Numbers · chapter 35 · verse 12
Numbers 35:12 in Kannada
ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
Kondavanu sabheya munde nyaayateerpige nilluva varegoo saayada haage avu nimage sedu teerisuvavana deseyinda aashrayada pattanagalaagirabeku.
Numbers 35:12 in English
- King James Version (KJV)
- And they shall be unto you cities for refuge from the avenger; that the manslayer die not, until he stand before the congregation in judgment.
- World English Bible (WEB)
- The cities shall be for your refuge from the avenger, that the man slayer not die until he stands before the congregation for judgment.
- American Standard Version (ASV)
- And the cities shall be unto you for refuge from the avenger, that the manslayer die not, until he stand before the congregation for judgment.
- Bible in Basic English (BBE)
- In these towns you may be safe from him who has the right of punishment; so that death may not overtake the taker of life till he has been judged by the meeting of the people.
- Darby Translation (DBY)
- And ye shall have these cities for refuge from the avenger; that the manslayer die not, until he have stood before the assembly in judgment.
- Webster's Bible (WBS)
- And they shall be to you cities for refuge from the avenger; that the man-slayer may not die, until he stands before the congregation in judgment.
- Young's Literal Translation (YLT)
- and the cities have been to you for a refuge from the redeemer, and the man-slayer doth not die till his standing before the company for judgment.
Read in context
- 10ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
- 11ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.
- 12ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
- 13ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.
- 14ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನೂ ಕಾನಾನ್ ದೇಶದಲ್ಲಿ ಮೂರು ಪಟ್ಟಣ ಗಳನ್ನೂ ಆಶ್ರಯದ ಪಟ್ಟಣಗಳಾಗಿ ಕೊಡಬೇಕು.
Cross references
- Deuteronomy 19:6 ಧರ್ಮೋಪದೇಶಕಾಂಡ 19:6ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
- Joshua 20:3–6 ಯೆಹೋಶುವ 20:3–6ಅವು ನಿಮಗೆ ರಕ್ತದ ಸೇಡು ತೀರಿಸುವ ವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರುವವು. ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತು ಆ ಪಟ್ಟಣದ ಹಿರಿಯರು ಕೇಳುವ ಹಾಗೆ ತನ್ನ ಮಾತುಗಳನ್ನು ಹೇಳುವಾಗ ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಂಡು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಬೇಕು. ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು. ಇದಲ್ಲದೆ ಅವನು ನ್ಯಾಯವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆಗಿನ ಪ್ರಧಾನ ಯಾಜಕನು ಮರಣ ಹೊಂದುವ ವರೆಗೂ ಆ ಪಟ್ಟಣದಲ್ಲೇ ವಾಸವಾಗಿರ ಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿಹೋದ ತನ್ನ ಪಟ್ಟಣಕ್ಕೂ ಮನೆಗೂ ತಿರುಗಿ ಬರಬಹುದು.
- Joshua 20:9 ಯೆಹೋಶುವ 20:9ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.
- 2 Samuel 14:7 2 ಸಮುವೇಲನು 14:7ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು.
- Numbers 35:24–27 ಅರಣ್ಯಕಾಂಡ 35:24–27ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು. ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ. ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ.
- Deuteronomy 19:11–12 ಧರ್ಮೋಪದೇಶಕಾಂಡ 19:11–12ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
- Numbers 35:19 ಅರಣ್ಯಕಾಂಡ 35:19ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು.