Numbers · chapter 35 · verse 2
Numbers 35:2 in Kannada
ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
Israayel makkalige aajnyaapisabekaadadde nandare--avaru tamma svaastyada bhaagadinda levi yarige vaasamaaduvadakke pattanagalannu koda beku; pattanagala suttamuttaliruva upanagara galannu neevu leviyarige kodabeku.
Numbers 35:2 in English
- King James Version (KJV)
- Command the children of Israel, that they give unto the Levites of the inheritance of their possession cities to dwell in; and ye shall give [also] unto the Levites suburbs for the cities round about them.
- World English Bible (WEB)
- “Command the children of Israel to give to the Levites cities to dwell in out of their inheritance. You shall give pasture lands for the cities around them to the Levites.
- American Standard Version (ASV)
- Command the children of Israel, that they give unto the Levites of the inheritance of their possession cities to dwell in; and suburbs for the cities round about them shall ye give unto the Levites.
- Bible in Basic English (BBE)
- Give orders to the children of Israel to give to the Levites, from the heritage which is theirs, towns for themselves, with land on the outskirts of the towns.
- Darby Translation (DBY)
- Command the children of Israel, that of the inheritance of their possession they give unto the Levites cities to dwell in; and a suburb for the cities round about them shall ye give unto the Levites.
- Webster's Bible (WBS)
- Command the children of Israel, that they give to the Levites of the inheritance of their possession cities to dwell in; and ye shall give [also] to the Levites suburbs for the cities around them.
- Young's Literal Translation (YLT)
- 'Command the sons of Israel, and they have given to the Levites of the inheritance of their possession cities to inhabit; also a suburb for the cities round about them ye do give to the Levites.
Read in context
- 1ಕರ್ತನು ಯೆರಿಕೋವಿಗೆದುರಾಗಿ ಯೊರ್ದ ನಿನ ಬಳಿಯಲ್ಲಿರುವ ಮೋವಾಬಿನ ಬೈಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ--
- 2ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
- 3ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
- 4ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.
Cross references
- Joshua 14:3–4 ಯೆಹೋಶುವ 14:3–4ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು.
- Ezekiel 48:8 ಯೆಹೆಜ್ಕೇಲನು 48:8ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ಆ ಬೇರೆ ಪಾಲುಗಳಲ್ಲಿ ಒಂದರ ಹಾಗೆ ಉದ್ದವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯ ವರೆಗೂ ಇರಬೇಕು. ಅದರ ಮಧ್ಯದಲ್ಲಿ ಪರಿಶುದ್ಧ ಸ್ಥಳವೂ ಇರಬೇಕು.
- Ezekiel 45:1–8 ಯೆಹೆಜ್ಕೇಲನು 45:1–8ಇದಲ್ಲದೆ ನೀವು ದೇಶವನ್ನು ಚೀಟುಹಾಕಿಸ್ವಾಸ್ತ್ಯವಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಕರ್ತನಿಗೆ ಕಾಣಿಕೆಯಾಗಿ ಕೊಡಬೇಕು; ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ, ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ. ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು. ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು. ದೇಶದ ಪರಿಶುದ್ಧ ಭಾಗವು ಕರ್ತನಿಗೆ ಸೇವೆ ಮಾಡಲು ಸವಿಾಪಿ ಸುವಂತ, ಪರಿಶುದ್ಧ ಸ್ಥಳದ ಸೇವಕರಾದಂತ ಯಾಜಕರ ದಾಗಿರಬೇಕು; ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು. ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆಮಾಡುವ ಲೇವಿಯರಿಗೆ ತಮಗೆ ಸ್ವಾಸ್ತ್ಯವಾಗಿ ಇಪ್ಪತ್ತು ಕೊಠಡಿ ಗಳಿಗಾಗಿ ಇರಬೇಕು. ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು, ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು. ಕಾಣಿಕೆಯಾದ ಪರಿಶುದ್ಧ ಭಾಗಕ್ಕೂ ನಗರದ ಸ್ವಾಸ್ತ್ಯಕ್ಕೂ ಈ ಕಡೆಯಲ್ಲಿಯೂ ಆ ಕಡೆಯಲ್ಲಿಯೂ ಕಾಣಿಕೆಯಾದ ಪರಿಶುದ್ಧ ಭಾಗದ ಮುಂದೆಯೂ ಪಟ್ಟಣದ ಸ್ವಾಸ್ತ್ಯದ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು; ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಇರಬೇಕು. ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸ್ವಾಸ್ತ್ಯವಾಗಿರುವದು; ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವಪಡಿಸು ವದೇ ಇಲ್ಲ; ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲ್ಪಡುವದು.
- Leviticus 25:32–34 ಯಾಜಕಕಾಂಡ 25:32–34ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು. ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ. ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.
- 1 Corinthians 9:10–14 1 ಕೊರಿಂಥದವರಿಗೆ 9:10–14ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ? ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- Joshua 21:2–42 ಯೆಹೋಶುವ 21:2–42ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿ ದ್ದಾನೆ ಅಂದರು. ಹಾಗೆಯೇ ಇಸ್ರಾಯೇಲ್ ಮಕ್ಕಳು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಕರ್ತನ ಅಜ್ಞೆಯ ಪ್ರಕಾರ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೊಟ್ಟರು. ಅವು ಯಾವವೆಂದರೆ-- ಕೆಹಾತ್ಯರ ಗೋತ್ರಗಳಿಗೆ ಚೀಟು ಹಾಕಿದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರ ದಲ್ಲಿಯೂ ಬೆನ್ಯಾವಿಾನನ ಗೋತ್ರದಲ್ಲಿಯೂ ಹದಿ ಮೂರು ಪಟ್ಟಣಗಳು ದೊರಕಿದವು. ಕೆಹಾತನ ಉಳಿದ ಮಕ್ಕಳಿಗೆ ಎಫ್ರಾಯಾಮನ ಗೊತ್ರದಲ್ಲಿಯೂ ದಾನನ ಗೋತ್ರದಲ್ಲಿಯೂ ಮನಸ್ಸೆಯ ಅರ್ಧಗೋತ್ರದ ಲ್ಲಿಯೂ ಹತ್ತು ಪಟ್ಟಣಗಳೂ ದೊರಕಿದವು. ಗೆರ್ಷೋನ್ಯನ ಮಕ್ಕಳಿಗೆ ಚೀಟಿ ಹಾಕಿದಾಗ ಇಸ್ಸಾಕಾರನ ಗೋತ್ರಗಳ ಕುಟುಂಬಗಳಲ್ಲಿಯೂ ಆಶೇರನ ಗೋತ್ರದಲ್ಲಿಯೂ ನಫ್ತಾಲಿಯ ಗೋತ್ರ ದಲ್ಲಿಯೂ ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ದೊರ ಕಿದವು. ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು. ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು. ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು. ಆದರೆ ಆ ಪಟ್ಟಣದ ಹೊಲಗ ಳನ್ನೂ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೆ ಬಾಧ್ಯತೆಯಾಗಿ ಕೊಟ್ಟರು. ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು, ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ ಕಿಬ್ಚೈಮನ್ನೂ ಅದರ ಉಪನಗರಗಳನ್ನೂ; ಬೇತ್ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ; ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ. ಲೇವಿಯರ ಕುಟುಂಬಗಳಲ್ಲಿರುವ ಗೆರ್ಷೋನಿನ ಮಕ್ಕಳಿಗೆ ಮನಸ್ಸೆಯ ಅರ್ಧ ಗೋತ್ರದಲ್ಲಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿ ನಲ್ಲಿರುವ ಗೋಲಾನನ್ನೂ ಅದರ ಉಪನಗರಗಳನ್ನೂ ಬೆಯೆಷ್ಟೆರಾವನ್ನೂ ಅದರ ಉಪನಗರಗಳನ್ನೂ; ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ಇಸ್ಸಾಕಾರನ ಗೋತ್ರದಲ್ಲಿ ಕಿಷ್ಯೋನನ್ನೂ ಅದರ ಉಪ ನಗರಗಳನ್ನೂ ದಾಬೆರತನ್ನೂ ಅದರ ಉಪನಗರ ಗಳನ್ನೂ ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಆಶೇರನ ಗೋತ್ರದಲ್ಲಿ ಮಿಷಾಲನ್ನೂ ಅದರ ಉಪನಗರ ಗಳನ್ನೂ ಅಬ್ದೋನನ್ನೂ ಅದರ ಉಪನಗರಗಳನ್ನೂ ಹೆಲ್ಕಾತನ್ನೂ ಅದರ ಉಪನಗರಗಳನ್ನೂ ರೆಹೋ ಬನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ನಫ್ತಾಲಿಯ ಗೋತ್ರ ದಲ್ಲಿ ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಅದರ ಉಪನಗರ ಗಳನ್ನೂ ಹಮ್ಮೋತ್ದೋರನ್ನೂ ಅದರ ಉಪನಗರ ಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ; ಹೀಗೆ ಮೂರು ಪಟ್ಟಣಗಳನ್ನು ಕೊಟ್ಟರು. ಗೆರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ. ಉಳಿದ ಲೇವಿಯರಾದ ಮೆರಾರೀಯ ಮಕ್ಕಳ ಕುಟುಂಬಗಳಿಗೆ ಜೆಬುಲೂನನ ಗೋತ್ರದಲ್ಲಿ ಯೊಕ್ನೆ ಯಾಮನ್ನೂ ಆದರ ಉಪನಗರಗಳನ್ನೂ ಕರ್ತಾನನ್ನೂ ಅದರ ಉಪನಗರಗಳನ್ನೂ ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು. ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು. ಹೀಗೆಯೇ ಲೇವಿಯರ ಕುಟುಂಬಗಳಲ್ಲಿ ಉಳಿದಂಥ ಮೆರಾರೀಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಚೀಟಿನಿಂದ ದೊರೆತ ಪಟ್ಟಣಗಳೆಲ್ಲಾ ಹನ್ನೆರಡು ಪಟ್ಟಣಗಳೂ ಅವುಗಳ ಉಪನಗರಗಳೂ. ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದ ಮಧ್ಯದಲ್ಲಿ ಇರುವ ಲೇವಿಯರ ಎಲ್ಲಾ ಪಟ್ಟಣಗಳೂ ಅವುಗಳ ಉಪನಗರಗಳೂ ನಾಲ್ವತ್ತೆಂಟು ಪಟ್ಟಣಗಳು. ಈ ಪಟ್ಟಣಗಳಲ್ಲಿ ಪ್ರತಿಯೊಂದಕ್ಕೂ ಅದರದರ ಸುತ್ತಲೂ ಉಪನಗರಗಳು ಇದ್ದವು; ಪಟ್ಟಣಗಳಿಗೆಲ್ಲಾ ಹೀಗೆಯೇ ಇದ್ದವು.
- Ezekiel 48:22 ಯೆಹೆಜ್ಕೇಲನು 48:22ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು.
Original words (Hebrew)
- Command · H6680צָוָה tsâvâh
- children · H1121בֵּן bên
- Israel · H3478יִשְׂרָאֵל Yisrâʼêl
- give · H5414נָתַן nâthan
- Levites · H3881לֵוִיִּי Lêvîyîy
- inheritance · H5159נַחֲלָה nachălâh
- possession · H272אֲחֻזָּה ʼăchuzzâh
- cities · H5892עִיר ʻîyr
- in · H3427יָשַׁב yâshab
- give · H5414נָתַן nâthan
- Levites · H3881לֵוִיִּי Lêvîyîy
- suburbs · H4054מִגְרָשׁ migrâsh
- cities · H5892עִיר ʻîyr
- about · H5439סָבִיב çâbîyb