomy 19:1–2 ಧರ್ಮೋಪದೇಶಕಾಂಡ 19:1–2ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
- Leviticus 25:2 ಯಾಜಕಕಾಂಡ 25:2ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.
- Deuteronomy 12:9 ಧರ್ಮೋಪದೇಶಕಾಂಡ 12:9ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ವಿಶ್ರಾಂತಿಗೂ ಸ್ವಾಸ್ತ್ಯಕ್ಕೂ ನೀವು ಇನ್ನೂ ಸೇರಲಿಲ್ಲ;
- Leviticus 14:34 ಯಾಜಕಕಾಂಡ 14:34ನಾನು ನಿಮಗೆ ಸ್ವಾಸ್ತ್ಯವಾಗಿ ಕೊಡುವದಕ್ಕಿರುವ ಕಾನಾನ್ ದೇಶದೊ ಳಗೆ ನೀವು ಬಂದಾಗ ನಿಮಗೆ ಸ್ವಾಸ್ತ್ಯವಾಗಿ ಕೊಡುವ ಮನೆಯಲ್ಲಿ ಕುಷ್ಠವನ್ನು ಬರಮಾಡಿದಾಗ
- Numbers 34:2 ಅರಣ್ಯಕಾಂಡ 34:2ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.