Numbers · chapter 35 · verse 11
Numbers 35:11 in Kannada
ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
Kaitappi obbanannu konda yaavanaadaroo allige odi hoguva haage nimage aashrayakkaagi pattanagalannu nemisabeku.
Numbers 35:11 in English
- King James Version (KJV)
- Then ye shall appoint you cities to be cities of refuge for you; that the slayer may flee thither, which killeth any person at unawares.
- World English Bible (WEB)
- then you shall appoint for yourselves cities to be cities of refuge for you, that the man slayer who kills any person unwittingly may flee there.
- American Standard Version (ASV)
- then ye shall appoint you cities to be cities of refuge for you, that the manslayer that killeth any person unwittingly may flee thither.
- Bible in Basic English (BBE)
- Then let certain towns be marked out as safe places to which anyone who takes the life of another in error may go in flight.
- Darby Translation (DBY)
- then ye shall appoint for yourselves cities: cities of refuge shall they be for you; that a manslayer may flee thither, who without intent smiteth a person mortally.
- Webster's Bible (WBS)
- Then ye shall appoint for you cities to be cities of refuge for you; that the slayer may flee thither, who killeth any person at unawares.
- Young's Literal Translation (YLT)
- and have prepared to yourselves cities — cities of refuge they are to you — then fled thither hath a man-slayer, smiting a person unawares,
Read in context
- 9ಕರ್ತನು ಮೋಶೆಯ ಸಂಗಡ ಮಾತನಾಡಿ--
- 10ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
- 11ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
- 12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
- 13ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
Cross references
- Exodus 21:13 ವಿಮೋಚನಕಾಂಡ 21:13ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು.
- Numbers 35:6 ಅರಣ್ಯಕಾಂಡ 35:6ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯಹತ್ಯಮಾಡಿದ ವನು ಓಡುವಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು; ಅವುಗಳ ಹೊರತು ನೀವು ನಾಲ್ವತ್ತೆರಡು ಪಟ್ಟಣಗಳನ್ನು ಕೊಡಬೇಕು.
- Joshua 20:2 ಯೆಹೋಶುವ 20:2ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
- Deuteronomy 19:1–13 ಧರ್ಮೋಪದೇಶಕಾಂಡ 19:1–13ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು. ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ. ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ, ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು. ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು. ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು. ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು. ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- Deuteronomy 4:42 ಧರ್ಮೋಪದೇಶಕಾಂಡ 4:42ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
- Numbers 35:22–25 ಅರಣ್ಯಕಾಂಡ 35:22–25ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು. ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ.